Connect with us

ಕ್ರೀಡೆ

ರಾಹುಲ್ ದ್ರಾವಿಡ್‍ಗೆ ಹಾಲ್ ಆಫ್ ಫೇಮ್ ಗೌರವ

ಭಾರತ ಕ್ರಿಕೆಟ್‍ನ ಮಹಾಗೋಡೆ ಎಂದೇ ಖ್ಯಾತಿ ಹೊಂದಿರುವ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಐಸಿಸಿ ಕೊಡಮಾಡುವ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.

Published

on

ಸುದ್ದಿದಿನ ಡೆಸ್ಕ್: ಭಾರತ ಕ್ರಿಕೆಟ್‍ನ ಮಹಾಗೋಡೆ ಎಂದೇ ಖ್ಯಾತಿ ಹೊಂದಿರುವ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಐಸಿಸಿ ಕೊಡಮಾಡುವ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಬೆಂಗಳೂರಿನಲ್ಲಿ ನೆಲೆಸಿರುವ ದ್ರಾವಿಡ್ ಅವರು ಈ ಗೌರವಕ್ಕೆ ಫತ್ರರಾಗಿರುವ ಐದನೇ ಕ್ರಿಕೆಟಿಗರೂ ಹೌದು. ಈ ಮೊದಲು ಸುನೀಳ್ ಗಾವಾಸ್ಕರ್, ಬಿಷನ್ ಸಿಂಗ್ ಬೇಡಿ, ಕಪಿಲ್ ದೇವ್ ಮತ್ತು ಅನಿಲ್ ಕುಂಬ್ಳೆ ಅವರು ಈ ಪ್ರಶಸ್ತಿಗೆ ಪಾತ್ರರಾಗಿದ್ದರು.
ದ್ರಾವಿಡ್ ಅವರೊಂದಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ರಿಕಿ ಪಾಂಟಿಂಗ್ ಇಂಗ್ಲಡ್ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಕ್ಲೈರಾ ಟೇಲರ್ ಅವರು ಈಬಾರಿ ಪ್ರಶಸ್ತಿ ಪಡೆದುಕೊಳ್ಳುತ್ತಿದ್ದರೆ.
ಐಸಿಸಿಯ ಅತ್ಯುನ್ನತ ಗೌರವ:
ಹಾಲ್ ಆಫ್ ಫೇಮ್ ಎಂಬುದು ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ಕೊಡುವ ಅತ್ಯುನ್ನತ ಗೌರವ. ಕ್ರಿಕೆಟ್ ಲೋಕದ ದಿಗ್ಗಜರನ್ನು ಗುರುತಿಸುವ ಸಲುವಾಗಿ 2009ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ಇದುವರೆಗೂ 84 ಮಂದಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹೆಮ್ಮೆಯ ಸಂಗತಿ:
ಸರ್ವಕಾಲಿಕ ಆmಗಾರರ ಪಟ್ಟಿಯಲ್ಲಿ ನನ್ನ ಹೆಸರು ದಾಖಲಾಗಿರುವುದು ಹೆಮ್ಮೆಯ ಸಂಗತಿ. ಇದಕ್ಕಾಗಿ ನನ್ನ ಕೋಚ್‍ಗಳು, ಸ್ನೇಹಿತರು, ಕುಟುಂಬವರ್ಗದವರು ಹಾಗೂ ಐಸಿಸಿ, ಬಿಸಿಸಿಎಲ್‍ಗೆ ಆಭಾರಿಯಾಗಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 hours ago

ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44...

ದಿನದ ಸುದ್ದಿ2 days ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್...

ದಿನದ ಸುದ್ದಿ2 days ago

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ...

ದಿನದ ಸುದ್ದಿ3 days ago

ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ:ಕಾರಿನ ಗ್ಲಾಸ್ ಮುಂದೆ ಎಂ.ಎಲ್.ಎ ಕಾರು ಪಾಸು ಇಟ್ಟುಕೊಂಡು ತನ್ನ ಬೆಂಬಲಿಗರು, ಗನ್ ಮ್ಯಾನ್ ನೊಂದಿಗೆ ತಹಶಿಲ್ದಾರರ ಹಾಗೂ...

ದಿನದ ಸುದ್ದಿ5 days ago

ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ

ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು...

ದಿನದ ಸುದ್ದಿ1 week ago

ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು. ಬುಧವಾರ(ಫೆ.5) ರಂದು...

ದಿನದ ಸುದ್ದಿ2 weeks ago

ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ

ಸುದ್ದಿದಿನ,ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್‌ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ...

ದಿನದ ಸುದ್ದಿ2 weeks ago

ಅಂತಾರಾಷ್ಟ್ರೀಯ, ನವೋದಯ ಮಟ್ಟದ ಉತ್ಕೃಷ್ಟ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗಬೇಕು: ಜಿ. ಬಿ. ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ:ಅಂತಾರಾಷ್ಟ್ರೀಯ, ನವೋದಯ ಶಾಲೆಗಳಲ್ಲಿ ಸಿಗುವಂಥ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗುವಂತಾಗಬೇಕು ಎಂಬ ದೊಡ್ಡ ಕನಸು ಹೊಂದಿದ್ದೇನೆ. ಇದಕ್ಕಾಗಿ ಸಾಕಷ್ಟು ಪ್ರಯತ್ನಪಡುತ್ತಿದ್ದೇನೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು...

ದಿನದ ಸುದ್ದಿ2 weeks ago

ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಬೈಕ್ ರ್ಯಾಲಿ

ವರದಿ : ಸಿ ಜಗದೀಶ್ ಕೂಲಂಬಿ ಸುದ್ದಿದಿನ,ದಾವಣಗೆರೆ:ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಇದೆ ಫೆಬ್ರವರಿ 04 ರಿಂದ 12 ರವರೆಗೆ ನಡೆಯಲಿರುವ 76 ನೇ ತರಳಬಾಳು ಹುಣ್ಣಿಮೆ ಮಹೋತ್ಸವದ...

ದಿನದ ಸುದ್ದಿ2 weeks ago

ಮಾಯಕೊಂಡ ಕ್ಷೇತ್ರಕ್ಕೆ 750 ಮನೆ ಮಂಜೂರು ; ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲು ಗ್ರಾಪಂ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

ಸುದ್ದಿದಿನ,ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿಗೆ 506, ಚನ್ನಗಿರಿ ತಾಲೂಕಿಗೆ 244 ಸೇರಿ ಕ್ಷೇತ್ರಕ್ಕೆ ಒಟ್ಟು 750 ಮನೆಗಳು ಮಂಜೂರಾಗಿವೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ...

Trending