ದಿನದ ಸುದ್ದಿ
ಬಡ್ತಿ ಮೀಸಲು : ‘ಸುಪ್ರೀಂ ’ ತೀರ್ಪು ಇಡೀ ದೇಶಕ್ಕೆ ಮಾದರಿ
“ಬಿ.ಕೆ.ಪವಿತ್ರ ಮತ್ತು ಇತರರು v/s ಭಾರತ ಸರ್ಕಾರ” ಪ್ರಕರಣಕ್ಕೆ ಸಂಬಂಧಿಸಿದಂತೆ 9-2-17ರಂದು ಸುಪ್ರೀಂ ಕೋರ್ಟ್ ನ ಪೀಠವೊಂದು ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿಗಳ ನೌಕರಿ ಬಡ್ತಿ ಮೀಸಲಾತಿ ಕಾಯಿದೆ-2002’ ಅನ್ನು ರದ್ದುಗೊಳಿಸಿ ತೀರ್ಪು ನೀಡಿದ್ದು ಎಲ್ಲರಿಗೂ ತಿಳಿದಿದೆ. ಈ ತೀರ್ಪಿನ ಸಂದರ್ಭದಲ್ಲಿ ಇದನ್ನು ರದ್ದುಗೊಳಿಸಲಿಕ್ಕೆ ನ್ಯಾಯಾಲಯ ನೀಡಿದ್ದ ಕಾರಣ ”ಸದರಿ ವರ್ಗಗಳ(ಎಸ್ಸಿ/ಎಸ್ಟಿ) ಹಿಂದುಳಿದಿರುವಿಕೆ, ಸೇವಾದಕ್ಷತೆ ಮತ್ತು ಸಮರ್ಪಕ ಪ್ರಾತಿನಿಧ್ಯದ ಕೊರತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿಲ್ಲ” ಎಂಬುದಾಗಿತ್ತು. ಈ ನಿಟ್ಟಿನಲ್ಲಿ ಈ ಸಂಬಂಧ ಸಾಕಷ್ಟು ಹೋರಾಟಗಳು ದಲಿತ ನೌಕರರು ಮತ್ತು ಇತರ ಸಂಘಗಳಿಂದ ನಡೆದು ಸರ್ಕಾರ ಕಡೆಗೆ ಅಂದಿನ ಅಪರ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾರವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಅವರು ನೀಡಿದ ವರದಿ ಆಧಾರದ ಮೇಲೆ ಮಸೂದೆಯೊಂದನ್ನು ಸಿದ್ಧಪಡಿಸಿ, ರಾಜ್ಯಪಾಲರಿಂದ ಅದು ತಿರಸ್ಕರಿಸಲ್ಪಟ್ಟು, ರಾಷ್ಟ್ರಪತಿಗಳ ಅಂಗಳಕ್ಕೆ ಅದು ತಲುಪಿ, ಅಲ್ಲಿಂದ ಅದು ಅಂಗೀಕಾರಗೊಂಡು ಕಾನೂನಾಗಿ ಜಾರಿಯಾಯಿತು.
ದುರಂತವೆಂದರೆ ಈ ನೂತನ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲಾತಿ ವಿರೋಧಿಸುವ ‘ಅಹಿಂಸಾ’ ಸಂಘಟನೆ ಮತ್ತೆ ಸುಪ್ರೀಂ ಕೋರ್ಟಿನ ಮೊರೆ ಹೋಗಿ, ಈ ಸಂಬಂಧ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು.ಲಲಿತ್‌ರವರ ನೇತೃತ್ವದ ಪೀಠದಲ್ಲಿ ವಿಚಾರಣೆಗೊಂಡು ಈಗ ತೀರ್ಪನ್ನು ಕಂಡಿದೆ. ಸಂತಸದ ವಿಚಾರವೆಂದರೆ ನ್ಯಾಯಪೀಠ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಗೆ ಒಪ್ಪಿಗೆಯ ಮುದ್ರೆಯೊತ್ತಿದೆ, ಅದಕ್ಕೊಂದು ನೈತಿಕ ಅರ್ಥವನ್ನು ನೀಡಿದೆ. ಈ ನಿಟ್ಟಿನಲ್ಲಿ ಹೇಳುವುದಾದರೆ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ಈ ತೀರ್ಪು ಅಕ್ಷರಶಃ ಸ್ವಾಗತಾರ್ಹ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯನ್ನು ಈ ತೀರ್ಪು ಮತ್ತೊಮ್ಮೆ ಎತ್ತಿಹಿಡಿದಿದೆ. ಅಲ್ಲದೆ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಭಾರತದ ಸಂವಿಧಾನವನ್ನು, ಅದರ ಮೂಲ ಅಂಶಗಳನ್ನು ನ್ಯಾಯಾಂಗ ರಕ್ಷಿಸುತ್ತದೆ ಎಂಬುದಕ್ಕೆ ಈ ತೀರ್ಪು ಮತ್ತೊಂದು ದಾಖಲೆಯಾಗಿ ಹೊರಬಂದಿದೆ.
ಯಾಕೆಂದರೆ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲೂ ಮೀಸಲಾತಿ, ಅದನ್ನು ಭಾರತದ ಸಂವಿಧಾನ ಅನುಚ್ಛೇದ 16(4)(ಎ) ಬಹಳ ಸ್ಪಷ್ಟವಾಗಿ ದಾಖಲಿಸುತ್ತದೆ. ಆ ಭಾಗವನ್ನು ಇಲ್ಲಿ ಯಥಾವತ್ ಉಲ್ಲೇಖಿಸುವುದಾದರೆ “ಅನುಚ್ಛೇದ 16(4)(ಎ): ಈ ಅನುಚ್ಛೇದದಲ್ಲಿರುವುದು ಯಾವುದೂ ರಾಜ್ಯದ ಅಧೀನದಲ್ಲಿರುವ ಸೇವೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳವರು ಸಾಕಷ್ಟು ಪ್ರಾತಿನಿಧ್ಯವನ್ನು ಹೊಂದಿಲ್ಲವೆಂದು ರಾಜ್ಯವು ಅಭಿಪ್ರಾಯಪಟ್ಟಲ್ಲಿ, ರಾಜ್ಯದ ಅಧೀನದ ಸೇವೆಗಳಲ್ಲಿನ (ಯಾವುದೇ ವರ್ಗದ ಅಥವಾ ವರ್ಗಗಳ ಹುದ್ದೆಗಳಿಗೆ, ತತ್ಪರಿಣಾಮದ ಜ್ಯೇಷ್ಠತೆಯೊಂದಿಗೆ ಬಡ್ತಿ ವಿಷಯದಲ್ಲಿ) ಅಂಥವರಿಗಾಗಿ ಮೀಸಲಾತಿಯ ಯಾವುದೇ ಉಪಬಂಧವನ್ನು ಮಾಡಲು ರಾಜ್ಯಕ್ಕಿರುವ ಅಧಿಕಾರವನ್ನು ಪ್ರತಿಬಂಧಿಸತಕ್ಕದಲ್ಲ”. ಇದರ ಪ್ರಕಾರ ರಾಜ್ಯ ಸರ್ಕಾರ ರೂಪಿಸಿ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸದ್ಯ ಸುಪ್ರೀಂ ಅಸ್ತು ಎಂದಿರುವ ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ಕಾಯಿದೆ-2018’ ಅನ್ನು ಯಾರೂ ಕೂಡ ಪ್ರತಿಬಂಧಿಸಲು ಸಾಧ್ಯವಿಲ್ಲ.
ಹಾಗೆಯೇ ಅನುಚ್ಛೇದ 16ಕ್ಕೆ 2002ರಲ್ಲಿ ಮಾಡಲಾದ 85ನೇ ತಿದ್ದುಪಡಿ ಕೂಡ “ಸದರಿ ನೌಕರ(ಎಸ್ಸಿ/ಎಸ್ಟಿ) ಬಡ್ತಿಗೊಂಡ ನಂತರವೂ ಬಡ್ತಿಗೊಂಡ ತನ್ನ ಸ್ಥಾನದಲ್ಲಿ ತತ್ಪರಿಣಾಮ ಉಂಟಾಗಬಹುದಾದ ಜ್ಯೇಷ್ಠತೆಗೆ ಅರ್ಹನಾಗುತ್ತಾನೆ” ಎಂದು ಸ್ಪಷ್ಟವಾಗಿ ಹೇಳುತ್ತದೆ. ಒಟ್ಟಾರೆ ಸಂವಿಧಾನದ ನಿಲುವುಗಳು ಇಷ್ಟೊಂದು ಸ್ಪಷ್ಟವಾಗಿರುವಾಗ ಮತ್ತು ಸಂಸತ್ತಿನ ತದನಂತರದ ಯಾವುದೇ ತಿದ್ದುಪಡಿಗಳ ಮೂಲಕವೂ ಅದು ರದ್ದುಗೊಂಡಿಲ್ಲದಿರುವಾಗ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವುದು ಯಾರಿಗಾದರೂ ಹೇಗೆ ತಾನೆ ಸಾಧ್ಯ?
