ದಿನದ ಸುದ್ದಿ
ಹೊರ ರಾಜ್ಯಗಳಿಂದ ಅಕ್ಕಿ ಖರೀದಿ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಬೆಂಗಳೂರು : ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಪ್ರಕ್ರಿಯೆ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದರು.
ವಿದ್ಯುತ್ ದರ ಹೆಚ್ಚಳದ ಬಗ್ಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರತಿನಿಧಿಗಳು ಕೈಗಾರಿಕಾ ಘಟಕ ಬಂದ್ ಮಾಡುವ ನಿರ್ಧಾರ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಂಸ್ಥೆಯ ಪ್ರತಿನಿಧಿಗಳನ್ನು ಕರೆದು ವಸ್ತು ಸ್ಥಿತಿ ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243