ಕ್ರೀಡೆ
ಫೋರ್ಬ್ಸ್ ಪಟ್ಟಿಯಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧೂ !
ಸುದ್ದಿದಿನ ಡೆಸ್ಕ್: ಆಕ್ರಮಣಕಾರಿ ಆಟದ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧೂ ಈಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದ್ದಾರೆ.
ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೀಟ್ ಗಳ ಪಟ್ಟಿಯನ್ನು ಫೋರ್ಬ್ಸ್ ನಿಯತಕಾಲಿಕೆ ರೂಪಿಸಿದ್ದು, ಅದರಲ್ಲಿ ಪಿ.ವಿ.ಸಿಂಧೂ 7ನೇ ಸ್ಥಾನ ಅಲಂಕರಿಸಿದ್ದಾರೆ.
ಖ್ಯಾತ ಟೆನ್ನಿಸ್ ತಾರೆ ಸೆರೆನಾ ವಿಲಿಯಮ್ಸ್ ಸತತ ಮೂರನೇ ಬಾರಿಗೆ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ. ಈ ಪಟ್ಟಿಯ ಮೊದಲ 10 ಆಟಗಾರರಲ್ಲಿ ಬಹುತೇಕರು ಟೆನ್ನಿಸ್ ಆಟಗಾರರೇ ಇರುವುದು ವಿಶೇಷ.