ದಿನದ ಸುದ್ದಿ

ಪಿಎಸ್ಐ ಪರೀಕ್ಷೆ ಅಕ್ರಮ ; ಅಮೃತ್ ಪಾಲ್ ಕೇವಲ ಸೇಫ್ಟಿ ಪಿನ್ : ಪ್ರೀಯಾಂಕ ಖರ್ಗೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಂಧಿತರಾದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಕೇವಲ ಸೇಫ್ಟಿ ಪಿನ್.. ಮೂಲ ಕಿಂಗ್‌ಪಿನ್‌ಗಳು ಯಾರು? ಸರ್ಕಾರದ ಪ್ರಭಾವಿಗಳನ್ನು ರಕ್ಷಿಸಲು ಅಮೃತ್ ಪಾಲ್ ಅವರನ್ನ ಬಂಧಿಸಲಾಗಿದೆ ಅಂತ ಶಾಸಕ ಪ್ರೀಯಾಂಕ ಖರ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ವಿಧಾನಸೌದದ ಮೂರನೇ ಮಹಡಿಯಲ್ಲಿನ ಅನೇಕರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಾಜಿ ಸಿಎಂ ಅವರ ಕ್ಯಾಂಡಿಡೇಟ್ಸ್ ಎಷ್ಟು? ಅವರ ಮಗನ ಕ್ಯಾಂಡಿಡೇಟ್ಸ್ ಎಷ್ಟು? ಅಂದಿನ ಗೃಹ ಸಚಿವರ ಕ್ಯಾಂಡಿಡೇಟ್ಸ್ ಎಷ್ಟು ಇದ್ರು ಎಲ್ಲಾ ಹೊರಗೆ ಬರಬೇಕಲ್ವಾ?ನೀವು ಭ್ರಷ್ಟರು ಇಲ್ಲದಿದ್ರೆ ಪಿಎಸ್ಐ ಹಗರಣ ನ್ಯಾಯಾಂಗ್ ತನಿಖೆಗೆ ವಹಿಸಿ ಎಂದು ಸವಾಲು ಎಸೆದರು‌..

ಇದೆವೇಳೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಔಟ್ ಲುಕ್ ಪತ್ರಿಕೆಯಲ್ಲಿ ಕರ್ನಾಟಕ‌ ಅತ್ಯಂತ ಭ್ರಷ್ಟ ಸರಕಾರ ಎಂದು‌ ಸುದ್ದಿ‌ ಬಂದಿತ್ತು ಮತ್ತೆ ಈಗ ಅದೇ ಸುದ್ದಿಯನ್ನೇ ಮರುಪ್ರಕಟ ಮಾಡಬೇಕಿದೆ. ಪಿಎಸ್ಐ ಹಗರಣದ ಬಗ್ಗೆ ಸದನದಲ್ಲೇ ಶಾಸಕ ರವಿ‌ ಅವರ ಪ್ರಶ್ನೆಗೆ ಉತ್ತರಿಸಿ ಉನ್ನತ ತಂಡದ ಅಧಿಕಾರಿಗಳು ಕ್ಲೀನ್ ಚಿಟ್ ಕೊಟ್ಟಿರುವುದಾಗಿ ಗೃಹ ಸಚಿವರು ಉತ್ತರಿಸಿದ್ದರು. ಈಗ ಎಡಿಜಿಪಿ ಅರೆಸ್ಟ್ ಆಗಿದ್ದಾರೆ. ಗೃಹ ಸಚಿವರು ನಮ್ಮ ಮೇಲೆ ಟೀಕೆ ಮಾಡುತ್ತಿದ್ದಾರೆ. ಅವರಿಗೆ ಕಾಮನ್ ಸೆನ್ಸ್ ಇಲ್ಲವಾ ? ಪಿಎಸ್ ಐ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದೇ ಸಮರ್ಥಿಸಿದ್ದ ಗೃಹ ಸಚಿವರು ಈಗ ಎಡಿಜಿಪಿ ಸೇರಿದಂತೆ ಸುಮಾರು 60 ಜನ ಅಧಿಕಾರಿಗಳು ಹಾಗೂ ಇತರರು ಅರೆಸ್ಟ್ ಆಗಿದ್ದಾರೆ ಗೃಹ ಸಚಿವರು ಈಗೇನು ಹೇಳುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷ ರಿಜೆಕ್ಟೆಡ್ ಪಕ್ಷ ಎಂದು ಮಾಜಿ‌ ಸಚಿವ ಈಶ್ವರಪ್ಪ ಹೇಳಿಕೆಗೆ ‌ಉತ್ತರಿಸಿದ‌ ಪ್ರಿಯಾಂಕ್ ಖರ್ಗೆ, ಸ್ವತಃ ಈಶ್ವರಪ್ಪನವರೇ ರಿಜೆಕ್ಟೆಡ್ ಆಗಿದ್ದಾರೆ. ಗುತ್ತಿಗೆದಾರರ ಕಮೀಷನ್ ಕೇಸಲ್ಲಿ ಏನೂ ನಡೆದೇ ಇಲ್ಲ ಅಂದಿದ್ದ ಅವರೇ ರಾಜೀನಾಮೆ ‌ನೀಡಿದರಲ್ಲ ಎಂದು ಕುಟುಕಿದರು. ಮಹಾರಾಷ್ಟ್ರ ಸೇರಿದಂತೆ ಬಹುತೇಕ ಕಡೆ ಬಿಜೆಪಿ‌ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಶಾಸಕರನ್ನೇ ಖರೀದಿ ಮಾಡಿ ಸರ್ಕಾರ ರಚನೆ ಮಾಡಿದ್ದಾರೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version