Connect with us

ದಿನದ ಸುದ್ದಿ

ಪರ್ಯಾಯ ಸಂವಿಧಾನ ರಚನೆ ವಿರೋಧಿಸಿ ಪ್ರತಿಭಟನೆ ; ಡಿಸಿಗೆ ಮನವಿ

Published

on

ಸುದ್ದಿದಿನ,ದಾವಣಗೆರೆ:ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರತದ ಏಕತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಪರ್ಯಾಯ ಸಂವಿಧಾನದ ಕರಡನ್ನು ಸಿದ್ಧಪಡಿಸಿ, ಅದನ್ನು ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಮನುವಾದಿಗಳಿಗೆ ಧಿಕ್ಕಾರವಿರಲಿ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಗಡಿ ಕಿಡಿಕಾರಿದರು.

ನಗರದ ಜಾಗತಿಕ ಲಿಂಗಾಯತ ಮಹಾಸಭಾ, ಜಾಗೃತ ಭಾರತ ವಿಚಾರ ವೇದಿಕೆ, ಶರಣ ಸಾಹಿತ್ಯ ಪರಿಷತ್ತು, ತಾಲ್ಲೂಕು ಘಟಕ ಹಾಗೂ ಬಸವಪರ, ದಲಿತಪರ, ಪ್ರಗತಿಪರ ಸಂಘಟನೆಗಳ ವೇದಿಕೆಯ ಪದಾಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಪರ್ಯಾಯ ಸಂವಿಧಾನ ರಚನೆಗೆ ಸಿದ್ದವಾಗಿರುವವರ ವಿರುದ್ಧ ಪ್ರತಿಭಟನೆ ನಡೆಸಿದರು.

ಮೂಲಭೂತವಾದಿಗಳು ಒಂದು ಧರ್ಮವನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಸಂವಿಧಾನ ಬದಲಾವಣೆಗೆ ಮುಂದಾಗಿರುವ ಈ ಕ್ರಮವು ಭಾರತದ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದ್ದು, ಇವರ ಈ ನಡೆಯು ಭಾರತದ ಕಾನೂನಿನ ಉಲ್ಲಂಘನೆ ಮಾತ್ರವಲ್ಲದೆ ದೇಶದ್ರೋಹಿ ಕೃತ್ಯವೂ ಆಗಿರುತ್ತದೆ ಎಂದು ಜಾಗೃತ ಭಾರತ ವಿಚಾರ ವೇದಿಕೆ ಸಂಚಾಲಕ ಡಾ.ಕೆ.ಎ.ಓಬಳೇಶ್ ಆಕ್ರೋಶವ್ಯಕ್ತಪಡಿಸಿದರು.

 

ಸಂವಿಧಾನ ವಿರೋಧಿ ಕೃತ್ಯವನ್ನು ದಾವಣಗೆರೆ ಜಿಲ್ಲೆಯ ಎಲ್ಲಾ ಪ್ರಗತಿಪರ ಸಂಘಟನೆಗಳು ಅತ್ಯಂತ ಉಗ್ರವಾಗಿ ಖಂಡಿಸುತ್ತಿದ್ದು, ಇದು ಹೀಗೆ ಮುಂದುವರೆದರೆ ಇದರ ವಿರುದ್ಧ ದೇಶವ್ಯಾಪ್ತಿ ಉಗ್ರ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ರುದ್ರೇ ಗೌಡ ಅವರು ಎಚ್ಚರಿಕೆ ನೀಡಿದರು.

ನಂತರ ಎಲ್ಲಾ ಸಂಘಟನೆಯ ಪದಾಧಿಕಾರಿಗಳು ಡಿಸಿ ಕಚೇರಿಗೆ ತೆರಳಿ ಮನವಿಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಂದಗಲ್‌ ಗ್ರಾಮ ಪಂಚಾಯಿತಿ ನೂತನ ಆಧ್ಯಕ್ಷರಾಗಿ ಎಲ್‌.ಆರ್.‌ ಚಂದ್ರಪ್ಪ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ತಾಲೂಕಿನ ಕಂದಗಲ್‌ ಗ್ರಾಮ ಪಂಚಾಯಿತಿಯ ನೂತನ ಆಧ್ಯಕ್ಷರಾಗಿ ಫೆ.21 ರಂದು ಎಲ್‌.ಆರ್.‌ ಚಂದ್ರಪ್ಪ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಗೆ ಸಾಮಾನ್ಯ ಪುರುಷ ಮೀಸಲಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಆಧಿಕಾರಿಯಾಗಿ ಕೋಆಪರೇಟಿವ್‌ ಸೊಸೈಟಿಯ ನಿಬಂಧಕರಾದ ಮಂಜುಳಾ ಅವರು ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಿಡಿಓ ಬಿ.ಆರ್‌ ಹೇಮಲತ, ಕಾರ್ಯದರ್ಶಿ ಪುಟ್ಟಣ್ಣ, ಉಪಾಧ್ಯಕ್ಷೆ ಶ್ವೇತ ಮಾರುತಿ ಗ್ರಾಮ ಪಂಚಾಯತಿ ಸದಸ್ಯರಾದ ಬಕ್ಕಳ್ಳಿ ಹನುಮಮ್ಮ, ಸುಂದರಮ್ಮ, ಶಿವಲಿಂಗಮ್ಮ, ಕರಿಯಮ್ಮ, ಜ್ಯೋತಿ ಮುಧೋಳ, ಓಂಕಾರಪ್ಪ‌ ಕೆ.ವಿ, ಎಂ.ಬಿ ಹಾಲೇಶ್, ಕೋಟ್ಯಪ್ಪ, ಚನ್ನಬಸಪ್ಪ ಜಿ.ಎಸ್‌, ಕೆ.ಜಿ.ರಾಜೇಶ್‌, ಪಂಚಾಯಿತಿ ಸಿಬಂಧಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು:ಕಾವೇರಿ ನಿವಾಸದಲ್ಲಿ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಸೊಮವಾರ ನನ್ನನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದರು. ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯವಿರುವವುಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಸಿಎಂ ತಮ್ಮ ಸೋಶಿಲ್‌ ಮೇಡಿಯಾದಲ್ಲಿ ಪೋಸ್ಟ್‌ ಹಾಕಿದ್ದಾರೆ.

ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮ ಸರ್ಕಾರ. ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ ಎಂದು ಕಿಡಿಕಾರಿದ್ದಾರೆ.

ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು, ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ.

ಗೋರುಚ ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಲಿಂಗಾಯತ ಮಠಾಧೀಶರಿಂದ ಸಿಎಂಗೆ ಮನವಿ

Published

on

ಸುದ್ದಿದಿನಡೆಸ್ಕ್:ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ಶರಣ ಸ್ಮಾರಕ ರಕ್ಷಣಾ ಪ್ರಾಧಿಕಾರ ರಚನೆ, ಬಸವ ತತ್ವ ಪ್ರಚಾರಕ್ಕೆ 500 ಕೋಟಿ ನೆರವು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಿಂಗಾಯತ ಮಠಾಧೀಶರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಠಾಧೀಶರ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending