Connect with us

ದಿನದ ಸುದ್ದಿ

ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆ ಸಂಬಂಧ ಮಾರ್ಗಸೂಚಿ ಪ್ರಕಟ ; ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ : ಜಿಲ್ಲಾಧಿಕಾರಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ರಾಜ್ಯದಲ್ಲಿ ಕೋವಿಡ್ 19 ಓಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದು ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯ ಮಟ್ಟದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು ಜಿಲ್ಲೆಗೂ ಅನ್ವಯಿಸಲಿದ್ದು, ಜಿಲ್ಲೆಯಾದ್ಯಂತ ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಕೋವಿಡ್ 19 ಸೋಂಕು ಹರಡುವಿಕೆ ನಿಯಂತ್ರಿಸುವ ಸಂಬಂಧದಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಕಂಡುಬಂದಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್‍ಮಸ್ ಹಾಗೂ ಹೊಸವರ್ಷವನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ ಇದೆ.

ಈ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಾಮೂಹಿಕ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಮತ್ತು ಪಬ್, ಬಾರ್, ರೆಸ್ಟೋರೆಂಟ್, ರೆಸಾರ್ಟ, ಕ್ಲಬ್ ಹಾಗೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಹ ಸ್ಥಳಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಲಾಗಿದೆ.

ಕ್ರಿಸ್‍ಮಸ್ ಆಚರಣೆ ಮಾರ್ಗಸೂಚಿ

ಚರ್ಚ್ ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆಗಳು ಇತ್ಯಾದಿಗಳನ್ನು ಕೋವಿಡ್ ಸಮುಚಿತ ವರ್ತನೆ ಅನುಸರಿಸಬೇಕು. ಆಚರಣೆಗಳು ಅಥವ ಪ್ರಾರ್ಥನೆಗಳನ್ನು ನಡೆಸಲು ಯಾವುದೇ ಸಾರ್ವಜನಿಕ ಸ್ಥಳಗಳು ರಸ್ಥೆಗಳು, ಉದ್ಯಾನವನಗಳನ್ನು ಬಳಸುವಂತಿಲ್ಲ.

ಹೊಸ ವರ್ಷಾಚರಣೆ ಮಾರ್ಗಸೂಚಿ

ಈ ಮಾರ್ಗಸೂಚಿಯು ಡಿಸೆಂಬರ್ 30 ರಿಂದ ಜನವರಿ 02 ರವರಗೆ ಜಾರಿಯಲ್ಲಿರುತ್ತದೆ. ಕ್ಲಬ್‍ಗಳು, ಪಬ್‍ಗಳು, ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು, ಉದ್ಯಾನವನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ, ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರುವುದಿಲ್ಲ.

ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸಬಾರದು. ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು, ಕ್ಲಬ್‍ಗಳು, ಪಬ್‍ಗಳು ಎಂದಿನಂತೆ ಕೋವಿಡ್ ಸಮುಚಿತ ವರ್ತನೆಯೊಂದಿಗೆ ಸಿಬ್ಬಂದಿಗಳು ಆರ್‍ಟಿಪಿಸಿಆರ್ ನೆಗೆಟಿವ್ ಮತ್ತು 2 ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆಯುವ ಮೂಲಕ ಕಾರ್ಯನಿರ್ವಹಿಸಬಹುದು.

ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು ಕ್ಲಬ್‍ಗಳು, ಪಬ್‍ಗಳಿಗೆ ಪ್ರವೇಶ ನೀಡುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವುದನ್ನು ಪ್ರದರ್ಶಿಸಿದ ನಂತರವೇ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು. ಅಪಾರ್ಟ್‍ಮೆಂಟ್ ಅಸೋಷಿಯೇಶನ್ ಗೆ ಸಂಭಂಧಪಟ್ಟಂತೆ ಸಾಮಾಜಿಕ ಅಂತರ ಹಾಗೂ ಕೋವಿಡ್ ಸಮುಚಿತ ವರ್ತನೆಯೊಂದಿಗೆ ತಮ್ಮ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿಸಲಾಗಿದೆ.

ಆದರೆ ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಪ್ಲೋರ್‍ನಂತಹ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಚರಿಸುವಂತಿಲ್ಲ. ಈ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಸಂಘಟಕರು ಜವಾಬ್ದಾರರಾಗಿರುತ್ತಾರೆ.

ಸರ್ಕಾರ ಕಳೆದ ಡಿ. 03 ರಂದು ಹೊರಡಿಸಿರುವ ಮಾರ್ಗಸೂಚಿಗಳನ್ನು ಕೂಡ ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು, ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು.

ಸರ್ಕಾರದ ಮಾರ್ಗಸೂಚಿ, ನಿಬಂಧನೆಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದ ಪಕ್ಷದಲ್ಲಿ ಅಂತಹ ವ್ಯಕ್ತಿಗಳ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ ಅನುಸಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending