Connect with us

ದಿನದ ಸುದ್ದಿ

ಬಡ್ತಿ ಮೀಸಲು : ‘ಸುಪ್ರೀಂ ’ ತೀರ್ಪು ಇಡೀ ದೇಶಕ್ಕೆ ಮಾದರಿ

Published

on

Supreme Court

ಬಿ.ಕೆ.ಪವಿತ್ರ ಮತ್ತು ಇತರರು v/s ಭಾರತ ಸರ್ಕಾರ” ಪ್ರಕರಣಕ್ಕೆ ಸಂಬಂಧಿಸಿದಂತೆ 9-2-17ರಂದು ಸುಪ್ರೀಂ ಕೋರ್ಟ್‌ ನ ಪೀಠವೊಂದು ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿಗಳ ನೌಕರಿ ಬಡ್ತಿ ಮೀಸಲಾತಿ ಕಾಯಿದೆ-2002’ ಅನ್ನು ರದ್ದುಗೊಳಿಸಿ ತೀರ್ಪು ನೀಡಿದ್ದು ಎಲ್ಲರಿಗೂ ತಿಳಿದಿದೆ. ಈ ತೀರ್ಪಿನ ಸಂದರ್ಭದಲ್ಲಿ ಇದನ್ನು ರದ್ದುಗೊಳಿಸಲಿಕ್ಕೆ ನ್ಯಾಯಾಲಯ ನೀಡಿದ್ದ ಕಾರಣ ”ಸದರಿ ವರ್ಗಗಳ(ಎಸ್ಸಿ/ಎಸ್ಟಿ) ಹಿಂದುಳಿದಿರುವಿಕೆ, ಸೇವಾದಕ್ಷತೆ ಮತ್ತು ಸಮರ್ಪಕ ಪ್ರಾತಿನಿಧ್ಯದ ಕೊರತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿಲ್ಲ” ಎಂಬುದಾಗಿತ್ತು. ಈ ನಿಟ್ಟಿನಲ್ಲಿ ಈ ಸಂಬಂಧ ಸಾಕಷ್ಟು ಹೋರಾಟಗಳು ದಲಿತ ನೌಕರರು ಮತ್ತು ಇತರ ಸಂಘಗಳಿಂದ ನಡೆದು ಸರ್ಕಾರ ಕಡೆಗೆ ಅಂದಿನ ಅಪರ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾರವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಅವರು ನೀಡಿದ ವರದಿ ಆಧಾರದ ಮೇಲೆ ಮಸೂದೆಯೊಂದನ್ನು ಸಿದ್ಧಪಡಿಸಿ, ರಾಜ್ಯಪಾಲರಿಂದ ಅದು ತಿರಸ್ಕರಿಸಲ್ಪಟ್ಟು, ರಾಷ್ಟ್ರಪತಿಗಳ ಅಂಗಳಕ್ಕೆ ಅದು ತಲುಪಿ, ಅಲ್ಲಿಂದ ಅದು ಅಂಗೀಕಾರಗೊಂಡು ಕಾನೂನಾಗಿ ಜಾರಿಯಾಯಿತು.

ದುರಂತವೆಂದರೆ ಈ ನೂತನ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲಾತಿ ವಿರೋಧಿಸುವ ‘ಅಹಿಂಸಾ’ ಸಂಘಟನೆ ಮತ್ತೆ ಸುಪ್ರೀಂ ಕೋರ್ಟಿನ ಮೊರೆ ಹೋಗಿ, ಈ ಸಂಬಂಧ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು.ಲಲಿತ್‌ರವರ ನೇತೃತ್ವದ ಪೀಠದಲ್ಲಿ ವಿಚಾರಣೆಗೊಂಡು ಈಗ ತೀರ್ಪನ್ನು ಕಂಡಿದೆ. ಸಂತಸದ ವಿಚಾರವೆಂದರೆ ನ್ಯಾಯಪೀಠ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಗೆ ಒಪ್ಪಿಗೆಯ ಮುದ್ರೆಯೊತ್ತಿದೆ, ಅದಕ್ಕೊಂದು ನೈತಿಕ ಅರ್ಥವನ್ನು ನೀಡಿದೆ. ಈ ನಿಟ್ಟಿನಲ್ಲಿ ಹೇಳುವುದಾದರೆ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ಈ ತೀರ್ಪು ಅಕ್ಷರಶಃ ಸ್ವಾಗತಾರ್ಹ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯನ್ನು ಈ ತೀರ್ಪು ಮತ್ತೊಮ್ಮೆ ಎತ್ತಿಹಿಡಿದಿದೆ. ಅಲ್ಲದೆ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಭಾರತದ ಸಂವಿಧಾನವನ್ನು, ಅದರ ಮೂಲ ಅಂಶಗಳನ್ನು ನ್ಯಾಯಾಂಗ ರಕ್ಷಿಸುತ್ತದೆ ಎಂಬುದಕ್ಕೆ ಈ ತೀರ್ಪು ಮತ್ತೊಂದು ದಾಖಲೆಯಾಗಿ ಹೊರಬಂದಿದೆ.

ಯಾಕೆಂದರೆ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲೂ ಮೀಸಲಾತಿ, ಅದನ್ನು ಭಾರತದ ಸಂವಿಧಾನ ಅನುಚ್ಛೇದ 16(4)(ಎ) ಬಹಳ ಸ್ಪಷ್ಟವಾಗಿ ದಾಖಲಿಸುತ್ತದೆ. ಆ ಭಾಗವನ್ನು ಇಲ್ಲಿ ಯಥಾವತ್ ಉಲ್ಲೇಖಿಸುವುದಾದರೆ “ಅನುಚ್ಛೇದ 16(4)(ಎ): ಈ ಅನುಚ್ಛೇದದಲ್ಲಿರುವುದು ಯಾವುದೂ ರಾಜ್ಯದ ಅಧೀನದಲ್ಲಿರುವ ಸೇವೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳವರು ಸಾಕಷ್ಟು ಪ್ರಾತಿನಿಧ್ಯವನ್ನು ಹೊಂದಿಲ್ಲವೆಂದು ರಾಜ್ಯವು ಅಭಿಪ್ರಾಯಪಟ್ಟಲ್ಲಿ, ರಾಜ್ಯದ ಅಧೀನದ ಸೇವೆಗಳಲ್ಲಿನ (ಯಾವುದೇ ವರ್ಗದ ಅಥವಾ ವರ್ಗಗಳ ಹುದ್ದೆಗಳಿಗೆ, ತತ್ಪರಿಣಾಮದ ಜ್ಯೇಷ್ಠತೆಯೊಂದಿಗೆ ಬಡ್ತಿ ವಿಷಯದಲ್ಲಿ) ಅಂಥವರಿಗಾಗಿ ಮೀಸಲಾತಿಯ ಯಾವುದೇ ಉಪಬಂಧವನ್ನು ಮಾಡಲು ರಾಜ್ಯಕ್ಕಿರುವ ಅಧಿಕಾರವನ್ನು ಪ್ರತಿಬಂಧಿಸತಕ್ಕದಲ್ಲ”. ಇದರ ಪ್ರಕಾರ ರಾಜ್ಯ ಸರ್ಕಾರ ರೂಪಿಸಿ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸದ್ಯ ಸುಪ್ರೀಂ ಅಸ್ತು ಎಂದಿರುವ ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ಕಾಯಿದೆ-2018’ ಅನ್ನು ಯಾರೂ ಕೂಡ ಪ್ರತಿಬಂಧಿಸಲು ಸಾಧ್ಯವಿಲ್ಲ.

