Connect with us

ದಿನದ ಸುದ್ದಿ

ಪೋಕ್ಸೋ ಕಾಯ್ದೆಯಡಿ ಮಕ್ಕಳ ರಕ್ಷಣೆ ; ಹಲವು ಸೆಕ್ಷನ್‍ಗಳ ಸೇರ್ಪಡೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ

Published

on

ಸುದ್ದಿದಿನ,ದಾವಣಗೆರೆ: ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಎಲ್ಲಾ ಹಂತದಲ್ಲಿ ಪೋಷಕರು ಆದ್ಯತೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

ಅವರು ಬುಧುವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೆÇಲೀಸ್ ಇಲಾಖೆ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಾನುವಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಎಂ.ಟಿ.ಪಿ ಕಾಯ್ದೆ, ಪಿ.ಎನ್.ಡಿ.ಪಿ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೋಕ್ಸೋ ಕಾಯ್ದೆ 2012 ನ್ನು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿದೆ. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ಮಕ್ಕಳನ್ನು ಮಗು ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.

16 ರಿಂದ 18 ವರ್ಷ ವಯಸ್ಸಿನ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಕನಿಷ್ಠ 10 ವರ್ಷಗಳ ಸೆರೆವಾಸ, ಜೀವಾವಧಿ ಶಿಕ್ಷೆ ಮತ್ತು ದಂಡ ವಿಸ್ತರಿಸಬಹುದು. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಕನಿಷ್ಠ 20 ವರ್ಷಗಳ ಸೆರೆವಾಸ, ಜೀವನದ ಉಳಿದ ಅವಧಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ. ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ನ್ಯಾಯಾಲಯದಲ್ಲಿ ಜಾಮೀನು ದೊರೆಯುವುದಿಲ್ಲ. ದುಷ್ಕøತ್ಯಕ್ಕೆ ನೇರವಾಗಿ ಹಾಗೂ ಪರೋಕ್ಷವಾಗಿ ಸಹಾಯ ಮಾಡಿದವರಿಗೂ ಈ ಕಾಯ್ದೆಯಡಿ ಶಿಕ್ಷೆ ಇದೆ ಎಂದು ಹೇಳಿದರು.

ಪೋಕ್ಸೋ ಕಾಯ್ದೆಯಡಿ ಮಕ್ಕಳ ರಕ್ಷಣೆಗಾಗಿ ಹಲವು ಸೆಕ್ಷನ್‍ಗಳನ್ನು ಸೇರಿಸಲಾಗಿದೆ. ಸೆಕ್ಷನ್ -4, ಸೆಕ್ಷನ್ -5, ಸೆಕ್ಷನ್ -6, ಸೆಕ್ಷನ್ -9, ಸೆಕ್ಷನ್ -15 ಮತ್ತು ಸೆಕ್ಷನ್ -15 ತಿದ್ದುಪಡಿ ಮತ್ತು ಸೆಕ್ಷನ್ -42ರ ತಿದ್ದುಪಡಿಗಳನ್ನು ಸೇರಿಸಲಾಗಿದೆ. ಮಕ್ಕಳ ಲೈಂಗಿಕ ದುರುಪಯೋಗವನ್ನು ಸೂಕ್ತ ರೀತಿಯಲ್ಲಿ ಪರಿಹರಿಸುವುದಕ್ಕಾಗಿ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿಸಿದರು.

ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ತೆರೆದ ಮನೆ ಕಾರ್ಯಕ್ರಮದಡಿ ಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಕುರಿತು ಶಾಲಾ ಶಿಕ್ಷಣ ಇಲಾಖೆಯು ಪ್ರತಿ ಶಾಲೆಗಳಲ್ಲಿ ಬಿಡುವಿನ ವೇಳೆ, ಸಂದರ್ಭಾನುಸಾರ ಬೋಧನಾ ಅವಧಿ, ವಿವಿಧ ಸಾಂಸ್ಕøತಿಕ ಚಟುವಟಿಕೆ, ರಾಷ್ಟ್ರೀಯ ಹಬ್ಬಗಳ ಸಂದರ್ಭ, ಪೋಷಕರ ಸಭೆ, ತಾಯಂದಿರ ಸಭೆ, ಕಾರ್ಯಕ್ರಮಗಳಲ್ಲಿ ಜಾಗೃತಿ ಮೂಡಿಸಲು ಈ ಮೂಲಕ ತಿಳಿಸಿದರು.

ಪ್ರೀತಿ, ಪ್ರೇಮವೆಂಬ ಆಕರ್ಷಣೆಗೆ ಒಳಗಾಗದೆ ಚನ್ನಾಗಿ ಓದಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು. ತಂದೆ-ತಾಯಿ ಕಂಡ ಕನಸುಗಳನ್ನು ನನಸು ಮಾಡಿ, ನಿಮ್ಮ ಭವಿಷ್ಯ ಉಜ್ವಲವಾಗಿ ರೂಪಿಸಿಕೊಳ್ಳಲು ಶ್ರಮಪಡಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ ಶಿಕ್ಷಣ ಇಲಾಖೆಯೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕನಿಷ್ಠ ಇಬ್ಬರು ಸದಸ್ಯರು, ಮತ್ತು ಬೀಟ್ ಪೆÇಲೀಸರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಾಧಿಕಾರಿ, ಶಾಲೆ ಮುಖ್ಯೋಪಾಧ್ಯಾಯರು ಇವರನ್ನು ಒಳಗೊಂಡಂತೆ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಕಾಯ್ದೆ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.

ಹಲವಾರು ಎನ್‍ಒಜಿಗಳು ಅಭ್ಯಾಸ ಮಾಡಿದ ಪ್ರಕಾರ ಕೇವಲ 35 ಪ್ರತಿಶತ ಮಕ್ಕಳಿಗೆ ಹಾಗೂ 32 ಪ್ರತಿಶತ ಪೋಷಕರಿಗೆ ಪೋಕ್ಸೋ ಕಾಯ್ದೆ ಬಗ್ಗೆ ಅರಿವಿದೆ ಎಂದು ತಿಳಿದು ಬಂದಿರುತ್ತದೆ. 18 ವರ್ಷದ ಒಳಗಿನ ಬಾಲಕ ಬಾಲಕಿಯರು ಎಲ್ಲರೂ ಮಕ್ಕಳೇ ಇವರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಇವುಗಳನ್ನು ತಡೆಗಟ್ಟುವುದು ಈ ಕಾಯ್ದೆ ಮುಖ್ಯ ಉದ್ದೇಶವಾಗಿದೆ. ಪರಿಚಿತರು ಮತ್ತು ಅಪರಿಚಿತರಿಂದ ಆಗುತ್ತಿರುವಂತಹ ದೌರ್ಜನ್ಯ, ಮಾನಸಿಕ ದೌರ್ಜನ್ಯ ಇವುಗಳನ್ನು ತಡೆಗಟ್ಟಿದರೆ ಮಕ್ಕಳ ಮಾನಸಿಕ, ಭೌತಿಕ ವಿಕಾಸ ಮತ್ತು ಶೈಕ್ಷಣಿಕವಾಗಿ ಮುಂದುವರೆಯುವುದಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರ್.ಎಲ್. ಕಾನೂನು ಕಾಲೇಜು ವಿಶ್ರಾಂತ ಪ್ರಾಂಶುಪಾಲರಾದ ಡಾ.ಎಂ ಸೋಮಶೇಖರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತ ಟಿ.ಎನ್, ಹರಿಹರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ರಾಮಕೃಷ್ಣ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೂರ್ಣಿಮ.ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಆರಕ್ಷಕ ವೃತ್ತ ನಿರೀಕ್ಷಕರಾದ ಸುರೇಶ ಸಗರಿ, ಹಿರಿಯ ವೈದ್ಯಾಧಿಕಾರಿಯಾದ ಡಾ.ಪ್ರಶಾಂತ್, ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ

Published

on

  • ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್ ಇಂಡಿಯಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಪೇದೆ ಕೆ.ಆರ್ ಹುಲಿರಾಜ ತಿಳಿಸಿದರು.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬೊಮ್ಮಗಟ್ಟ ಗ್ರಾಮದ ತಂದೆ ಕೆ.ರಮೇಶ್, ತಾಯಿ ಲಕ್ಷ್ಮೀ ಅವರ ಮೊದಲನೇ ಮಗ ಕೆ.ಆರ್ ಹುಲಿರಾಜ, ವೃತ್ತಿಯಲ್ಲಿ ಕೆ.ಎಸ್.ಆರ್.ಟಿ.ಸಿ ಪೇದೆ, ಪತ್ನಿ ಸವಿತಾ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗಿ, ಇಬ್ಬರು ಮಕ್ಕಳು ಇದ್ದಾರೆ.

ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಖೋ-ಖೋ, ಓಟ, ವಾಲಿಬಾಲ್, ಕ್ರಿಕೆಟ್‌ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಜೊತೆಗೆ ಬಳ್ಳಾರಿ ಡಯಟ್ ನಲ್ಲಿ ಡಿ.ಎಡ್. ಪದವಿ ಪಡೆದು ನಂತರ ಬಿ.ಎ. ಪದವಿಯನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದಾರೆ.

ಪೇದೆಯಾಗಿ ಆಯ್ಕೆ

2014ನೇ ಮಾರ್ಚ್ 3ನೇ ತಾರೀಖು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.ಯಲ್ಲಿ ಪೇದೆಯಾಗಿ ಆಯ್ಕೆಯಾಗಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಎರಡು ವರ್ಷಗಳ ಕಾಲ ತರಬೇತಿ ಪೂರ್ಣಗೊಳಿಸಿದ್ದಾರೆ‌.

ಬೆಂಗಳೂರಿನಲ್ಲಿ 6 ವರ್ಷಗಳ ಕಾಲ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ ಚಳ್ಳಕೇರೆ ತಾಲೂಕಿನ ಡಿಪೋದಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

800,1500 ಮೀಟರ್ ಓಟದ ಸ್ಪರ್ಧೆ ಆಯ್ಕೆ

ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿ, ನಂತರ ರಾಜ್ಯ ಮಟ್ಟದಲ್ಲಿ 800 ಮೀಟರ್ ಹಾಗೂ 1500 ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡು, 2024ನೇ ಸಾಲಿನ ಡಿಸೆಂಬರ್‌ 6, 7 ಹಾಗೂ 8 ರಂದು ನಡೆಯುವ ಆಲ್ ಇಂಡಿಯಾ ರೋಡ್ ಟ್ರಾನ್ಸ್‌ಪೋರ್ಟ್‌ ಕಾರ್ಪೋರೇಷನ್ ಲಿಮಿಟೆಡ್ ಅಥ್ಲೆಟಿಕ್ ಮೀಟ್, ಪಾರ್ಟ್ ಸೇಡಿಯಂ, ವಿಶಾಖಪಟ್ಟಣಂನಲ್ಲಿ ನಡೆಯುವ ಅಥ್ಲೆಟಿಕ್ಸ್ ಗೆ ಆಯ್ಕೆಯಾಗಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇಲಾಖೆ ಪ್ರೋತ್ಸಾಹ

ASRTU ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವ ನಿಗಮದ ಆಟಗಾರರಿಗೆ ಅಭ್ಯಾಸ ಮಾಡಲು ವೇತನ ಸಹಿತ ರಜೆ ಹಾಗೂ ಕ್ರೀಡಾ ಸಾಮಗ್ರಿ ಕೊಟ್ಟಿದ್ದಾರೆ .ASRTU ವತಿಯಿಂದ ದೇಶದ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗಿದೆ‌. ರಾಜ್ಯದ ಹಾಗೂ ಜಿಲ್ಲೆಯ ಇಲಾಖೆಯ ಅಧಿಕಾರಿಗಳಿಗೆ ಪೇದೆ ಕೆ.ಆರ್. ಹುಲಿರಾಜ್ ರಿಗೆ ಧನ್ಯವಾದಗಳನ್ನು ತಿಳಿಸಿದರು.

ಒಟ್ಟಾರೆಯಾಗಿ ASRTU Athletics ಡಿಸೆಂಬರ್-2024 ಕ್ರೀಡಾಕೂಟವನ್ನು ಡಿಸೆಂಬರ್ 06 ರಿಂದ 8 ವರೆಗೆ ವಿಶಾಖಪಟ್ಟಣಂನಲ್ಲಿ ಆಯೋಜಿಸಿದೆ. ಅದರಲ್ಲಿ ಬಳ್ಳಾರಿ ಜಿಲ್ಲೆಯ ನಿವಾಸಿ ಪೇದೆ ಕೆ.ಆರ್ ಹುಲಿರಾಜ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ‌. ಈ ಸಮಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಂದೆ ತಾಯಿ, ಪೋಷಕರು ಹಾಗೂ ಸ್ನೇಹಿತರು ಶುಭಕೋರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

Published

on

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು.

ಮುಖ್ಯ ಅತಿಥಿಗಳಾಗಿ ಡಿವೈಎಸ್ ಪಿ ಸ್ಯಾಮ್ ವರ್ಗೀಸ್ ಐಪಿಸ್ ಹಾಗೂ ಕಿರುತೆರೆಯ ರಿಯಾಲಿಟಿ ಶೋ ಮಹಾನಟಿ ಖ್ಯಾತಿಯ ಬಿಂದು ಹೊನ್ನಾಳಿ ಭಾಗವಹಿಸಿದ್ದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಮೃತೇಶ್ವರ ಬಿ.ಜಿ ವಹಿಸಿದ್ದರು. ಐ ಕ್ಯು ಎಸ್ ಸಿ ಸಂಚಾಲಕರಾದ ವಿಜಯ್ ಕುಮಾರ್ ಎನ್.ಸಿ ಅವರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಷಣ್ಮುಖಪ್ಪ ಕೆ.ಹೆಚ್ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಡಿವೈಎಸ್ ಪಿ ಸ್ಯಾಮ್ ವರ್ಗೀಸ್ ಐ ಪಿ ಎಸ್ ಅವರ ವ್ಯಕ್ತಿಪರಿಚಯವನ್ನು ಪ್ರಾಧ್ಯಾಪಕಿ ಡಾ.ದಾಕ್ಷಾಯಿಣಿ ಡೋಂಗ್ರೆ ಅವರು ಹಾಗೂ ಕಿರುತೆರೆ ನಟಿ ಬಿಂದು ಹೊನ್ನಾಳಿಯವರ ವ್ಯಕ್ತಿಪರಿಚಯವನ್ನು ಡಾ.ಶಕೀಲ್ ಅಹಮ್ಮದ್ ಅವರು ಮಾಡಿಕೊಟ್ಟರು.

ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಸಂಯೋಜಕರಾದ ಡಾ.ರಮೇಶ್ ಅಯ್ಯನಹಳ್ಳಿ ಹಾಗೂ ಪ್ರಸನ್ನ ಷ, ರೆಡ್ ಕ್ರಾಸ್ ನ ಸಂಯೋಜಕರಾದ ಡಾ.ಪ್ರದೀಪ್ ಕುಮಾರ್ ಜಿಎಂ, ರೋವರ್ಸ್ ನ ಸುರೇಶ್ ಜಿ.ಎಸ್, ರೇಂಜರ್ಸ್ ನ ಡಾ.ಶಕುಂತಲಾ ಹಾಗೂ ಸುಪ್ರಿಯಾ ಬುಟ್ಟಿ, ಉದ್ಯೋಗ ಕೋಶದ ಸಂಚಾಲಕರಾದ ಡಾ.ಮಂಜುಳ ಟಿ, ಕಾಲೇಜು ಸಮಿತಿಯ ಸದಸ್ಯರು, ಬೋಧಕವರ್ಗ ಹಾಗೂ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ತೇಜು, ಭಾಗ್ಯ ಜಿ.ಜಿ ಆಶಯಗೀತೆ ಹಾಡಿದರು. ಮಂಜುನಾಥ ಮತ್ತು ಲೋಹಿತ್ ನಿರೂಪಿಸಿದರು. ಸಿದ್ದೇಶ್ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending