ಸಿನಿ ಸುದ್ದಿ
ಅಪ್ಪು ಹುಟ್ಟು ಹಬ್ಬಕ್ಕೆ ಶುಭಕೋರಿದ ಗಣ್ಯರು ..!
ಸುದ್ದಿದಿನ, ಡೆಸ್ಕ್ : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣ ಪೇಸ್ ಬುಕ್ ಮತ್ತು ಟ್ವಿಟರ್ ಮೂಲಕ ಶುಭ ಕೋರಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಪುನೀತ್ ರಾಜ್ ಕುಮಾರ್ ಎಂದು ದರ್ಶನ್ ತೂಗುದೀಪ ಅವರು ಟ್ವೀಟ್ ಮಾಡಿದ್ದಾರೆ.
ಇನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ, ಹುಟ್ಟುಹಬ್ಬದ ಶಭಾಶಯಗಳು, ಒಳ್ಳೆಯದಾಗಲಿ ಎಂದು ಟ್ವೀಟ್ ಮಾಡಿದ್ದು, ಚಿತ್ರರಂಗದ ಸಾಕಷ್ಟು ಗಣ್ಯರು ಪುನೀತ್ ರಾಜ್ಕುಮಾರ್ ಗೆ ಶುಭಾಶಯ ಕೋರುತ್ತಿದ್ದಾರೆ.
ಹುಟ್ಟುಹಬ್ಬದ ವಿಶೇಷವಾಗಿ ಇಂದು ಅಪ್ಪು ಅವರ ಜೇಮ್ಸ್ ಸಿನಿಮಾದಿಂದ ಪೋಸ್ಟರ್ ಬಿಡುಗಡೆಯಾಗುತ್ತಿದೆ. ಜತೆಗೆ ನಿರ್ದೇಶಕ ಕೃಷ್ಣ ಮತ್ತು ದಿನಕರ್ ತೂಗುದೀಪ ಜೊತೆಗಿನ ಹೊಸ ಸಿನಿಮಾ ಕೂಡ ಅನೌನ್ಸ್ ಆಗಿದೆ. ಇದೆಲ್ಲದರ ನಡುವೆ ಪುನೀತ್ ರಾಜ್ ಕುಮಾರ್ ಅವರ, ಆನಂದ್ ರಾಮ್ ನಿರ್ದೇಶನದ ಬಹುನಿರೀಕ್ಷಿತ ಯುವರತ್ನ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದು, ಏಪ್ರಿಲ್ 1ಕ್ಕೆ ಯುವರತ್ನ ಸಿನಿಮಾ ತೆರೆಯ ಮೇಲೆ ಬರಲಿದ್ದಾನೆ.
Happy Returns and bst wshs @PuneethRajkumar 🤗
— Kichcha Sudeepa (@KicchaSudeep) March 17, 2021
Many more Happy returns of the Day @PuneethRajkumar. Have a good one 👍
— Darshan Thoogudeepa (@dasadarshan) March 17, 2021
Many many happy returns of the day @PuneethRajkumar sir, ‘Feel the power”promo looks fabulous 👏🏻👏🏻 pic.twitter.com/MVTk2avARJ
— Ganesh (@Official_Ganesh) March 17, 2021
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಅಪ್ಪು ಸರ್ 🤗
ನಿಮ್ಮ ಮುಂಬರುವ ಎಲ್ಲಾ Projects ಗಳಿಗೆ ನ್ನನ್ನ ಪ್ರೀತಿಯ ಶುಭ ಹಾರೈಕೆಗಳು 😊@PuneethRajkumar pic.twitter.com/euJaQFgSVQ— Sharaan (@realSharaan) March 17, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ
~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

