Connect with us

ರಾಜಕೀಯ

ಮೋದಿ ಜನರ ಚೌಕಿದಾರನಲ್ಲ, ಅಂಬಾನಿಯ ಚೌಕಿದಾರ : ರಾಹುಲ್​ ಗಾಂಧಿ

Published

on

ಸುದ್ದಿದಿನ,ಹಾವೇರಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತವನ್ನು ಎರಡು ರೀತಿ ಮಾಡಿ ಅಧಿಕಾರವನ್ನು ನಡೆಸುತ್ತಿದೆ. ಶ್ರೀಮಂತರಿಗೆ ಒಂದು ಹಿಂದೂಸ್ತಾನ, ಬಡ ಜನರಿಗೆ ಮತ್ತೊಂದು ಹಿಂದೂಸ್ತಾನವನ್ನು ಮೋದಿ ಸರ್ಕಾರ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಹಾವೇರಿಯಲ್ಲಿ ನಡೆದ ಪರಿವರ್ತನಾ ಱಲಿಯಲ್ಲಿ ಮಾತನಾಡಿದ ಅವರು, ಒಂದನೇ ಹಿಂದೂಸ್ತಾನದಲ್ಲಿ ವಿಜಯ ಮಲ್ಯ, ಲಲಿತ್​​ ಮೋದಿ, ಚೋಕ್ಸಿಯಂತವರು ಇದ್ದಾರೆ. ಇವರಿಗೆ ಬೇಕಾದಷ್ಟು ಹಣ ಈ ಸರ್ಕಾರ ನೀಡುತ್ತದೆ. ಇಂತಹ ಶ್ರೀಮಂತ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಎಲ್ಲದ್ದಕ್ಕೂ ಈ ಸರ್ಕಾರ ವ್ಯವಸ್ಥೆಯನ್ನು ನೋಡಿಕೊಳ್ಳುತ್ತದೆ. ಆದರೆ, ಎರಡನೇ ಹಿಂದೂಸ್ತಾನದಲ್ಲಿ ಬಡವರು, ಹಿಂದುಳಿದವರು ಇದ್ದಾರೆ. ಇಲ್ಲಿ ಮೋಸ, ವಂಚನೆಯನ್ನು ಈ ಸರ್ಕಾರ ಮಾಡುತ್ತಿದೆ ಎಂದು ಮೋದಿ ಸರ್ಕಾರದ ವಿರುದ್ಧ ರಾಹುಲ್​ ಗಾಂಧಿ ಕಿಡಿಕಾರಿದರು.

ಇನ್ನು, ಲೋಕಸಭೆಯಲ್ಲಿ ರಫೇಲ್​ ಹಗರಣದ ಬಗ್ಗೆ ನಾಲ್ಕು ಪ್ರಶ್ನೆಯನ್ನು ಕೇಳಿದೆ. ಆದರೆ, ಬಿಜೆಪಿ ಸಂಸದರು ಸುಮ್ಮನೇ 10 ನಿಮಿಷ ಚಪ್ಪಾಳೆ ಹೊಡೆದು ಸದನದ ಸಮಯವನ್ನು ವ್ಯರ್ಥ ಮಾಡಿದರು. ಅಲ್ಲದೇ, ಮೋದಿಯವರು ಸದನದಲ್ಲಿ ಗಂಟೆಗಟ್ಟಲೇ ಭಾಷಣ ಮಾಡಿದರೂ ನಾನು ಕೇಳಿದ ಪ್ರಶ್ನೆಗೆ ಉತ್ತರ ನೀಡಲಿಲ್ಲ. ಬದಲಾಗಿ ನನ್ನ ಪ್ರಶ್ನೆಗೆ ಉತ್ತರ ಕೊಡಲು ತಪ್ಪಿಸಿಕೊಳ್ಳಲು ಮೋದಿಯವರು ಮೇಲೆ, ಕೆಳಗೆ, ಅಕ್ಕ ಪಕ್ಕ ನೋಡಲು ಶುರು ಮಾಡಿದರು. ಈ ಸರ್ಕಾರ ಜನರಿಗೆ ವಂಚನೆ ಮಾಡುತ್ತಿದೆ ಎಂದು ಆರೋಪಿಸಿದರು.

ರಫೇಲ್​​ ಒಪ್ಪಂದದಲ್ಲಿ ಪ್ರಧಾನಿ ನರೇಂದ್ರ ಮೋದಿ ₹ 30 ಕೋಟಿಯನ್ನ ಹೊಡೆದಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿ ಜನರ ಚೌಕಿದಾರನಲ್ಲ, ಅಂಬಾನಿಯ ಚೌಕಿದಾರ ಎಂದು ಆರೋಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬಾಪೂಜಿ ಪ್ರಬಂಧ ಸ್ಪರ್ಧೆ ; ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ

Published

on

ಸುದ್ದಿದಿನ,ತುಮಕೂರು: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಮಾಡಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿನ್ನೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತಿç ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ನಂತರ ಬಹುಮಾನ ವಿತರಣೆ ಮಾಡಿದರು.

