ದಿನದ ಸುದ್ದಿ

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ನಿಷೇಧ

Published

on

ಸುದ್ದಿದಿನ, ಬೆಂಗಳೂರು : ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಚುನಾವಣಾ ಪ್ರಚಾರದಲ್ಲಿ ದುಡಿಸಿಕೊಳ್ಳುವುದು ಮಕ್ಕಳ ಹಕ್ಕುಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳು ಹಕ್ಕುಗಳ ರಕ್ಷಣಾ ಆಯೋಗ ಕ್ರಮ ಕೈಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಕ್ಕಳಿಗೆ ಬೇಸಿಗೆಯ ನಿಮಿತ್ಯ ಶಾಲೆಗಳಿಗೆ ರಜೆ ಘೋಷಿಸಿರುವುದರಿಂದ ಮಕ್ಕಳನ್ನು ವಿವಿಧ ಪಕ್ಷಗಳು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಯಾವುದೇ ರೀತಿಯಲ್ಲಿ ಮಕ್ಕಳನ್ನು ಚುನಾವಣಾ ಕಾರ್ಯ ಹಾಗೂ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಸಾರ್ವಜನಿಕರಿಗೆ, ರಾಜಕೀಯ ಪಕ್ಷಗಳಿಗೆ ಅರಿವು ಮೂಡಿಸಬೇಕು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳ ಕಾಯ್ದೆ 2005 ರ ಸೆಕ್ಷನ್ (13) ರನ್ವರಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು ಸೆಕ್ಷನ್ (14) ರ ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗವು ಸ್ವ ಪ್ರೇರಣೆಯಿಂದ ದೂರು ದಾಖಲಿಸಿ ಕ್ರಮಕೈಗೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ. ಚುನಾವಣಾ ಪ್ರಚಾರ ಮತ್ತು ಕಾರ್ಯಗಳಿಗೆ ಮಕ್ಕಳ ಬಳಕೆಯಾಗದಂತೆ ಎಚ್ಚರ ವಹಿಸಲು ಆಯೋಗ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version