ಬಹಿರಂಗ
ಕರ್ನಾಟಕದ ಅಂಬೇಡ್ಕರ್ ಪ್ರೊ.ಬಿ. ಕೃಷ್ಣಪ್ಪ ಕುರಿತ ಬರಹ : ಮಿಸ್ ಮಾಡ್ದೆ ಓದಿ
ಜೂನ್ 9 : ಕರ್ನಾಟಕದ ಅಂಬೇಡ್ಕರ್.ಪ್ರೊ.ಬಿ. ಕೃಷ್ಣಪ್ಪ ಅವರ ಜನ್ಮದಿನದ ಶುಭಾಶಯಗಳು
ಪ್ರೊ. ಕೃಷ್ಣಪ್ಪ ಅವರ ಬದುಕು
ಇಂದಿನ ನಮ್ಮ ನಿಮ್ಮ ಬದುಕಿಗಿಂತ ತುಂಬಾ ದುಸ್ಥಿತಿಯಲ್ಲಿತ್ತು. ಅವರ ದುಸ್ಥಿತಿಯ ಒಂದರೆಡು ವಿಷಯಗಳನ್ನು ಪ್ರಸ್ತಾಪಿಸುವುದಾದರೆ.
ಅತ್ಯಂತ ಬಡತನದ ಕುಟುಂಬದಲ್ಲಿ ಹುಟ್ಟಿದ್ದ ಕೃಷ್ಣಪ್ಪ ಅವರಿಗೆ ಯಾವುದೇ ರೀತಿಯ ಸಾಮಾಜಿಕ ಮತ್ತು ಆರ್ಥಿಕ ಬಲವಿರಲಿಲ್ಲ. ಮೂರು ಜನ ತಂಗಿಯರು ಹಾಗೂ ಮೂರು ಜನ ಸೋದರಿಯರ ಕೂಲಿ ಕುಟುಂಬದಲ್ಲಿ ಜೀವನ ನಡೆಸಿದವರು. ತಾವು ಬದುಕಿದ ಊರಲ್ಲಿದ್ದ ವಿಪರೀತ ಅಸ್ಪೃಶತಾವಾದಿಗಳ ನಡುವೆ ಬದುಕಿದವರು. ಮೆಡಿಕಲ್ ಓದಲು ಮನಸ್ಸಿದ್ದರೂ ತನ್ನ ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಹಿಂದೆ ಬಿದ್ದವರು. ದಲಿತ ಜನಾಂಗದಲ್ಲಿ ಹುಟ್ಟದ ಕಾರಣಕ್ಕೆ ತನ್ನ ಕೊನೆಗಾಲದವರೆಗೂ ಸಾಕಷ್ಟು ನೋವನ್ನುಂಡವರು.
‘ಚಿತ್ರದುರ್ಗ ಜಿಲ್ಲೆಯ ಹರಿಹರದ’ “ಬಸಪ್ಪ ಮತ್ತು ಚೌಡಮ್ಮ”ನವರ ಹಿರಿಯ ಮಗನಾಗಿ ‘ಪ್ರೊ.ಬಿ. ಕೃಷ್ಣಪ್ಪನವರು 1938, ಜೂನ್ 9″ ರಂದು ಜನಿಸಿದರು. ಕೃಷಿ ಕೂಲಿ ಮಾಡಿಕೊಂಡು ಕಡು ಬಡತನದ ಜೀವನವನ್ನು ಸಾಗಿಸುತ್ತಿದ್ದರು. ಹಸಿವು ಮತ್ತು ಬಡತನದ ಕಾರಣ ದಿಂದ ಹೊಟೇಲ್ ಒಂದರಲ್ಲಿ ಬಾಲ ಕಾರ್ಮಿಕನಾಗಿ ದುಡಿದು, ಶ್ರೀಮಂತರ ದಬ್ಬಾಳಿಕೆ ಮತ್ತು ಗುಲಾಮಗಿರಿಯ ನೋವನ್ನು ಅನುಭವಿಸಿದರು.
