Connect with us

ದಿನದ ಸುದ್ದಿ

KEA | ನಾಳೆ ಪಿಎಸ್‍ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 3 ರಂದು ಪಿಎಸ್‍ಐ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯಲ್ಲಿ ಕಟ್ಟೆಚ್ಚರವಹಿಸಿ ಯಾವುದೇ ದೂರು, ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಅ.1 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಟೋಬರ್ 3 ರಂದು ಪಿಎಸ್‍ಐ ಹುದ್ದೆಗಳ ಆಯ್ಕೆಗೆ 2 ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ನಂತರ ಮಧ್ಯಾಹ್ನ 12-30 ರಿಂದ 2ಗಂಟೆವರೆಗೆ 2 ನೇ ಅವಧಿಯ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಅಲ್ಲದೇ ಬೆಳಿಗ್ಗೆ 9-45ರ ನಂತರ ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಆವರಣವನ್ನು ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ತಿಳಿಸಿದರು.

ಮೊದಲನೆ ಪತ್ರಿಕೆಯ ನಂತರ ಎರಡನೇ ಪತ್ರಿಕೆ ಪ್ರಾರಂಭ ಅಗುವ ಮೊದಲು ಇರುವ ಮೂವತ್ತು ನಿಮಿಷಗಳ ಕಾಲಾವಧಿಯಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರ ಹೋಗಲು ಅನುಮತಿಸುವುದಿಲ್ಲ. ಅಭ್ಯರ್ಥಿಗಳು ತಮ್ಮೊಡನೆ ವೈದ್ಯಕೀಯ ಔಷಧಿ, ಮಾತ್ರೆಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕೆಂದು ಮಾಹಿತಿ ನೀಡಿದರು.

ಅಭ್ಯರ್ಥಿಯು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮೊದಲ ತಪಾಸಣೆಗೆ ಒಳಗಾಗಬೇಕು, ಅಭ್ಯರ್ಥಿಯು ಕೇಂದ್ರದ ಆವರಣವನ್ನು ಪ್ರವೇಶಿಸಿದ ತಕ್ಷಣ, ಪೆಂಡಾಲಿನಲ್ಲಿ ಅವರು ತರುವ ವಸ್ತುಗಳನ್ನು ಇರಿಸಿಕೊಳ್ಳಲು ಮತ್ತು ತಪಾಸಣೆಗೆ ಒಳಗಾಗಲು ವ್ಯವಸ್ಥೆ ಮಾಡಬೇಕು, ಯಾವುದೇ ಕಾರಣಕ್ಕೆ ಪರೀಕ್ಷಾರ್ಥಿಗಳು ಒಮ್ಮೆ ಪೆಂಡಾಲ್‍ನೊಳಗೆ ತಮ್ಮ ವಸ್ತುಗಳನ್ನು ನೀಡಿದ ನಂತರ ಮತ್ತೆ ಮರಳಿ ಪಡೆಯಲು ಅನುಮತಿಸಬಾರದು. ಅಲ್ಲದೇ ಪರೀಕ್ಷೆ ಮುಗಿದ ನಂತರವೇ ಅವರ ವಸ್ತುಗಳನ್ನು ಮರಳಿ ಪಡೆಯಬೇಕು ಎಂದು ಹೇಳಿದರು.

ಅದರಲ್ಲೂ ಮುಖ್ಯವಾಗಿ ವಿರಾಮದ ಸಮಯದಲ್ಲಿ ಅವರಿಗೆ ಪ್ರತಿ ಅಭ್ಯರ್ಥಿಗಳಿಗೆ ಬಾಳೆಹಣ್ಣು ಮತ್ತು ಬಿಸ್ಕತ್ತು ಪ್ಯಾಕನ್ನು ಸರಬರಾಜು ಮಾಡಬೇಕು. ಪರೀಕ್ಷೆಯ ಕರ್ತವ್ಯಕ್ಕಾಗಿ ಒಬ್ಬ ಸ್ಕ್ವಾಡ್, ಒಬ್ಬ ವೀಕ್ಷಕ ಮತ್ತು ಒಬ್ಬ ಕಸ್ಟೋಡಿಯನ್‍ರನ್ನು ಗೊತ್ತುಪಡಿಸಲಾಗಿದೆ. ವಿರಾಮದ ವೇಳೆಯಲ್ಲಿಯೂ ಕೊಠಡಿ ಮೇಲ್ವಿಚಾರಕರು ಕೊಠಡಿಯಲ್ಲಿರಬೇಕು, ಯಾವುದೇ ಕಾರಣಕ್ಕೂ ರಿಲೀವರ್ ಇಲ್ಲದೇ ಕೊಠಡಿ ಬಿಡುವಂತಿಲ್ಲ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ, ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬ ಪರೀಕ್ಷಾರ್ಥಿಯ ಕಿವಿಗಳನ್ನು ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಇ.ಎನ್.ಟಿ.ತಜ್ಞರನ್ನು ನೇಮಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅಲ್ಲದೇ ಅವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಎಂದರು.

