ದಿನದ ಸುದ್ದಿ

ಪಿ.ಎಸ್.ಐ. ಅಕ್ರಮ ನೇಮಕಾತಿ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಬಸವರಾಜ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಕಲಬುರಗಿ: ಪಿ.ಎಸ್.ಐ. ಅಕ್ರಮ ನೇಮಕಾತಿ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಅಕ್ರಮ ನೇಮಕಾತಿ ಬಗ್ಗೆ ಪ್ರಾಥಮಿಕ ತನಿಖೆಯಿಂದ ಮಾಹಿತಿ ಬಂದ ಕೂಡಲೇ ಸರ್ಕಾರ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಿದೆ. ಈಗಾಗಲೇ ತನಿಖೆ ಪ್ರಗತಿಯಲ್ಲಿದ್ದು, ಕಲಬುರಗಿಯಲ್ಲಿ ಕೆಲವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದೆ ಎಂದರು.

ಪಿಎಸ್ಐ ನೇಮಕಾತಿ ಮರುಪರೀಕ್ಷೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಈ ಕುರಿತಂತೆ ತನಿಖೆಯ ಮಧ್ಯಂತರ ವರದಿ ಕೇಳಲಾಗಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version