ಇಂಥ ಕಷ್ಟಕರವಾದ ಬದುಕನ್ನು ಸಾಗಿಸಿದ ಬಿ.ಕೆ ಅವರು ಸಾಮಾನ್ಯರಂತೆ ತನಗೆ ಬಂದ ಬಾಳಿನ ಕರ್ಮವೆಂದು ಭಾವಿಸದ್ದರೆ ಈ ಹೊತ್ತು ನಾವೆಲ್ಲರು ಸೇರಿ ಅವರ ಬಗ್ಗೆ ಮಾತನಾಡುತ್ತಿರಲಿಲ್ಲ. ಶ್ರೀಯುತರು ಬಾಳಿನ ಪ್ರತೀ ನೋವಿನ ಸಂದರ್ಭದಲ್ಲೂ ತನ್ನ ನೋವನ್ನು ತನ್ನದು ಮಾತ್ರವೆಂದು ತಿಳಿಯದೇ ನನ್ನ ನೋವು ನನ್ನ ಸಮುದಾಯಗಳ ಎಲ್ಲರ ನೋವು ಎಂದು ಭಾವಿಸಿ, ಆ ನೋವಿಗೆ ಕಾರಣರಾದವರ ವಿರುದ್ಧ ಸಿಡಿದೆದ್ದು ಪ್ರತಿಭಟನಾ ಆಂದೋಳನಗಳನ್ನು ಕಟ್ಟಿ ಬೆಳೆಸಿದರು. ಇವರ ಅಂಥ ನೂರಾರು ಪ್ರಯತ್ನಗಳು ಕರ್ನಾಟಕದ ದಲಿತ ಸಮುದಾಯಗಳ ಬಿಡುಗಡೆಯ ಮಾರ್ಗಗಳಾದವು. ಕೃಷ್ಣಪ್ಪನವರು ದಲಿತರ ಆಶಾಕಿರಣವಾದರು.
ಮುಂದೆ ತಮ್ಮದೇ ಪಕ್ವ ಮತ್ತು ಪ್ರಬುದ್ಧ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಮಾಜವಾದಿ ಚಳುವಳಿಯ ಹೋರಾಟಗಳಲ್ಲಿ ತಮ್ಮನ್ನು ಗುರುತಿಸಿಕೊಂಡ ನಿಷ್ಠುರ ವ್ಯಕ್ತಿತ್ವದ ಬಿ.ಕೃಷ್ಣಪ್ಪ ಬುದ್ಧ, ಅಂಬೇಡ್ಕರ್, ಮಾರ್ಕ್ಸ್, ಲೋಹಿಯಾ ಮುಂತಾದವರ ವಿಚಾರಧಾರೆಗಳನ್ನು ಅಧ್ಯಯನ ಮಾಡಿದರು.
ಕೇವಲ ಸಮಾಜವಾದಿ ಸಿದ್ಧಾಂತಕ್ಕೆ ಸೀಮಿತಗೊಳ್ಳದೆ ಅಥವಾ ನಾಲ್ಕು ಗೋಡೆಗಳ ನಡುವೆ ಬೋಧಿಸುವ ಸಾಧಾರಣ ಶಿಕ್ಷಕ ಮಾತ್ರ ತಾನಾಗಿರದೆ ಕಲೆ, ಸಾಹಿತ್ಯ, ಸಂಗೀತ, ಕಾವ್ಯ, ಇತಿಹಾಸ, ಭಾಷಾಶಾಸ್ತ್ರ ಮುಂತಾದ ಸೃಜನಾತ್ಮಕ ಅಭಿರುಚಿ ಹಾಗೂ ಹವ್ಯಾಸಗಳನ್ನು ರೂಢಿಸಿಕೊಂಡು ಶೇಕ್ಸ್ ಪಿಯರ್, ಡಾಂಟೆ, ಕುಮಾರವ್ಯಾಸ, ಕೇಶಿರಾಜ, ಬೇಂದ್ರೆ, ಕುವೆಂಪು, ಅಡಿಗ ಹೀಗೆ ಕನ್ನಡ ಮತ್ತು ಕನ್ನಡೇತರ ಭಾಷೆಗಳ ನಾನಾ ಕವಿ ಸಾಹಿತಿಗಳ ಕೃತಿಗಳನ್ನು ಓದಿ ಜೀರ್ಣಿಸಿಕೊಂಡು ಅಧಿಕಾರವಾಣಿಯಿಂದ ಸಭೆ, ಸಂಕಿರಣ, ಗೋಷ್ಠಿಗಳಲ್ಲಿ ಮಾತನಾಡುವ ಹಾಗೂ ಲೇಖನಗಳನ್ನು ಬರೆಯುವ ಕೌಶಲ್ಯವನ್ನು ಬೆಳೆಸಿಕೊಂಡರು.