ಈ ಸಂದರ್ಭದಲ್ಲಿ ತನ್ನ ಈ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯುಲಲಿತ್‌ರವರುಗಳ ನೇತೃತ್ವದ ಪೀಠ ಮೀಸಲಾತಿಗೊಂದು ಅಪರೂಪದ ವ್ಯಾಖ್ಯಾನ ನೀಡುತ್ತಾ “ಜನತೆಯು ಯಾವ(ಸಾಮಾಜಿಕ) ಮಟ್ಟದಲ್ಲಿ ಜನಿಸಿದ್ದಾರೆ ಎಂಬುದನ್ನು ಲೆಕ್ಕಕ್ಕೆ ತೆಗೆದುಕೊಂಡು ಪರಿಣಾಮಕಾರಿ ಮತ್ತು ನೈಜಸಮಾನತೆಯ ಆಶಯವನ್ನು ಪ್ರಾಮಾಣಿಕವಾಗಿ ಈಡೇರಿಸುವುದೇ ಎಸ್ಸಿ/ಎಸ್ಟಿಗಳ ಮೀಸಲಾತಿ” ಎಂದಿದೆ. ಹಾಗೆಯೇ ಅರ್ಜಿದಾರರು ಪ್ರಸ್ತಾಪಿಸಿದ್ದ ನೌಕರರ ದಕ್ಷತೆಗೆ ಸಂಬಂಧಿಸಿದಂತೆ ಹೇಳಿರುವ ನ್ಯಾಯಪೀಠ ಈ ಸಂಬಂಧದ ಸಂವಿಧಾನ ಅನುಚ್ಛೇದ 335ನ್ನು ಪ್ರಸ್ತಾಪಿಸುತ್ತಾ ದಕ್ಷತೆ ಅಳೆಯುವ ಒಂದೇ ಮಾನದಂಡ ಇತರರಂತೆ ಎಸ್ಸಿ/ಎಸ್ಟಿಗಳು ಕೂಡ ಆ ಹುದ್ದೆಯ ಸಂಬಂಧಿತ ಪದವಿ ಮತ್ತು ಪರೀಕ್ಷೆಗಳನ್ನು ಪಾಸುಮಾಡಿರುವುದಾಗಿರುತ್ತದೆ. ಆದ್ದರಿಂದ ಅದನ್ನು(ದಕ್ಷತೆ) ಎಲ್ಲರಿಗೂ ಅನ್ವಯಿಸುವಂತಹ ಒಂದು ತಟಸ್ಥ ಮಾನದಂಡ ಎಂದು ತೆಗೆದುಕೊಳ್ಳಬೇಕೆ ಹೊರತು ಎಸ್ಸಿ/ಎಸ್ಟಿಗಳಿಗೆ ವಿಶೇಷವಾಗಿ ಅಲ್ಲ ಎಂದಿದೆ. ಹಾಗೆಯೇ ಆಡಳಿತದಲ್ಲಿ ‘ದಕ್ಷತೆ’ ಎಂಬ ಪದವನ್ನು ಪ್ರಸ್ತಾಪಿಸುವ ಸಂವಿಧಾನದ ಅದೇ ಅನುಚ್ಛೇದ 335ರ ಮುಂದಿನ ಭಾಗಗಳನ್ನು ಪ್ರಸ್ತಾಪಿಸಿ ನ್ಯಾಯಪೀಠ, ಆ ಮುಂದಿನ ಅಂಶಗಳಾದ “1.ಎಸ್ಸಿ/ಎಸ್ಟಿಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಅಂಕದಲ್ಲಿ ರಿಯಾಯಿತಿ ನೀಡಬೇಕು. 2.ಮೌಲ್ಯಮಾಪನ ಮಟ್ಟದಲ್ಲೂ ರೀಯಾಯಿತಿ ನೀಡಬೇಕು 3.ಬಡ್ತಿಯಲ್ಲೂ ಮೀಸಲಾತಿ ನೀಡಬೇಕು” ಎಂದಿರುವುದನ್ನು ಒತ್ತಿ ಹೇಳುತ್ತಾ, ಜೊತೆಗೆ ಯಾವುದೇ ಕಾರಣಕ್ಕೂ ಅನುಚ್ಛೇದ 335ರಲ್ಲಿ ಪ್ರಸ್ತಾಪಿಸಿರುವ ‘ದಕ್ಷತೆ’ಯ ಆ ಅಂಶ ಎಸ್ಸಿ/ಎಸ್ಟಿಗಳ ಸದರಿ ರಿಯಾಯಿತಿಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ತೊಂದರೆ ನೀಡತಕ್ಕದಲ್ಲ ಎಂದು ಸ್ಪಷ್ಟವಾಗಿ ತನ್ನ ಅಭಿಪ್ರಾಯ ದಾಖಲಿಸಿದೆ. ಆ ಮೂಲಕ ಬಡ್ತಿ ಮೀಸಲಿಗೆ ಸಹಜವಾಗಿ ಅಸ್ತು ಎಂದಿದೆ.
