ದಿನದ ಸುದ್ದಿ
ದಾವಣಗೆರೆ | ಶಿಷ್ಯವೇತನಕ್ಕಾಗಿ ಬಿಕ್ಷೆ ಬೇಡಿ ವೈದ್ಯಕೀಯ ವಿಧ್ಯಾರ್ಥಿಗಳ ಪ್ರತಿಭಟನೆ : ಈ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿ
ಸುದ್ದಿದಿನ,ದಾವಣಗರೆ : 16 ತಿಂಗಳ ಶಿಷ್ಯ ವೇತನಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬರು ಕುಸಿದುಬಿದ್ದರು.
ಇಲ್ಲಿನ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೂಜಾ ಕಾಮತ್ ಎಂಬ ವಿದ್ಯಾರ್ಥಿ ತಲೆ ಸುತ್ತಿ ಬಂದು ಬಿದ್ದರು. ತಕ್ಷಣ ಅಲ್ಲಿದ್ದ ವಿದ್ಯಾರ್ಥಿಗಳು ನೀರು ಕುಡಿಸಿ ಸಮಾಧಾನ ಪಡಿಸಿದರು.
ನಗರದ ಜಯದೇವ ವೃತ್ತದಲ್ಲಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನವಾದ ಇಂದು ಸಹ ಮುಂದುವರೆದು ಸಾರ್ವಜನಿಕರಿಂದ ಭಿಕ್ಷೆ ಬೇಡಿದ ವೈದ್ಯಕೀಯ ವಿಧ್ಯಾರ್ಥಿಗಳು.ವೈದ್ಯರಿಗೆ ಭಿಕ್ಷೆ ನೀಡಿ ಎಂದು ಮನವಿ ಮಾಡಿಕೊಂಡ ವಿಧ್ಯಾರ್ಥಿಗಳು.ಭಿಕ್ಷೆ ಬೇಡುವ ಮುಲಕ ಸರ್ಕಾರಕ್ಕೆ ಎಚ್ಚರಿಸಿದರು ವೈದ್ಯಕೀಯ ವಿದ್ಯಾರ್ಥಿಗಳು.
ಸರ್ಕಾರಿ ಖೋಟಾದಡಿ ಪ್ರವೇಶ ಪಡೆದಿರುವ ಗೃಹ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ 2ನೇ ದಿನವಾದ ಇಂದು ಸಹ ಪ್ರತಿಭಟನೆ ಮುಂದುವರೆದಿದೆ ಪ್ರಾಣದ ಹಂಗು ತೊರೆದು ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಆದರೂ ಸರ್ಕಾರ 16 ತಿಂಗಳಿನಿಂದ 220 ವಿದ್ಯಾರ್ಥಿಗಳಿಗೆ 8 ಕೋಟಿ ರೂ ಶಿಷ್ಯ ವೇತನ ಬಾಕಿ ಉಳಿಸಿಕೊಂಡಿದೆ ಎಂದು ದೂರಿದರು.
ಸರ್ಕಾರ ಶಿಷ್ಯ ವೇತನ ನೀಡದಿದ್ದರು ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಆದರೇ 16 ತಿಂಗಳ ಶಿಷ್ಯವೇತನ ನೀಡದೆ ಸರ್ಕಾರ ಸತಾಯಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಗಿರೀಶ್ ಅನುಮತಿ ಇಲ್ಲದೆ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಹೇಳಿದರು. ವಿದ್ಯಾರ್ಥಿಗಳು ನಮ್ಮ ಸಮಸ್ಯೆ ಬಗೆಹರಿಸಬೇಕೆಂದು ಎಂದು ಮನವಿ ಮಾಡಿದರು.
ಈ ವೇಳೆ ಪ್ರತಿಭಟನಾ ನಿರತ ವೈದ್ಯಕೀಯ ವಿದ್ಯಾರ್ಥಿನಿ ಪೂಜಾ ಪ್ರಜ್ಞೆ ತಪ್ಪಿ ಬಿದ್ದರು ಕೂಡಲೇ ಸ್ಥಳದಲ್ಲೇ ಸಹಪಾಠಿಗಳು ಪ್ರಾಥಮಿಕ ಚಿಕಿತ್ಸೆ ನೀಡಿದ ಘಟನೆಯೂ ಜರುಗಿದೆ.
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ನಾಗರಾಜು, ಡಿಎಚ್ಒ ಡಾ.ರಾಘವೇಂದ್ರಸ್ವಾಮಿ ತಹಶೀಲ್ಧಾರ್ ಗಿರೀಶ್ ಭೇಟಿ ನೀಡಿದ್ದರು.
ವೈದ್ಯಕೀಯ ವಿದ್ಯಾರ್ಥಿಗಳ ಶೀಷ್ಯ ವೇತನ ಪಾವತಿ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಈ ವಿಚಾರ ಕುರಿತಂತೆ ಮ್ಯಾನೇಜ್‍ಮೆಂಟ್‍ನವರು ಹಾಗೂ ಮುಖ್ಯಂತ್ರಿಗಳು ಮಾತನಾಡಲಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ಈ ವೇಳೆ ಲಿಖಿತ ರೂಪದಲ್ಲಿ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟುಹಿಡಿದ ಘಟನೆ ಜರುಗಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಜಿಲ್ಲಾಡಳಿತ ವಿದ್ಯಾರ್ಥಿಗಳ ಪರವಾಗಿದೆ.ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ವಿದ್ಯಾರ್ಥಿಗಳು ಕೆಲಸ ಮಾಡಿದ್ದಾರೆ ಅದಕ್ಕೆ ಧನ್ಯವಾದಗಳನ್ನು ಹೇಳಿದ್ದೇವೆ.
ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಗಂಭೀರವಾಗಿ ಪ್ರಯತ್ನ ಮಾಡುತ್ತಿದೆ ಆದರೆ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು. ಎಲ್ಲಾ ನಿರ್ಧಾರಗಳು ಸರ್ಕಾರದ ಮಟ್ಟದಲ್ಲೇ ತೀರ್ಮಾನವಾಗಬೇಕಿದೆ.
ಪ್ರತಿಭಟನೆ ಕೈಬಿಡದಿದ್ದರೆ ಕಾನೂನು ರೀತಿ ಕ್ರಮ ವಹಿಸುವುದು ಅನಿವಾರ್ಯವಾಗುತ್ತದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸಹ ವಿದ್ಯಾರ್ಥಿಗಳಿಗೆ ತಿಳಿಹೇಳಿದ್ದಾರೆ. ಪ್ರತಿಭಟನೆ ಮಾಡುವುದು ಸರಿಯಲ್ಲ ಕೂಡಲೇ ಹಿಂಪಡೆಯಿರಿ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243