ಅಂಬೇಡ್ಕರ್ ರವರು ಪರಿ ನಿರ್ವಾಣದ ನಂತರ ಎರಡು ದಶಕಗಳ ಕಾಲ ಇಡಿ ದೇಶದಲ್ಲಿ ದಲಿತ ಸಮುದಾಯಗಳ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ, ನಡೆದು ಶೋಷಿತರಿಗೆ ಆಶ್ರಯವಿಲ್ಲಾದಂತೆ ಸಂಧರ್ಭದಲ್ಲಿ, ಅಂಬೇಡ್ಕರ್ ರವರ ವಿಚಾರಧಾರೆಗಳ ಮಾನಸಪುತ್ರರಾಗಿ ಜನ್ಮತಾಳಿದ ಮಹಾತ್ಮ ಪ್ರೋ. ಬಿ.ಕೃಷ್ಣಪ್ಪ ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು (DSS) ಶಿವಮೊಗ್ಗ ಜಿಲ್ಲೆಯ ಭಧ್ರಾವತಿಯಲ್ಲಿ ಸ್ಥಾಪನೆ ಮಾಡಿ ಬಾಬಾ ಸಾಹೆಬರ ಜ್ಞಾನದಜೋತಿಯನ್ನು ಶೋಷಿತರ ಗುಡಿಸಲುಗಳಿಗೆ ತಲುಪಿಸಿ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದರು. ಸ್ವಾಭಿಮಾನದಿಂದ ಸಂಘರ್ಷ ಮಾಡಿದ್ದರು.
ಸಾಮಾಜಿಕ ವ್ಯವಸ್ಥೆಯಲ್ಲಿ ತುಳಿತಕ್ಕೊಳಪಟ್ಟ ವರಿಗೆ ಪ್ರಜ್ಞೆ ಹುಟ್ಟಿಸಿ, ಸ್ವಾಭಿಮಾನ, ಆತ್ಮಗೌರವ ತುಂಬಿಸಿ ತುಳಿಯುವ ಸಮಾಜದ ವಿರುದ್ಧ ಸಂಘರ್ಷಕ್ಕೆ ಅವರನ್ನು ಸಿದ್ಧಗೊಳಿಸಬೇಕು. ಶೋಷಿತರ ಹಕ್ಕುಗಳಿಗಾಗಿ, ಸಿಡಿ ದೇಳುವ ಹಾಗೆ ಅವರನ್ನು ಪ್ರತಿಭಟನೆ ಮಾಡುವ ಹಾಗೆ ಮಾಡಬೇಕೆಂದು ಭಾವಿ ಸಿದ ಮಾನವೀಯ ಚಿಂತಕ ಪ್ರೊ. ಬಿ. ಕೃಷ್ಣಪ್ಪ.
ಜಾತಿ ರೋಗದ ಸೋಂಕಿನಿಂದ ಗುಣ ಮುಖರಾಗದೆ ಅದರ ಕಠೋರ ಸ್ವಭಾವಕ್ಕೆ ಹುಟ್ಟಿದ ವಿಭಿನ್ನ ಹೆಸರಿನ ಉಪಜಾತಿಗಳಾಗಿ, ಜನಬಲ, ಧನಬಲ, ಬುದ್ಧಿಬಲ ಹೀಗೆ ಮೂರು ಬಲಗಳಿಲ್ಲದೆ, ತಮ್ಮಿಳಗೆ ಒಗ್ಗಟ್ಟು ಇಲ್ಲದೆ ಊರು ಕೇರಿಗಳಲ್ಲಿ ಚೆಲ್ಲಿ ಹೋಗಿ ಅಸಂಘಟಿತರಾದ ದಲಿತರನ್ನು ಒಟ್ಟುಗೂಡಿಸಿ ಅವರಿಗೆ ಸಂಘಟನೆಯ ಅರಿವು ಮೂಡಿಸಿ ಕರ್ನಾಟಕದ ಲಕ್ಷಾಂತರ ಶೋಷಿತರಿಗೆ ಧ್ವನಿಯಾದ ವರು ಪ್ರೊ.ಬಿ. ಕೃಷ್ಣಪ್ಪರು. ಶೋಷಕರ ಮುಂದೆ ನಿಂತು ಮಾತನಾಡಲು ಬಾಯಿ ಇಲ್ಲದವರಿಗೆ ಬಾಯಿಯಾದರು. ದೌರ್ಜನ್ಯಗಳಿಂದ ಹೆದರಿ ನರಳು ತ್ತಿದ್ದ ಕಂಠಗಳಿಗೆ ಗಟ್ಟಿ ಧ್ವನಿಯಿಂದ ಮಾತ ನಾಡುವಂತೆ ಧೈರ್ಯವನ್ನೂ, ಸ್ವಾಭಿ ಮಾನವನ್ನು ತುಂಬಿದವರು.