ಹಾಗೆಯೇ ಅನುಚ್ಛೇದ 16ಕ್ಕೆ 2002ರಲ್ಲಿ ಮಾಡಲಾದ 85ನೇ ತಿದ್ದುಪಡಿ ಕೂಡ “ಸದರಿ ನೌಕರ(ಎಸ್ಸಿ/ಎಸ್ಟಿ) ಬಡ್ತಿಗೊಂಡ ನಂತರವೂ ಬಡ್ತಿಗೊಂಡ ತನ್ನ ಸ್ಥಾನದಲ್ಲಿ ತತ್ಪರಿಣಾಮ ಉಂಟಾಗಬಹುದಾದ ಜ್ಯೇಷ್ಠತೆಗೆ ಅರ್ಹನಾಗುತ್ತಾನೆ” ಎಂದು ಸ್ಪಷ್ಟವಾಗಿ ಹೇಳುತ್ತದೆ. ಒಟ್ಟಾರೆ ಸಂವಿಧಾನದ ನಿಲುವುಗಳು ಇಷ್ಟೊಂದು ಸ್ಪಷ್ಟವಾಗಿರುವಾಗ ಮತ್ತು ಸಂಸತ್ತಿನ ತದನಂತರದ ಯಾವುದೇ ತಿದ್ದುಪಡಿಗಳ ಮೂಲಕವೂ ಅದು ರದ್ದುಗೊಂಡಿಲ್ಲದಿರುವಾಗ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವುದು ಯಾರಿಗಾದರೂ ಹೇಗೆ ತಾನೆ ಸಾಧ್ಯ?

