ದಿನದ ಸುದ್ದಿ

ದಾವಣಗೆರೆ | ಪೆಟ್ರೋಲ್ ಬೆಲೆ ಹೆಚ್ಚಳ ವಿರೋಧಿಸಿ ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ

Published

on

ಸುದ್ದಿದಿನ,ದಾವಣಗೆರೆ : ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗುತ್ತಿದ್ದು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಹದಡಿ ರಸ್ತೆಯ ಪೆಟ್ರೋಲ್ ಬಂಕ್ ಎದುರು ಕಿಸಾನ್ ಘಟಕ ಪದಾಧಿಕಾರಿಗಳು ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದ್ದರು ದೇಶದಲ್ಲಿ ಮಾತ್ರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಮಾತ್ರ ಗಗನಕ್ಕೆ ಏರುತ್ತಿದೆ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಜನರ ಮೇಲೆ ಹೊರೆಯಾಗುತ್ತಿದೆ. ವಾಹನ ಸವಾರ ರಿಗೆ ಗಾಯದ ಮೇಲೆ ಬರೆ ಎಳೆದಂತೆ ಬೆಲೆ ಹೆಚ್ಚಳವಾಗುತ್ತಿದೆ ಆರೋಪ ಮಾಡಿದರು.

ಕೂಡಲೇ ಬೆಲೆ ಇಳಿಕೆ ಮಾಡಬೇಕು ಇಲ್ಲವಾದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕಿಸಾನ್ ಘಟಕ ಪ್ರದಾನ ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ್ ಯಾದವ್ ಎಸ್ ಕೆ ಹಾಗೂ ಎಚ್ಚರಿಕೆ ನೀಡಿದರು.

ಈ ಸಂಧರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ತುರ್ಚಘಟ್ಟ ಬಸವರಾಜಪ್ಪ, ಮಾತನಾಡಿ ಮೋದಿ ಸರ್ಕಾರ ಪೆಟ್ರೋಲ್ ಬೆಲೆ ಜಾಸ್ತಿ ಮಾಡಿ ಜನಸಾಮಾನ್ಯರಿಗೆ ಗಾಯದ ಮೇಲೆ ಬರೇಎಳೆದಿದೆ ಎಂದು ಕೇಂದ್ರ ಸರ್ಕಾರವನ್ನು ಖಂಡಿಸಿದರು.

ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ದಕ್ಷಿಣ ಗ್ರಾಮಾಂತರ ಬ್ಲಾಕ್ ಅಧ್ಯಕ್ಷರಾದ ಜೆ.ಸಿ. ನಿಂಗಪ್ಪ, ಮಾತನಾಡಿ ಈ ಕೇಂದ್ರ ಸರ್ಕಾರ ಬಡವರ ರೈತರ ಸರ್ಕರವಲ್ಲ ಅದನಿ ಅಂಬಾನಿ ಸರ್ಕಾರ ಜನ ವಿರೋಧಿ ಕೇಂದ್ರ ಸರ್ಕಾರ ಈ ರಾಜ್ಯ ಬಿ ಜೆ ಪಿ ಸರ್ಕಾರ ಕುಡ ಈ ಕರೋನ ಮಹಾಮಾರಿ ಕಷ್ಟದ ಸಮಯದಲ್ಲಿ ಜನಸಾಮಾನ್ಯರಿಗೆ ಇನ್ನಷ್ಟು ಕಷ್ಟಕ್ಕೆ ದೂಡುತ್ತಾಇದೆ ಎಂದು ಖಂಡಿಸಿದರು.

ಜಿಲ್ಲಾಯುವ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕೆಂಗನಹಳ್ಳಿಅವರು ಬಿ ಜೆ ಪಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಯುವಕರಿಗೆ ಕೆಲಸ ಕಲ್ಪಿಸದೆ ಬರೇ ಸುಳ್ಳು ಹೇಳುತ್ತಾ ಮಂಕು ಬೂದಿ ಎರಚಿದೆ ಎಂದರು.

ಈ ಸಂದರ್ಭದಲ್ಲಿ ದಕ್ಷಿಣ ಸಾಮಾಜಿಕ ಜಾಲತಾಣ ಸಂಚಾಲಕ ಸಾಮಾಜಿಕ ಜಾಲತಾಣ ಎಸ್ ಕೆ ಮಾಲ್ತೇಶ್, ಸಾಮಾಜಿಕ ಜಾಲತಾಣ ಉತ್ತರವಲಯ ಅಧ್ಯಕ್ಷರಾದ ಬಾತಿ ಶಿವಕುಮಾರ್ ಸೋನಿಯಾ ಗಾಂಧಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾದ ಜಿಕ್ರಿಯ, ಕಿಸಾನ್ ಯುವ ಮುಖಂಡರಾದನವೀನ್ ಕೋಡಿಹಳ್ಳಿ, ತೋಟದ ಮನೆ ಬಸವರಾಜ್, ನವೀನ್ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version