ದಿನದ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ : ಕೆ ಎಸ್ ಆರ್ ಟಿ‌ ಸಿ ಬಸ್ ನಲ್ಲಿ ಉಚಿತ ಪ್ರಯಾಣ..!

Published

on

ಸುದ್ದಿದಿನ,ಬೆಂಗಳೂರು : ಮಾರ್ಚ್ 1ರಿಂದ 18ರವರೆಗೆ ನಡೆಯುವ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆ ಎಸ್ ಆರ್ ಟಿ‌ ಸಿ ಯು ಉಚಿತವಾಗಿ ಪ್ರಯಾಣ ಮಾಡುವ ಅವಕಾಶ ಮಾಡಿಕೊಟ್ಟಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ತಮ್ಮ ಪರೀಕ್ಷಾ ಕೇಂದ್ರದವರೆಗೆ ಹೋಗುವ ಕೆ ಎಸ್ ಆರ್ ಟಿ‌ ಸಿ ಬಸ್ ಗಳಲ್ಲಿ ಪ್ರಯಾಣಿಸಬಹುದು.

ಪದವಿ ಪೂರ್ವ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳು ಓದುತ್ತಿರುವ ಕಾಲೇಜಿನ ಹೊರತಾಗಿ ಬೇರೆ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರವಿರುತ್ತದೆ ಆದ್ದರಿಂದ ಅವರಿಗೆ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಆಯಾ ನಿಗಮದ ಬಸ್ ಗಳನ್ನು ತೆರಳಲು ಅವಕಾಶ ಮಾಡಿಕೊಡ ಬೇಕೆಂದು ಕೇಳಿತ್ತು.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಮನವಿ‌ ಗಮನಿಸಿದ ಕೆ ಎಸ್ ಆರ್ ಟಿ ಸಿ ಯು ಈ ಅವಕಾಶ ಮಾಡಿಕೊಟ್ಟಿದೆ. ಹೊರ ವಲಯ, ನಿ್ಗಗಮದ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸ ಬಹುದು. ಹಾಗೂ ಕೋರಿಕೆ ನಿಲುಗಡೆಯನ್ನು ವಿದ್ಯಾರ್ಥಿಗಳಿಗೆ ನೀಡಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version