ಈ ಸಂದರ್ಭದಲ್ಲಿ ತನ್ನ ಈ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯುಲಲಿತ್‌ರವರುಗಳ ನೇತೃತ್ವದ ಪೀಠ ಮೀಸಲಾತಿಗೊಂದು ಅಪರೂಪದ ವ್ಯಾಖ್ಯಾನ ನೀಡುತ್ತಾ “ಜನತೆಯು ಯಾವ(ಸಾಮಾಜಿಕ) ಮಟ್ಟದಲ್ಲಿ ಜನಿಸಿದ್ದಾರೆ ಎಂಬುದನ್ನು ಲೆಕ್ಕಕ್ಕೆ ತೆಗೆದುಕೊಂಡು ಪರಿಣಾಮಕಾರಿ ಮತ್ತು ನೈಜಸಮಾನತೆಯ ಆಶಯವನ್ನು ಪ್ರಾಮಾಣಿಕವಾಗಿ ಈಡೇರಿಸುವುದೇ ಎಸ್ಸಿ/ಎಸ್ಟಿಗಳ ಮೀಸಲಾತಿ” ಎಂದಿದೆ. ಹಾಗೆಯೇ ಅರ್ಜಿದಾರರು ಪ್ರಸ್ತಾಪಿಸಿದ್ದ ನೌಕರರ ದಕ್ಷತೆಗೆ ಸಂಬಂಧಿಸಿದಂತೆ ಹೇಳಿರುವ ನ್ಯಾಯಪೀಠ ಈ ಸಂಬಂಧದ ಸಂವಿಧಾನ ಅನುಚ್ಛೇದ 335ನ್ನು ಪ್ರಸ್ತಾಪಿಸುತ್ತಾ ದಕ್ಷತೆ ಅಳೆಯುವ ಒಂದೇ ಮಾನದಂಡ ಇತರರಂತೆ ಎಸ್ಸಿ/ಎಸ್ಟಿಗಳು ಕೂಡ ಆ ಹುದ್ದೆಯ ಸಂಬಂಧಿತ ಪದವಿ ಮತ್ತು ಪರೀಕ್ಷೆಗಳನ್ನು ಪಾಸುಮಾಡಿರುವುದಾಗಿರುತ್ತದೆ. ಆದ್ದರಿಂದ ಅದನ್ನು(ದಕ್ಷತೆ) ಎಲ್ಲರಿಗೂ ಅನ್ವಯಿಸುವಂತಹ ಒಂದು ತಟಸ್ಥ ಮಾನದಂಡ ಎಂದು ತೆಗೆದುಕೊಳ್ಳಬೇಕೆ ಹೊರತು ಎಸ್ಸಿ/ಎಸ್ಟಿಗಳಿಗೆ ವಿಶೇಷವಾಗಿ ಅಲ್ಲ ಎಂದಿದೆ. ಹಾಗೆಯೇ ಆಡಳಿತದಲ್ಲಿ ‘ದಕ್ಷತೆ’ ಎಂಬ ಪದವನ್ನು ಪ್ರಸ್ತಾಪಿಸುವ ಸಂವಿಧಾನದ ಅದೇ ಅನುಚ್ಛೇದ 335ರ ಮುಂದಿನ ಭಾಗಗಳನ್ನು ಪ್ರಸ್ತಾಪಿಸಿ ನ್ಯಾಯಪೀಠ, ಆ ಮುಂದಿನ ಅಂಶಗಳಾದ “1.ಎಸ್ಸಿ/ಎಸ್ಟಿಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಅಂಕದಲ್ಲಿ ರಿಯಾಯಿತಿ ನೀಡಬೇಕು. 2.ಮೌಲ್ಯಮಾಪನ ಮಟ್ಟದಲ್ಲೂ ರೀಯಾಯಿತಿ ನೀಡಬೇಕು 3.ಬಡ್ತಿಯಲ್ಲೂ ಮೀಸಲಾತಿ ನೀಡಬೇಕು” ಎಂದಿರುವುದನ್ನು ಒತ್ತಿ ಹೇಳುತ್ತಾ, ಜೊತೆಗೆ ಯಾವುದೇ ಕಾರಣಕ್ಕೂ ಅನುಚ್ಛೇದ 335ರಲ್ಲಿ ಪ್ರಸ್ತಾಪಿಸಿರುವ ‘ದಕ್ಷತೆ’ಯ ಆ ಅಂಶ ಎಸ್ಸಿ/ಎಸ್ಟಿಗಳ ಸದರಿ ರಿಯಾಯಿತಿಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ತೊಂದರೆ ನೀಡತಕ್ಕದಲ್ಲ ಎಂದು ಸ್ಪಷ್ಟವಾಗಿ ತನ್ನ ಅಭಿಪ್ರಾಯ ದಾಖಲಿಸಿದೆ. ಆ ಮೂಲಕ ಬಡ್ತಿ ಮೀಸಲಿಗೆ ಸಹಜವಾಗಿ ಅಸ್ತು ಎಂದಿದೆ.

ಈ ಸಂದರ್ಭದಲ್ಲಿ ಸಂವಿಧಾನ ರಚನೆಯ ಸಮಯದಲ್ಲಿ ಅಂದರೆ 1948 ನವೆಂಬರ್ 30ರಂದು ಸಂವಿಧಾನ ಸಭೆಯೊಳಗೆ ಚರ್ಚೆಯಲ್ಲಿ ಪಾಲ್ಗೊಂಡು ಬಾಬಾಸಾಹೇಬ್ ಅಂಬೇಡ್ಕರರು ಹೇಳುವ ಮಾತೊಂದನ್ನು ಇಲ್ಲಿ ಉಲ್ಲೇಖಿಸಬೇಕಾಗುತ್ತದೆ. ಅದೆಂದರೆ “ಆಡಳಿತದಲ್ಲಿ ಸಮಾನತೆ ಇರಬೇಕು. ಅದೇ ಸಮಯದಲ್ಲಿ ಆಡಳಿತದಲ್ಲಿ ಇದುವರೆವಿಗೂ ಸೂಕ್ತ ಅವಕಾಶವನ್ನು ಪಡೆಯದ ಕೆಲವು ವರ್ಗಗಳಿಗೆ ಮೀಸಲಾತಿಯೂ ಇರಬೇಕು”(ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.13, ಪು.392). ಅಂದಹಾಗೆ ಅಂಬೇಡ್ಕರ್‌ರವರು ಇಲ್ಲಿ ಹೇಳಿರುವಂತೆ ಉದಾಹರಣೆಗೆ ಎಸ್ಸಿ/ಎಸ್ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯೇ ಇದ್ದಿರಲಿಲ್ಲ ಎಂದುಕೊಳ್ಳುವುದಾದರೆ ಅಂತಹ ಸಮಯದಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ನೌಕರಿಗಳೊಳಗೆ ಎಸ್ಸಿ/ಎಸ್ಟಿಗಳು ಬರುವುದು ಸಾಧ್ಯವಿತ್ತೇ? ಎಂದು ಕೇಳಬೇಕಾಗುತ್ತದೆ. ಯಾಕೆಂದರೆ ಸರ್ಕಾರಿ ನೌಕರಿ ಹೊರತುಪಡಿಸಿ ಮೀಸಲಾತಿ ಇಲ್ಲದ ಇತರೆ ಕ್ಷೇ ತ್ರಗಳಲ್ಲಿ ಅಂದರೆ ವ್ಯಾಪಾರ- ವ್ಯವಹಾರ, ಕೈಗಾರಿಕೆ, ಕೃಷಿ… ಇಲ್ಲೆಲ್ಲ ಎಸ್ಸಿ/ಎಸ್ಟಿಗಳ ಪಾಲು ಎಷ್ಟಿದೆ ಎಂದು ಯಾರಾದರೂ ಗಮನಿಸಿದರೆ ಖಂಡಿತ ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿಯ ಪ್ರಾಮುಖ್ಯತೆ ಏನು ಎಂದು ಅಂತಹವರಿಗೆ ಅರ್ಥ ಆಗಿಯೇ ಆಗುತ್ತದೆ.

ಹ್ಞಾಂ, ಈ ಸಂದರ್ಭದಲ್ಲಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲು ವಿರೋಧಿಸಿ ಸುಪ್ರಿಂ ಮೆಟ್ಟಿಲೇರಿರುವವರೂ ಗಮನಿಸಬೇಕಾದ ಒಂದು ವಿಷಯವೆಂದರೆ ಅಂಥಹವರು ‘ಇನ್ನೊಬ್ಬರಿಗೇಕೆ ಕೊಟ್ಟಿದ್ದೀರಿ ಎನ್ನುವ ಬದಲು ನಮಗೆ ಏಕೆ ಕೊಟ್ಟಿಲ್ಲ ಎಂದು ಕೇಳುವುದು ಸೂಕ್ತವಾಗುತ್ತದೆ” ಎಂಬುದು. ಏಕೆಂದರೆ ಎಸ್ಸಿ/ಎಸ್ಟಿಗಳಂತೆ ಹಿಂದುಳಿದ ವರ್ಗಗಳಿಗೂ(ಓಬಿಸಿಗಳು) ಮಂಡಲ್ ವರದಿ ಶೇ.27ರಷ್ಟು ಉದ್ಯೋಗ ನೇಮಕಾತಿಯಲ್ಲಿ ಮೀಸಲು ನೀಡುತ್ತದೆ. ಅಂದಹಾಗೆ ಸದರಿ ವರ್ಗಗಳವರು “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ! ಆದ್ದರಿಂದ ರಾಜ್ಯ ಸರ್ಕಾರದ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಯ ನೂತನ ಕಾಯಿದೆಯ ಈ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ಈ ತೀರ್ಪು ಅಕ್ಷರಶಃ ಮಾದರಿಯಾದುದು. ಇಡೀ ದೇಶವೇ ಇದನ್ನು ಅನುಕರಿಸುವಂತಹದ್ದು ಎಂದು ನಿಸ್ಸಂಶಯವಾಗಿ ಹೇಳಬಹುದು.

ರಘೋತ್ತಮ ಹೊ.ಬ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ1 day ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ1 day ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ6 days ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ1 week ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ1 week ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ1 week ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending