ದಿನದ ಸುದ್ದಿ

ಬೆಂಬಲಬೆಲೆ ಯೋಜನೆಯಡಿ ಹೆಚ್ಚುವರಿಯಾಗಿ 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ : ಸಿಎಂ ಬಸವರಾಜ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಬಜೆಟ್ ಅನುಷ್ಠಾನ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಚಿವರು, ಅಧಿಕಾರಿಗಳ ಸಭೆ ಇಂದು ಸಹ ಮುಂದುವರೆದಿದ್ದು, ಕಾಲಮಿತಿಯೊಳಗೆ ಕ್ರಿಯಾ ಯೋಜನೆ ಅಂತಿಮಗೊಳಿಸಿ ಆದೇಶ ಜಾರಿ ಮಾಡುವಂತೆ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶಿಸಿದರು.

ಕಾಲಮಿತಿಯೊಳಗೆ ಕಾರ್ಯಕ್ರಮ ಜಾರಿ ಮಾಡುವ ಮೂಲಕ ಜನಸಾಮಾನ್ಯರಿಗೆ ಕಾರ್ಯಕ್ರಮಗಳು ಎಲ್ಲರಿಗೂ ತಲುಪುವಂತಾಗಬೇಕು ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ರಾಗಿ ಬೆಳೆದಿರುವ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ರಾಗಿ ದಾಸ್ತಾನು ಇದೆ. ಹೆಚ್ಚುವರಿಯಾಗಿ 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಸರ್ಕಾರ ನಿರ್ಧರಿಸಿದೆ. ನಾಳೆಯಿಂದ ರೈತರು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಮುನ್ನ ನೋಂದಣಿ ಮಡಿಕೊಳ್ಳಬೇಕೆಂದು ಸೂಚಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version