ದಿನದ ಸುದ್ದಿ
ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ : ಅ. 20 ರಿಂದ ‘ಮೊಲ ಸಾಕಾಣಿಕೆ ‘ತರಬೇತಿ ಕಾರ್ಯಕ್ರಮ
ಸುದ್ದಿದಿನ,ಬೆಂಗಳೂರು : ಒಂದು ದಿನದ ಮೊಲ ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ನಮ್ಮ ಯೋಜಿತ ಕರ್ನಾಟಕ ಸ್ಟೇಟ್ ರಾಬಿಟ್ ಫಾರ್ಮರ್ಸ್ ಪ್ರೋಡುಸೆರ್ ಕಂಪನಿ ಲಿ., ಹೆಸರಘಟ್ಟ, ಬೆಂಗಳೂರು. ಇಲ್ಲಿ ಅ.20 ಶನಿವಾರ ದಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಆಯೋಜಿಸಲಾಗಿದೆ.
ಮೊಲ ಸಾಕಾಣಿಕೆ ತರಬೇತಿ ಪ್ರಮಾಣ ಪತ್ರ ನೀಡಲಾಗುತ್ತದೆ, ಮತ್ತು ಮೊಲ ಹಾಗೂ ಮೊಲ ಸಾಕಾಣಿಕೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ.
1. ಮೊಲ ಸಾಕಾಣಿಕೆಯ ವಿಶೇಷತೆಗಳು
2. ಮೊಲಗಳ ಸಾಮಾನ್ಯ ಮಾಹಿತಿ
3. ಮೊಲ ಸಾಕಾಣಿಕೆಯ ಆರ್ಥಿಕ ಪ್ರಾಮುಖ್ಯತೆ
4. ಮೊಲಗಳ ಗುರುತಿಸುವಿಕೆ
5. ಮೊಲ ಸಾಕಾಣಿಕೆ ಪೀಠಿಕೆ
6. ಮೊಲಗಳ ಆಹಾರ
7. ಮೊಲಗಳ ಗುಣಗಳು
8. ಮೊಲಗಳ ಸಂತಾನೋತ್ಪತ್ತಿ
9. ಮೊಲಗಳ ತಳಿವರ್ಧನೆಯ ವಿವರಗಳು
10. ಮೊಲಗಳ ಆರೋಗ್ಯ ರಕ್ಷಣೆ
11. ಮೊಳಗಲ ವಸತಿ
12. ಮೊಲಗಳನ್ನು ಹಿಡಿಯುವಿಕೆ
13. ಆರ್ರೋಗ್ಯಕರ ನಿರ್ವಹಣೆಗೆ ಮಾರ್ಗದರ್ಶನ
14. ತೂಕ ಹೆಚ್ಚಿಸಲು ಪೋಷಣೆ (Nutrition for Weight gain)
15. ಶುಚಿತ್ವ(Cleanliness)
16. ರೋಗ ನಿರ್ವಹಣೆ (Diseases Management)
17. ತ್ಯಾಜ್ಯ ನಿರ್ವಹಣಾ ವ್ಯವಸ್ಥೆ (Waste management system)
18. ಚರ್ಮದ ಟ್ಯಾನಿ೦ಗ (Skin Tanning)
19. ಹತ್ಯೆ (Slaughtering)
20. ಮಾರುಕಟ್ಟೆ (Marketing)
ಈ ಎಲ್ಲ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ವಿಶೇಷ ಮಾಹಿತಿ ಮಹಿಳೆಯರಿಗೆ(Woman Enterprise) ಮೊಲ ಸಾಕಾಣಿಕೆ ತರಬೇತಿ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ.
ಹೆಚ್ಚಿನ ಮಾಹಿತಿ ಮತ್ತು ನೋಂದಣಿ ಪ್ರಕ್ರಿಯೆಗಾಗಿ ಸಂಪರ್ಕಿಸಿ : 8197010075, 9148183444
ಸ್ಥಳ: # 89 ಶ್ರೀ ನಿವಾಸ ಕಾಂಪ್ಲೆಕ್ಸ್ , ಕುರುಬರಹಳ್ಳಿ,
ಶಿವಕೋಟೆ ಪೋಸ್ಟ್, ಹೆಸರಘಟ್ಟ ಮೇನ್ ರೋಡ್
ಬೆಂಗಳೂರು – 560089
ದಿನದ ಸುದ್ದಿ
ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್
ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ನೀಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ ಎಂದು ಆರೋಪಿಸಿದರು.
ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ
ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣು ತುಂಬಿಸಿಕೊಂಡಿದ್ದಾರೆ.
ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.
ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್ಕುಮಾರ್ ಪಾರ್ಕ್ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ
ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ.
ಜೊತೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಇಂದಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿಯೇ ಅಬ್ಬರಿಸಲಿದೆ.
ಇದೀಗ ಹವಾಮಾನ ಇಲಾಖೆ ಸೂಚನೆಯೊಂದನ್ನು ನೀಡಿದ್ದು, ಬೆಂಗಳೂರು ಜನರಿಗೆ ಎಚ್ಚರಿಕೆಯಿಂದಿರುವುದು ಒಳ್ಳೆಯದು. ವರದಿ ಪ್ರಕಾರ, ಬೆಂಗಳೂರಿನಲ್ಲಿ ಇನ್ನೂ 7 ದಿನ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದಿನಿಂದ 1 ವಾರದ ವೆರೆಗೆ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ5 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ5 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ7 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