ಈ ಸಂದರ್ಭದಲ್ಲಿ ಸಂವಿಧಾನ ರಚನೆಯ ಸಮಯದಲ್ಲಿ ಅಂದರೆ 1948 ನವೆಂಬರ್ 30ರಂದು ಸಂವಿಧಾನ ಸಭೆಯೊಳಗೆ ಚರ್ಚೆಯಲ್ಲಿ ಪಾಲ್ಗೊಂಡು ಬಾಬಾಸಾಹೇಬ್ ಅಂಬೇಡ್ಕರರು ಹೇಳುವ ಮಾತೊಂದನ್ನು ಇಲ್ಲಿ ಉಲ್ಲೇಖಿಸಬೇಕಾಗುತ್ತದೆ. ಅದೆಂದರೆ “ಆಡಳಿತದಲ್ಲಿ ಸಮಾನತೆ ಇರಬೇಕು. ಅದೇ ಸಮಯದಲ್ಲಿ ಆಡಳಿತದಲ್ಲಿ ಇದುವರೆವಿಗೂ ಸೂಕ್ತ ಅವಕಾಶವನ್ನು ಪಡೆಯದ ಕೆಲವು ವರ್ಗಗಳಿಗೆ ಮೀಸಲಾತಿಯೂ ಇರಬೇಕು”(ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.13, ಪು.392). ಅಂದಹಾಗೆ ಅಂಬೇಡ್ಕರ್‌ರವರು ಇಲ್ಲಿ ಹೇಳಿರುವಂತೆ ಉದಾಹರಣೆಗೆ ಎಸ್ಸಿ/ಎಸ್ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯೇ ಇದ್ದಿರಲಿಲ್ಲ ಎಂದುಕೊಳ್ಳುವುದಾದರೆ ಅಂತಹ ಸಮಯದಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ನೌಕರಿಗಳೊಳಗೆ ಎಸ್ಸಿ/ಎಸ್ಟಿಗಳು ಬರುವುದು ಸಾಧ್ಯವಿತ್ತೇ? ಎಂದು ಕೇಳಬೇಕಾಗುತ್ತದೆ. ಯಾಕೆಂದರೆ ಸರ್ಕಾರಿ ನೌಕರಿ ಹೊರತುಪಡಿಸಿ ಮೀಸಲಾತಿ ಇಲ್ಲದ ಇತರೆ ಕ್ಷೇ ತ್ರಗಳಲ್ಲಿ ಅಂದರೆ ವ್ಯಾಪಾರ- ವ್ಯವಹಾರ, ಕೈಗಾರಿಕೆ, ಕೃಷಿ… ಇಲ್ಲೆಲ್ಲ ಎಸ್ಸಿ/ಎಸ್ಟಿಗಳ ಪಾಲು ಎಷ್ಟಿದೆ ಎಂದು ಯಾರಾದರೂ ಗಮನಿಸಿದರೆ ಖಂಡಿತ ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿಯ ಪ್ರಾಮುಖ್ಯತೆ ಏನು ಎಂದು ಅಂತಹವರಿಗೆ ಅರ್ಥ ಆಗಿಯೇ ಆಗುತ್ತದೆ.
ಹ್ಞಾಂ, ಈ ಸಂದರ್ಭದಲ್ಲಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲು ವಿರೋಧಿಸಿ ಸುಪ್ರಿಂ ಮೆಟ್ಟಿಲೇರಿರುವವರೂ ಗಮನಿಸಬೇಕಾದ ಒಂದು ವಿಷಯವೆಂದರೆ ಅಂಥಹವರು ‘ಇನ್ನೊಬ್ಬರಿಗೇಕೆ ಕೊಟ್ಟಿದ್ದೀರಿ ಎನ್ನುವ ಬದಲು ನಮಗೆ ಏಕೆ ಕೊಟ್ಟಿಲ್ಲ ಎಂದು ಕೇಳುವುದು ಸೂಕ್ತವಾಗುತ್ತದೆ” ಎಂಬುದು. ಏಕೆಂದರೆ ಎಸ್ಸಿ/ಎಸ್ಟಿಗಳಂತೆ ಹಿಂದುಳಿದ ವರ್ಗಗಳಿಗೂ(ಓಬಿಸಿಗಳು) ಮಂಡಲ್ ವರದಿ ಶೇ.27ರಷ್ಟು ಉದ್ಯೋಗ ನೇಮಕಾತಿಯಲ್ಲಿ ಮೀಸಲು ನೀಡುತ್ತದೆ. ಅಂದಹಾಗೆ ಸದರಿ ವರ್ಗಗಳವರು “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ! ಆದ್ದರಿಂದ ರಾಜ್ಯ ಸರ್ಕಾರದ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಯ ನೂತನ ಕಾಯಿದೆಯ ಈ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ಈ ತೀರ್ಪು ಅಕ್ಷರಶಃ ಮಾದರಿಯಾದುದು. ಇಡೀ ದೇಶವೇ ಇದನ್ನು ಅನುಕರಿಸುವಂತಹದ್ದು ಎಂದು ನಿಸ್ಸಂಶಯವಾಗಿ ಹೇಳಬಹುದು.
–ರಘೋತ್ತಮ ಹೊ.ಬ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಈ ಕುರಿತು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಧಿಕೃತ ಆದೇಶ ಹೊರಡಿಸಿದ್ದು, ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿಬಕುಮಾರ್ (D. K. Shivakumar) ಅವರು ‘ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ’ ಎಂಬ ಪಕ್ಷದ ನೀತಿಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಈ ಮಹತ್ವದ ಬದಲಾವಣೆ ನಡೆದಿದೆ. ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅನುಭವಿ ನಾಯಕ ಹರಿಪ್ರಸಾದ್ ಅವರಿಗೆ ಹೈಕಮಾಂಡ್ ಹೊಣೆಗಾರಿಕೆ ನೀಡಿದೆ.
ದೀರ್ಘಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವ ಹರಿಪ್ರಸಾದ್ ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯರಾಗಿರುವ ಅವರು ಹಲವು ರಾಜ್ಯಗಳ ಪಕ್ಷದ ಉಸ್ತುವಾರಿ ಜವಾಬ್ದಾರಿಗಳನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಪಕ್ಷದ ಸಂಘಟನಾ ಅನುಭವ ಮತ್ತು ಹೈಕಮಾಂಡ್ನೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯ ಅವರ ನೇಮಕಾತಿಗೆ ಪ್ರಮುಖ ಕಾರಣವೆಂದು ಕಾಂಗ್ರೆಸ್ ವಲಯಗಳಲ್ಲಿ ವಿಶ್ಲೇಷಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ, ಅಂತಿಮವಾಗಿ ಹೈಕಮಾಂಡ್ ಹರಿಪ್ರಸಾದ್ ಅವರ ಮೇಲೆ ವಿಶ್ವಾಸ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಸಂಘಟನೆ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಮಹತ್ವದ ಜವಾಬ್ದಾರಿ ಇದೀಗ ಅವರ ಹೆಗಲಿಗೆ ಬಂದಿದೆ.
ಹರಿಪ್ರಸಾದ್ ಅವರ ನೇಮಕಾತಿಯಿಂದ ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಹೊಸ ಚೈತನ್ಯ ಮೂಡಲಿದ್ದು, ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಸಿದ್ಧತೆಯಲ್ಲಿ ಪಕ್ಷಕ್ಕೆ ಹೊಸ ದಿಕ್ಕು ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

-
ದಿನದ ಸುದ್ದಿ4 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ2 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ2 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ4 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
-
ದಿನದ ಸುದ್ದಿ2 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ2 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ2 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

