ದಿನದ ಸುದ್ದಿ
ಮದ್ದೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ
ಸುದ್ದಿದಿನ,ಮದ್ದೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ) ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಿಲ್ಲಿಸಬೇಕು ರೈತರ ಎಲ್ಲಾ ಕೃಷಿ ಸಾಲ ಸ್ತ್ರೀ ಶಕ್ತಿ ಸಂಘಗಳ ಸಾಲಗಳ ಸಂಪೂರ್ಣ ಮನ್ನಾ ಮಾಡಿ ರೈತರಿಗೆ ಋಣಮುಕ್ತ ಪತ್ರ ಕೊಡಬೇಕೆಂದು ರಾಜ್ಯ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಶಂಭುಗೌಡ ಮಾತನಾಡಿ ಕಳೆದ ಮೂರು ನಾಲ್ಕು ವರ್ಷಗಳ ನಿರಂತರ ಬರಗಾಲದಿಂದ ರೈತರ ಬದುಕು ಅತಂತ್ರವಾಗಿದೆ ಈಗಷ್ಟೇ ತಡವಾಗಿ ಮಳೆ ಬಂದು ಸಂಪೂರ್ಣವಾಗಿ ಕೃಷಿ ಚಟುವಟಿಕೆಗಳು ನಡೆದಿಲ್ಲ ಹಾಗೂ ರೈತ ಸಾಲಬಾಧೆಯಿಂದ ರೈತ ಹೊರಬರಲು ಸಾಧ್ಯವಾಗಿಲ್ಲ ಹೀಗಾಗಿ ತಾಲೂಕು ಹಾಗೂ ಜಿಲ್ಲೆಯ ರಾಜ್ಯದಲ್ಲೇ ಅತಿ ಹೆಚ್ಚಿನ ರೈತರ ಆತ್ಮಹತ್ಯೆಗಳು ಸಂಭವಿಸುತ್ತಿದ್ದು ರಾಜ್ಯ ಸರ್ಕಾರ ಕೂಡಲೇ ಮೇವು ಪಶು ಆಹಾರ ಬೆಲೆ ಸಾಕಾಣಿಕೆ ಮುಂತಾದ ಉತ್ಪನ್ನ ವೆಚ್ಚಗಳ ಪರಿಗಣಿಸಿ ಹಾಲಿಗೆ ಲೀಟರ್ಗೆ ಕನಿಷ್ಠ 30 ಗುರು ಕಲೆ ನಿಗದಿ ಮಾಡಬೇಕು ಕಳೆದ ಆರು ತಿಂಗಳಿಂದ ನಿಲ್ಲಿಸಿರುವ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರೇಷ್ಮೆ ಬೆಲೆ ಕುಸಿದು ರೇಷ್ಮೆಗೆ ಪ್ರತಿ ಕೆಜಿಗೆ ಕನಿಷ್ಠ ಐನೂರು ನಿಗದಿ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ರೇಷ್ಮೆ ಬೆಲೆ ತಾರತಮ್ಯ ಮಾಡದೇ ಎಲ್ಲ ತಳಿಯ ರೇಷ್ಮೆಗೆ ಕೆಜಿಗೆ ಕನಿಷ್ಠ ಐವತ್ತು ರೂಪ ಸಾಧನ ನೀಡಬೇಕು ಹಾಗೂ ಡಾಕ್ಟರ್ ಬಸವರಾಜ್ ಸಮಿತಿ ಶಿಫಾರಸ್ಸನ್ನು ಅನುಷ್ಠಾನಗೊಳಿಸಬೇಕು ಮತ್ತ ಕುಟ್ಟಲೇಕೆ ಎರಡು ಸಾವಿರದ ಇನ್ನೂರು ದರ ನಿಗದಿ ಮಾಡಬೇಕು ಒಣಗಿದ ತೆಂಗಿನ ಮರಗಳಿಗೆ ಪರಿಹಾರ ನೀಡಲು ಸರ್ಕಾರ ಅರ್ಜಿ ಪಡೆದು ಎರಡು ವರ್ಷಗಳಾದರೂ ಪರಿಹಾರ ಹಣ ಬಂದಿಲ್ಲ ಕೂಡಲೇ ಹಣ ಬಿಡುಗಡೆ ಮಾಡಬೇಕು ತಾಲ್ಲೂಕಿನ ಎಲ್ಲ ಕೆರೆ ಕಟ್ಟೆಗಳಿಗೆ ನೀರು ತುಂಬಿಸಬೇಕು ಒತ್ತುವರಿಯಾಗಿರುವ ಕೆರೆಗಳ ಅಳತೆ ಮಾಡಿಸಿ ಕೆರೆಗಳಿಗೆ ಅಭಿವೃದ್ಧಿಪಡಿಸಬೇಕು ಕಳೆದ ಹಿಂಗಾರು ಹಂಗಾಮಿನ ಭತ್ತವನ್ನು ಖರೀದಿ ಕೇಂದ್ರಕ್ಕೆ ಸರಬರಾಜು ಮಾಡಿದ ರೈತರಿಗೆ ಭತ್ತದ ಹಣ ಪಾವತಿ ಮಾಡಬೇಕು ತಾಲ್ಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಅದನ್ನು ಕಡಿವಾಣ ಹಾಕಲು ಮುಂದಾಗಬೇಕು ಇಲ್ಲದಿದ್ದರೆ ಹಗಲು ರಾತ್ರಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ನಂತರ ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಬೋರಾಪುರ ಶಂಕರೇಗೌಡ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಮೇಶ್ ಪ್ರಧಾನ ಕಾರ್ಯದರ್ಶಿ ವೈಕೆ ರಾಮೇಗೌಡ.ದೇಸಿ ಪ್ರಕಾಶ್ ಕೆಜಿ ಉಮೇಶ್ ಪ್ರಭುಲಿಂಗು ತಮ್ಮೇಗೌಡ ಲಿಂಗೇಗೌಡ ಕೆಂಪೇಗೌಡ ತಮ್ಮನಗೌಡ ಶ್ರೀಧರ ಮಾದೇಗೌಡ ಬಸವರಾಜು ರಾಮಲಿಂಗೇ ಮಹೇಶ ಗಣೇಶ ಚಂದ್ರು ಗದ್ದ ಲಿಂಗೇಗೌಡ ಬಸವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


