ದಿನದ ಸುದ್ದಿ

ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ದೆಹಲಿ ಪೊಲೀಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಸಬ್-ಇನ್ಸ್‍ಪೆಕ್ಟರ್(SI) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ https://ssc.nic.in
ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಜು.16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಅರ್ಹತೆ

ಅರ್ಜಿದಾರರ ವಯಸ್ಸು 20 ರಿಂದ 25 ವಯೋಮಾನದಾವರಾಗಿರಬೇಕು. (02-01-1996 ರಿಂದ 01-01-2001 ರೊಳಗೆ ಜನಿಸಿರಬೇಕು), ಪ. ಜಾತಿ/ ಪ. ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಹಾಯವಾಣಿ –08025502520/9483862020 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ. ದೂರವಾಣಿ ಸಂಖ್ಯೆ: 08192 259446 ಇಲ್ಲಿಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version