ದಿನದ ಸುದ್ದಿ
ಖಾಸಗಿ ಅನುದಾನಿತ ಪಿಯು ಕಾಲೇಜು ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ್ರು ಶಿಕ್ಷಣ ಸಚಿವ..!
ಸುದ್ದಿದಿನ,ಬೆಂಗಳೂರು:ವೇತನದ ನಿರೀಕ್ಷೆಯಲ್ಲಿರುವ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ವೇತನಕ್ಕಾಗಿ ರಾಜ್ಯ ಸರ್ಕಾರ 143.37 ಕೋಟಿ ರೂ. ಬಿಡುಗಡೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಸುರೇಶ್ ಕುಮಾರ್, ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ, ಬೋಧಕೇತರ ಸಿಬ್ಬಂದಿಯ ಮೇ, ಜೂನ್, ಜುಲೈ ವೇತನಕ್ಕಾಗಿ ರಾಜ್ಯ ಸರ್ಕಾರ 143.37 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243