Connect with us

ಕ್ರೀಡೆ

ಫೋರ್ಬ್ಸ್ ಪಟ್ಟಿಯಲ್ಲಿ ಭಾರತದ ‌ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧೂ !

Published

on

ಸುದ್ದಿದಿನ ಡೆಸ್ಕ್: ಆಕ್ರಮಣಕಾರಿ ಆಟದ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧೂ ಈಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದ್ದಾರೆ.

ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೀಟ್ ಗಳ ಪಟ್ಟಿಯನ್ನು ಫೋರ್ಬ್ಸ್ ನಿಯತಕಾಲಿಕೆ ರೂಪಿಸಿದ್ದು, ಅದರಲ್ಲಿ ಪಿ.ವಿ.ಸಿಂಧೂ 7ನೇ ಸ್ಥಾನ ಅಲಂಕರಿಸಿದ್ದಾರೆ.
ಖ್ಯಾತ ಟೆನ್ನಿಸ್ ತಾರೆ ಸೆರೆನಾ ವಿಲಿಯಮ್ಸ್ ಸತತ ಮೂರನೇ ಬಾರಿಗೆ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ. ಈ ಪಟ್ಟಿಯ ಮೊದಲ 10 ಆಟಗಾರರಲ್ಲಿ ಬಹುತೇಕರು ಟೆನ್ನಿಸ್ ಆಟಗಾರರೇ ಇರುವುದು ವಿಶೇಷ.

Click to comment

Leave a Reply

Your email address will not be published. Required fields are marked *

ಕ್ರೀಡೆ

2024ರ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ 2025ರ ಕ್ರೀಡಾ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಕ್ರೀಡೆಗಳಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಗೌರವಿಸಲು ಪ್ರತಿ ವರ್ಷ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಮತ್ತು ಅತ್ಯುತ್ತಮ ಪ್ರದರ್ಶನಕ್ಕಾಗಿ ನೀಡಲಾಗುತ್ತದೆ. ಕ್ರೀಡೆಯಲ್ಲಿ ಜೀವಮಾನದ ಕೊಡುಗೆಗಾಗಿ ಅರ್ಜುನ ಪ್ರಶಸ್ತಿಯನ್ನು ಪರಿಚಯಿಸಲಾಗಿದೆ.

ಪ್ರತಿಷ್ಠಿತ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರನ್ನು ತರಬೇತಿ ನೀಡಿದ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗಾಗಿ ಅರ್ಹ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಂಘಗಳು ಅರ್ಜಿಗಳನ್ನು ಆನ್‌ಲೈನ್ ಪೋರ್ಟಲ್ https://dbtyas-sports.gov.in/ ನಲ್ಲಿ ನವೆಂಬರ್ 14 ರೊಳಗೆ ಸಲ್ಲಿಸಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ; ರಾಜ್ಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:2024 -25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮಹಿಳಾ ಸೇವಾ ಸಮಾಜದ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮ ಎಂ ರವರು ಜಿಲ್ಲಾಮಟ್ಟದ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು.

ದೈಹಿಕ ಶಿಕ್ಷಕರಾದ ಎಂ ಎನ್ ಮರಳ ಸಿದ್ದಪ್ಪರವರ ಮಾರ್ಗದರ್ಶನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

Olympic Games Paris 2024 | ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ; ಇಲ್ಲಿದೆ ಇಂದಿನ ಆಟಗಳ ಸಂಪೂರ್ಣ ಮಾಹಿತಿ

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.

ಈ ಮೂಲಕ ಅವರು, ಒಲಿಂಪಿಕ್ಸ್ನ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಫೈನಲ್ ಪಂದ್ಯದಲ್ಲಿ ಹೆಚ್ಚಿನ ಕಾಲ 2ನೇ ಸ್ಥಾನದಲ್ಲಿದ್ದು, ಬೆಳ್ಳಿ ಗೆಲ್ಲುವ ಸನಿಹದಲ್ಲಿದ್ದ ಅವರನ್ನು ಕೊನೆ ಕ್ಷಣದಲ್ಲಿ ಕೊರಿಯಾದ ಕಿಮ್‌ಯೆಜಿ ಹಿಂದಿಕ್ಕಿದರು. ಫೈನಲ್ಸ್ನಲ್ಲಿ ಮನುಬಾಕರ್ 221.7 ಅಂಕಗಳ ಮೂಲಕ ಕಂಚು ಪದಕ ಗೆದ್ದರೆ ದಕ್ಷಿಣ ಕೊರಿಯಾದ ಕಿಮ್‌ಯೆಜಿ 241.3 ಅಂಕಗಳ ಮೂಲಕ ಬೆಳ್ಳಿ ಹಾಗೂ ಅದೇ ರಾಷ್ಟ್ರದ ಒಹ್ ಯೆ ಜಿನ್, ದಾಖಲೆಯ 243.2 ಅಂಕಗಳ ಮೂಲಕ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಅವರ ಈ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಅವರ ಈ ಸಾಧನೆಯ ಕುರಿತು ಭಾರತಕ್ಕೆ ಹೆಮ್ಮೆಯಿದ್ದು, ಅವರು ಅನೇಕ ಕ್ರೀಡಾಪಟುಗಳು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರಪತಿಯವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮನು ಭಾಕರ್ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಭಾರತಕ್ಕೆ ಇದು ಐತಿಹಾಸಿಕ ಪದಕವಾಗಿದೆ. ಮಹಿಳಾ ಶೂಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂಡುಕೊಟ್ಟಿರುವುದರಿAದ ಇದೊಂದು ಅಸಾಮಾನ್ಯ ಹಾಗೂ ವಿಶೇಷ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.