ಯಾವುದೇ ಅಭ್ಯರ್ಥಿ ಒಮ್ಮೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆದ ನಂತರ ಮತ್ತೆ ಹೊರಗೆ ಹೋಗುವಂತಿಲ್ಲ. ಯಾವುದೇ ಎಲೆಕ್ಟ್ರಾನಿಕ್ ಡಿವೈಸ್ ಇರುವ ಬಗ್ಗೆ ಅಭ್ಯರ್ಥಿಯ ಮೇಲೆ ಅನುಮಾನ ಕಂಡು ಬಂದರೆ ಪೊಲೀಸ್ ಅಧಿಕಾರಿಗಳ ಸಹಾಯದೊಂದಿಗೆ ಚೆಕ್ ಮಾಡಬೇಕು. ಅಲ್ಲದೇ ಪರೀಕ್ಷಾ ಕೇಂದ್ರದ ಒಳಗೆ ನಕಲು ಮಾಡುತ್ತಿರುವ ಬಗ್ಗೆ ಅನುಮಾನ ಬಂದರೆ ತಕ್ಷಣವೇ ಅವರನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ಕರೆ ತಂದು ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತಪಾಸಣೆ ಮಾಡಬೇಕು ಎಂದು ಹೇಳಿದರು.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸುವುದನ್ನು ಖಚಿತ ಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್‍ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ಕಡಿಮೆ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‍ಗಳು, ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ.

ನಿಷೇಧಿತ ವಸ್ತುಗಳ ಪಟ್ಟಿ: ಡ್ರೆಸ್‍ಕೋಡನ್ನು ಅನುಸರಿಸುವುದರ ಜೊತೆಗೆ, ಪರೀಕ್ಷಾ ಕೇಂದ್ರಕ್ಕೆ ಇಲ್ಲಿ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.

ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‍ಗಳು, ಪೆನ್‍ಡ್ರೈವ್‍ಗಳು, ಇಯರ್ ಫೋನ್‍ಗಳು, ಮೈಕ್ರೋಫೋನ್‍ಗಳು, ಬ್ಲೂಟೂಥ್ ಸಾಧನಗಳು, ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.

ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು. ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.

ಅನುಮತಿಸಲಾದ ಕೆಲ ವಸ್ತುಗಳ ವಿವರ;ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ. ಅವುಗಳಲ್ಲಿ ಪಾಸ್‍ಪೋರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗಿ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಾರ್ವಜನಿಕ ಬ್ಯಾಂಕುಗಳು, ಅಂಚೆ ಕಚೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ.ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆ ಪತ್ರ ಅಥವಾ ಪಟ್ಟಾ ಪುಸ್ತಕ, ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ, ಪಿಂಚಣಿ ಮಂಜೂರಾತಿ ಆಗಿರುವ ಆದೇಶ, ಎನ್‍ಆರ್‍ಇಜಿಎಸ್‍ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ, ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ, ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವರ್ಷ ಒಳಗಿನ ವಯೋಮಾನದವರಾಗಿದ್ದು ಮಾಸಿಕ ರೂ.9,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯದಿನವಾಗಿರುತ್ತದೆದಾವಣಗೆರೆ ತಾಲ್ಲೂಕು ಹಳೇಬಾತಿ, ಆಲೂರಟ್ಟಿ, ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮ ಪಂಚಾಯಿತಿಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ದೂರವಾಣಿ:08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಮೊ:9590829024 ಮತ್ತು ಚನ್ನಗಿರಿ ತಾಲ್ಲೂಕು ಮೊ:9945738141, ಹರಿಹರ ತಾಲ್ಲೂಕು ಮೊ:9945458058 ಇವರನ್ನು ಸಂಪರ್ಕಿಸಬೇಕೆಂದು ಕಲ್ಯಾಣಾಧಿಕಾರಿ ಡಾ.ಕೆ.ಕೆ ಪ್ರಕಾಶ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಂಪಿ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ; ನಾಡೋಜ ಗೌರವ ಪದವಿ ಪ್ರದಾನ

Published

on

ವರದಿ: ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸುದ್ದಿದಿನ,ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ಸಮಾರಂಭವು ಶುಕ್ರವಾರ ರಂದು ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಿತು.

ಈ ವೇಳೆ ಗಣನೀಯ ಸಾಧನೆ ಮಾಡಿದ ಮೂರು ಜನ ಗಣ್ಯರಿಗೆ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಟಿತ ಪದವಿ ನಾಡೋಜ ಗೌರವ ಪದವಿಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

ನಾಡೋಜ ಗೌರವ ಪದವಿಗೆ ಬಾಜನರಾದವರು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ಶಿವರಾಜ್ ವಿ.ಪಾಟೀಲ್, ಪ್ರಖ್ಯಾತ ಬರಹಗಾರರು ಮತ್ತು ಚಿಂತಕರಾದ ಕುಂ.ವೀರಭದ್ರಪ್ಪ (ಕುಂ.ವೀ), ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಎಂ.ವೆಂಕಟೇಶ್ ಕುಮಾರ್ ಇವರಿಗೆ ಪ್ರದಾನ ಮಾಡಲಾಯಿತು.

ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ತುಮಕೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ರಾಜಾಸಾಬ್ ಎಂ.ಎಚ್, ಹಂಪಿ ವಿವಿ ಕುಲಪತಿ ಡಾ.ಡಿ.ವಿ.ಪರಶಿವಮೂರ್ತಿ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ನಾಳೆ ಡಾ.ಬಾಬು ಜಗಜೀವನ ರಾಂ 118ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆಯ ಆವರಣದಲ್ಲಿರುವ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರದಲ್ಲಿ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಂ ರವರ 118ನೇ ಜನ್ಮ ದಿನಾಚರಣೆಯನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್. ಜಿಲ್ಲಾ ಪೆÇಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತರಾದ ರೇಣುಕಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ನಾಗರಾಜ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಿವೃತ್ತ ಪ್ರಾಧ್ಯಪಕರಾದ ಡಾ.ಎ.ಬಿ.ರಾಮಚಂದ್ರಪ್ಪ ವಿಶೇಷ ಉಪನ್ಯಾಸ ನೀಡುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending