ದಿನದ ಸುದ್ದಿ
ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ಸುದ್ದಿದಿನಡೆಸ್ಕ್: ಕಳೆದ ವಿಧಾನಸಭೆ ಚುನಾವಣೆ ವೇಳೆ ನೀಡಿದ ಜಾಹಿರಾತು ಪ್ರಕರಣದ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯಕ್ಕೆ ಇಂದು ಹಾಜರಾಗಿದ್ದರು.
ಬೆಳಗ್ಗೆ ದೆಹಲಿಯಿಂದ ಹೊರಟ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243