ಇಂದು ನಡೆದ ಪುರುಷರ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತದ ಅರ್ಜುನ್ ಬಬೂಟ 630.1 ಅಂಕಗಳೊAದಿಗೆ 7ನೇ ಸ್ಥಾನಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. ಹಾಗೆಯೇ ಮಹಿಳೆಯರ 10 ಮೀಟರ್ ಏರ್ ರೈಫಲ್‌ನಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ. ರಮಿತಾ ಜಿಂದಾಲ್, 631.5 ಅಂಕಗಳೊAದಿಗೆ 5ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಮತ್ತೊರ್ವ ಮಹಿಳಾ ಶೂಟರ್ ಎಲವೆನಿಲ್ ವಲರಿವನ್ 630.7 ಅಂಕಗಳೊAದಿಗೆ 10ನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಲು ವಿಫಲರಾದರು.

ಇಂದು ನಡೆದ ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ 2 ಒಲಿಂಪಿಕ್ ಪದಕ ವಿಜೇತೆ ಭಾರತದ ಪಿ.ವಿ. ಸಿಂಧೂ, ಮಾಲ್ಡೀವ್ಸ್ನ ಫಾತಿಮತ್ ನಬಾಹ ಅಬ್ದುಲ್ ರಜಾಕ್ ಅವರನ್ನು 21-9, 21-6 ಅಂಕಗಳ ಅಂತರದಲ್ಲಿ ಮಣಿಸಿ ಶುಭಾರಂಭ ಕಂಡಿದ್ದಾರೆ. ಟೆಬಲ್ ಟೆನಿಸ್‌ನ 64ರ ಸುತ್ತಿನಲ್ಲಿ ಭಾರತದ ಶ್ರೀಜಾ ಅಕುಲಾ, ಸ್ವೀಡನ್‌ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದರು.

ಮಹಿಳಾ ಬಿಲ್ಲುಗಾರಿಕೆಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್ ಹಾಗೂ ಭಜನ್ ಕೌರ್ ಈ ಮೂವರನ್ನೊಳಗೊಂಡ ಭಾರತೀಯ ತಂಡ ಕ್ವಾಟರ್ ಫೈನಲ್‌ನಲ್ಲಿ ನೆದರ್‌ಲ್ಯಾಂಡ್ ತಂಡದ ವಿರುದ್ಧ 0-6 ಅಂಕಗಳಿಂದ ಪರಾಭವಗೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಎಚ್.ಎಸ್. ಪ್ರಣೋಯ್, ಜರ್ಮನಿಯ ಫೇಬಿಯನ್ ರೋತ್ ವಿರುದ್ಧ ಹೋರಾಟ ನಡೆಸಲಿದ್ದಾರೆ.

ಪುರುಷರ ಡಬಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರರಾದ ರೋಹನ್ ಬೋಪಣ್ಣ ಹಾಗೂ ಶ್ರೀರಾಂ ಬಾಲಾಜಿ ಜೋಡಿ ಫ್ರಾನ್ಸ್ನ ಗೇಲ್ ಮೋನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವ್ಯಾಸೆಲಿನ್ ಜೋಡಿ ವಿರುದ್ಧ ಸೆಣಸಲಿದೆ. ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟಿನ್ನಿಸ್ ಪಂದ್ಯದ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಶ್ರೀಜಾ ಅಕುಲಾ ಹಾಗೂ ಮಹಿಳಾ ಬಾಕ್ಸಿಂಗ್‌ನ 50 ಕೆಜಿ ವಿಭಾಗದಲ್ಲಿ ನಿಕತ್ ಝರೀನ್ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

https://x.com/siddaramaiah/status/1817536595970650154?t=otcDD00kQUBeN84H7DvrEA&s=19

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಚಿಗಟೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ನೂತನ ಕಟ್ಟಡದ ಲೋಕಾರ್ಪಣೆ ; ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಕಾನೂನು ಇಲಾಖೆಗೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್

ಸುದ್ದಿದಿನ,ದಾವಣಗೆರೆ:ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು ಸಾಧಕ,...