ಶಿವಮೊಗ್ಗದಲ್ಲಿ ಪತ್ರೆ ಸಂಗಪ್ಪನ ಕಗ್ಗೊಲೆಯನ್ನು ಖಂಡಿಸುವದರ ಮೂಲಕ ಹೊರಾಟ ಆರಂಬಿಸಿದರು, “ರಾಯಚೂರಿನ ಮೆದಿಕಿನಾಳ” ಭೂ ಹೊರಾಟಗಳಲ್ಲಿ ಹಾಗೂ ನಾಗಸಂದ್ರ ಭೂ ಹೋರಾಟದಿಂದ ದಲಿತ ಹಿಂದೂಳಿದ ಕೃಷಿ ಕಾರ್ಮಿಕರಿಗೆ ಭೂಮಿ ಹಕ್ಕು ಪಡೆಯುವ “ಬಗರ್ ಹುಕುಂ” ಕಾಯ್ದೆಜಾರಿಗೆ ತರಲು ಕಾರಣರಾದರು ಮತ್ತು ‘ಸಿದ್ಲಿಪೂರ’ ಭೂ ಹೊರಾಟದ ಪ್ರತಿಫಲವಾಗಿ ‘PTCL’ ಕಾಯ್ದೆ ಜಾರಿಗೆ ಬಂತು,ಮುಂದುವರೆದು ಭೂಸ ಚಳುವಳಿ, ಕುಂಬಾರ ಶೆಷಗಿರಿಯಪ್ಪನ ಕಗ್ಗೊಲೆ, ಹುಣಸಿಕೊಟೆಯ ಜಾಥ, ಬೆಂಡಿಗೆರಿಯ ಮಲ ಪ್ರಕರಣ, ಚಂದ್ರಗುತ್ತಿಯ ಬೆತ್ತಲೆ ಸೆವೆಯ ವಿರುದ್ದ ಹೊರಾಟದ ಕಿಚ್ಚನ್ನು ಹಚ್ಚಿ ಸಂಘಟಿತರಾಗಲು ಸ್ಫೂರ್ತಿಯಾದರು.
ಇಂತಹ ಸಂಘರ್ಷಮಯವಾದ ಹೊರಾಟಗಳನ್ನು ಸಂಘಟಿಸಿ ಲಕ್ಷಾಂತರ ಕಾರ್ಯಕರ್ತರನ್ನು ಬೇಳಿಸಿ ದಲಿತ ಚಳುವಳಿಯನ್ನು ಶೋಷಿತರ ರಕ್ಷಾಕವಚ ವನ್ನಾಗಿ ನಿರ್ಮಿಸಿದರು. ಮತ್ತು ದಲಿತರಿಗೆ ಯಾವುದೇ ಭೂ ಒಡೆತನವಿಲ್ಲದೆ ಕೇವಲ ಜೀತದಾಳಗಳಾಗಿ ದುಡಿಯುತ್ತಿದ್ದ ಸಂದರ್ಭದಲ್ಲಿ ಅವರಿಗೂ “ಭೂ ಒಡೆತನ” ಬೇಕೆಂದು ಹೋರಾಟಗಳನ್ನು ಕಟ್ಟಿ ಸರ್ಕಾರಿ ಭೂಮಿಯನ್ನು ದಲಿತ ಭೂಹೀನರಿಗೆ ಹಂಚುವಂತೆ ಮಾಡಿದ್ದು ಕೃಷ್ಣಪ್ಪ ನವರ ಬಹುದೊಡ್ಡ ಸಾಧನೆ. ಮುಂದೆ ದಲಿತ ಸಂಘರ್ಷ ಸಮಿತಿಯ ವಿಮೋಚನಾ ಹೋರಾಟ ಅಥವಾ ದಲಿತರ ದಂಗೆ ರೂಪುಗೊಂಡ ಪುಟಗಳು ಇಂದು ಇತಿಹಾಸ ಸೇರಿರುವ ಒಂದು ಮಹತ್ವದ ಅಧ್ಯಾಯ.
ಲೇಖನ ಕೃಪೆ : ರವಿ ರಾಮಣ್ಣ ನವಲಹಳ್ಳಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್‌ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್ ಅಪಾರ್ಟ್‌ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.



