ದಿನದ ಸುದ್ದಿ
ಮಾಜಿ ಕೇಂದ್ರ ಸಚಿವ ರಘುವಂಶ ಪ್ರಸಾದ್ ಸಿಂಗ್ ನಿಧನ
ಸುದ್ದಿದಿನ,ದೆಹಲಿ: ಕೇಂದ್ರದ ಮಾಜಿ ಸಚಿವ ರಘುವಂಶ ಪ್ರಸಾದ್ ಸಿಂಗ್(74) ಭಾನುವಾರ ನಿಧನ ಹೊಂದಿದ್ದಾರೆ. ಕೊರೋನಾದಿಂದ ಗುಣಮುಖರಾದ ಬಳಿಕ ಚಿಕಿತ್ಸೆಗಾಗಿ ಅವರನ್ನು ಕಳೆದ ವಾರ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು.
ಶನಿವಾರ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದ ಹಿನ್ನೆಲೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಇತ್ತೀಚೆಗಷ್ಟೇ ಅವರು ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ ಜೆಡಿಗೆ ರಾಜೀನಾಮೆ ನೀಡಿ ಬಿಹಾರ್ ರಾಜಕೀಯದಲ್ಲಿ ಸಂಚಲನವನ್ನುಂಟು ಮಾಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243