ದಿನದ ಸುದ್ದಿ6 days ago

ದಾವಣಗೆರೆ | ಬಿರ್ಸಾ ಮುಂಡಾ ಜನ್ಮ ದಿನಾಚರಣೆ ; ಬುಡಕಟ್ಟು ಜನರ ಆರ್ಥಿಕ ಸಬಲೀಕರಣಕ್ಕಾಗಿ ಯೋಜನೆಗಳ ಸಮರ್ಪಕ ಬಳಕೆಗೆ ಸೂಚನೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹಾಗೂ ಬುಡಕಟ್ಟು ಜನಾಂಗದವರ ಏಳಿಗೆಗಾಗಿ ಹೋರಾಡಿದ ಧೀಮಂತ ವ್ಯಕ್ತಿ ಬಿರ್ಸಾ ಮುಂಡಾ ಅವರಾಗಿದ್ದು ಕೇಂದ್ರ ಸರ್ಕಾರ ಬುಡಕಟ್ಟು ಜನರ ಅಭಿವೃದ್ದಿಗಾಗಿ ಅನುಷ್ಟಾನ ಮಾಡುತ್ತಿರುವ ಯೋಜನೆಗಳನ್ನು...

ದಿನದ ಸುದ್ದಿ6 days ago

ಒಳಮೀಸಲಾತಿ ಜಾರಿಗೆ ಚಾಲನೆ ; ಜಾತಿಗಣತಿ ವರದಿ ವಿರೋಧಕ್ಕೆ ಬೇಡ ಮನ್ನಣೆ : ಮಾಜಿ ಸಚಿವ ಎಚ್.ಆಂಜನೇಯ

ಸುದ್ದಿದಿನ,ದಾವಣಗೆರೆ:ಅಸ್ಪೃಶ್ಯತೆ ನೋವು, ಸೌಲಭ್ಯಗಳ ಮರಿಚೀಕೆ, ಕೈಗೆಟುಕದ ಮೀಸಲಾತಿ ಹೀಗೆ ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರವಾಗಿ ಪರಿಣಮಿಸಲಿದೆ ಎಂದು ಮಾಜಿ...

ದಿನದ ಸುದ್ದಿ6 days ago

ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ : ಡಿಸಿ ಗಂಗಾಧರಸ್ವಾಮಿ ಜಿ.ಎಂ.

ಸುದ್ದಿದಿನ,ದಾವಣಗೆರೆ:ಅಪಘಾತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ, ಸುಧಾರಣೆಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವರು (ನ.15) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ....

ದಿನದ ಸುದ್ದಿ1 week ago

ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ : ಜಿಲ್ಲಾ ಸಮಿತಿ ಸದಸ್ಯತ್ವಕ್ಕೆ ನೇಮಕ ಮಾಡಲು ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕ್ಲೆರೋಸಿಸ್ (Crebral Palsy, Muscular Dystrophy, Parkinson’s and Multiple Sclerosis) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ...

ದಿನದ ಸುದ್ದಿ1 week ago

ದಾವಣಗೆರೆ | ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ತೋಟಗಾರಿಕೆ ಇಲಾಖೆಯಿಂದ ಹೊನ್ನಾಳಿ ಮತ್ತು ನ್ಯಾಮತಿ ಗ್ರಾಮ ಪಂಚಾಯಿತಿಯಲ್ಲಿ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆಸಕ್ತ ರೈತರಿಂದ...

ದಿನದ ಸುದ್ದಿ1 week ago

ಕಬ್ಬಳ ಗ್ರಾಮದ ಮಹಿಳೆ ನಾಪತ್ತೆ

ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯ ಕಬ್ಬಳ ಗ್ರಾಮದ ಮೇಘ.ಟಿ 29 ವರ್ಷ, ಇವರು ಕಳೆದ ಮೇ 1 ರಂದು ಬೆಳಿಗ್ಗೆ 10 ಗಂಟೆ...

ದಿನದ ಸುದ್ದಿ1 week ago

ದಾವಣಗೆರೆ | ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಅರಿವು ಜಾಥ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ,...

ದಿನದ ಸುದ್ದಿ1 week ago

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ...

ದಿನದ ಸುದ್ದಿ1 week ago

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ...

Trending