ಪ್ರೌಢ ಶಾಲಾ ವಿಭಾಗದಲ್ಲಿ ಹನುಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತ ಪ್ರಥಮ, ಅಮೃತೂರು ಕೆ.ಪಿ.ಎಸ್ ವಿದ್ಯಾರ್ಥಿ ಎನ್.ಎನ್. ಹಿಮಾನಿ ದ್ವಿತೀಯ, ಅಂಕಸಂದ್ರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಎ. ಪಿ. ಅಶ್ವಿನಿ ತೃತೀಯ ಸ್ಥಾನ; ಪದವಿ ಪೂರ್ವ ಕಾಲೇಜು ವಿಭಾಗದಿಂದ ಸಿರಾ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನ ಎಸ್.ಎಂ. ಗುಣಶ್ರೀ ಪ್ರಥಮ, ತುರುವೇಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್.ಎನ್. ಇಂಚರ ದ್ವೀತಿಯ, ತುಮಕೂರು ದಿ ಮಾಸ್ಟರ್ಸ್ ಪದವಿ ಪೂರ್ವ ಕಾಲೇಜಿನ ಆರ್. ವೆಂಕಟ್ ತೇಜ್ ತೃತೀಯ ಸ್ಥಾನ; ಪದವಿ ವಿಭಾಗದಿಂದ ತುಮಕೂರು ವಿಶ್ವವಿದ್ಯಾಲಯದ ಎಂ. ಎ ಪ್ರಥಮ ವರ್ಷದ ಶರಣಪ್ಪ ಪ್ರಥಮ, ಎಸ್. ಕೆ. ಸುಪ್ರೀತ ದ್ವಿತೀಯ, ಹೆಚ್.ಡಿ. ಸಂತೋಷ್ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಚಿವರು ನಗದು ಬಹುಮಾನ, ಪ್ರಮಾಣಪತ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ , ವಾರ್ತಾ ಇಲಾಖೆಯ ಅಧಿಕಾರಿ ಹಿಮಂತರಾಜು.ಜಿ, ಸೇರಿದಂತೆ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತಿತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ

Published

on

ಸುದ್ದಿದಿನ,ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದರು.

ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ; ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಕಡೆ ರೈಲ್ವೆ ಇಲಾಖೆಯಿಂದಲೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ದಾವಣಗೆರೆ ನಗರದ ಅಶೋಕ ಟಾಕೀಸ್ ಹತ್ತಿರ ರೈಲ್ವೆ ಲೈನ್ ಕೆಳಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣದ ಭೂ ನೇರ ಖರೀದಿಗೆ ರೂ.23.09 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಆದಷ್ಟು ಬೇಗ ಈ ಕಾಮಗಾರಿ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದರು.

ರೈಲ್ವೆ ವೇಗ ಹೆಚ್ಚಿಸಲು ಕ್ರಮ; ರೈಲ್ವೆ ಇಂಜಿನ್‍ಗಳು ಬಹುತೇಕ ಶೇ 98 ರಷ್ಟು ವಿದ್ಯುತ್ ಚಾಲಿತವಾಗಿದ್ದು ಶೇ 2 ರಷ್ಟು ಮಾತ್ರ ಡೀಸೆಲ್ ಇಂಜಿನ್‍ಗಳಿವೆ. ರೈಲ್ವೆ ಪ್ರಯಾಣದ ವೇಗ ಪ್ರಸ್ತುತ 110 ಕಿ.ಮೀ ಇದ್ದು ಇದನ್ನು 135 ಕಿ.ಮೀ ವರೆಗೆ ವೇಗ ಹೆಚ್ಚಿಸುವ ಗುರಿಯೊಂದಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಬಡುವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು ಇದರಲ್ಲಿ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕೆಂದರು.

ಕನ್ನಡದಲ್ಲೆ ರೈಲ್ವೆ ಪರೀಕ್ಷೆ; ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಸಭೆಯಲ್ಲಿ ಮಾತನಾಡಿ ದಾವಣಗೆರೆ ನಗರದಲ್ಲಿನ ಮೀನು ಮಾರುಕಟ್ಟೆ ಬಳಿ ರೈಲ್ವೆ ಮೇಲ್ಸೇತುವೆ ಅಥವಾ ಕೆಳಸೇತುವೆ ಅಗತ್ಯವಾಗಿದೆ. ಅಶೋಕ ಟಾಕೀಸ್ ಹತ್ತಿರ ರಸ್ತೆ ಕಿರಿದಾಗಿದ್ದು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು, ಲಿಂಗೇಶ್ವರ ದೇವಸ್ಥಾನದ ಹತ್ತಿರ ಪಾದಚಾರಿ ಮಾರ್ಗ ನಿರ್ಮಿಸಲು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗದಲ್ಲಿ ಸೂರಗೊಂಡನಕೊಪ್ಪ ಅಥವಾ ನ್ಯಾಮತಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಅವಕಾಶ ಮಾಡಲು, ಹರಿಹರದಲ್ಲಿನ ರೈಲ್ವೆ ಆಸ್ಪತ್ರೆ, ಸ್ಕೂಲ್ ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಹರಿಹರ ಶಾಸಕರಾದ ಬಿ.ಪಿ.ಹರೀಶ್ ಹೊಸಪೇಟೆ ಹೋಗುವ ಹೆದ್ದಾರಿಯಲ್ಲಿ ಒಂದೇ ರೈಲ್ವೆ ಸೇತುವೆ ಇದ್ದು ಮತ್ತೊಂದು ಬ್ರಿಡ್ಜ್ ನಿರ್ಮಾಣ ಮಾಡಬೇಕು, ಮಳೆ ಬಂದಾಗ ಈ ಮಾರ್ಗದ ವಾಹನಗಳಿಗೆ ತೊಂದರೆಯಾಗುವುದರಿಂದ ರೈಲ್ವೆ ಸೇತುವೆಯ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ರೈಲ್ವೆ ಹಿರಿಯ ಅಧಿಕಾರಿ ಶರ್ಮಾ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ

Published

on

ಸುದ್ದಿದಿನಡೆಸ್ಕ್:ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ. ಈ ಸಂದರ್ಭದಲ್ಲಿ ರಾಷ್ಟ್ರ ಅವರಿಗೆ ಗೌರವ ಸಲ್ಲಿಸುತ್ತಿದೆ.

ದೇಶಾದ್ಯಂತ ಮತ್ತು ವಿದೇಶದಲ್ಲಿರುವ ಭಾರತೀಯ ಮಿಷನ್‌ಗಳಿಂದ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿ ರಾಜ್‌ಘಾಟ್‌ನಲ್ಲಿರುವ ಬಾಪು ಸಮಾಧಿಯಲ್ಲಿ ಸರ್ವಧರ್ಮ ಪ್ರಾರ್ಥನಾ ಸಭೆ ನಡೆಯಲಿದೆ. ಇಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಆಗಿದ್ದು ದೇಶವು ಅವರನ್ನು ಸ್ಮರಿಸುತ್ತಿದೆ.

ಸತ್ಯ, ಅಹಿಂಸೆ, ಪ್ರೀತಿ ಮತ್ತು ಪರಿಶುದ್ಧತೆಯ ಮೌಲ್ಯಗಳನ್ನು ಅಳವಡಿಸಿಕೊಂಡು, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನಸಿನ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನತೆಗೆ ಕರೆ ನೀಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಅವರು, ದೇಶ ಮತ್ತು ಸಮಾಜದ ಅಭಿವೃದ್ಧಿಯನ್ನು ನಿರಂತರವಾಗಿ ಮುನ್ನಡೆಸಲು ಶ್ರಮಿಸುವಂತೆ ಕರೆ ನೀಡಿದರು.

ಸತ್ಯ ಮತ್ತು ಅಹಿಂಸೆಯ ಕಟ್ಟಾ ಅನುಯಾಯಿಯಾಗಿದ್ದ ಬಾಪು ಅವರ ಜೀವನ ಇಡೀ ಮಾನವಕುಲಕ್ಕೆ ಒಂದು ಅನನ್ಯ ಸಂದೇಶವಾಗಿದೆ. ಮಹಾತ್ಮಾ ಗಾಂಧಿಯವರು ಶಾಂತಿ ಮತ್ತು ಸಹಕಾರದ ಮಾರ್ಗವನ್ನು ಅನುಸರಿಸಲು ಜನರನ್ನು ಪ್ರೇರೇಪಿಸಿದರು ಎಂದು ತಿಳಿಸಿದ್ದಾರೆ.

ಗಾಂಧೀಜಿಯವರು ಅಸ್ಪೃಶ್ಯತೆ, ಅನಕ್ಷರತೆ, ನೈರ್ಮಲ್ಯದ ಕೊರತೆ ಮತ್ತು ಇತರ ಸಾಮಾಜಿಕ ಅನಿಷ್ಟಗಳನ್ನು ತೊಡೆದುಹಾಕಲು ಪರಿಶ್ರಮಿಸಿದರು. ಜತೆಗೆ ಮಹಿಳಾ ಸಬಲೀಕರಣದ ಉದ್ದೇಶವನ್ನು ಅವಿರತವಾಗಿ ಪ್ರತಿಪಾದಿಸಿದರು ಎಂದು ತಿಳಿಸಿದ್ದಾರೆ.

ದುರ್ಬಲ ಮತ್ತು ಅತ್ಯಂತ ದುರ್ಬಲರನ್ನು ಬಲಪಡಿಸುವತ್ತ ಬಾಪು ಅವರ ಹೋರಾಟ ಕೇಂದ್ರೀಕೃತವಾಗಿತ್ತು. ಅವರ ಆಲೋಚನೆಗಳು ಪ್ರಪಂಚದ ಅನೇಕ ಮಹನೀಯರ ಮೇಲೆ ಪ್ರಭಾವ ಬೀರಿದ್ದು, ಗಾಂಧೀಜಿಯವರ ಆದರ್ಶಗಳನ್ನು ತಮ್ಮ ವಿಧಾನಗಳಲ್ಲಿ ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 hours ago

ದಾವಣಗೆರೆ | ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ ; ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್

ಸುದ್ದಿದಿನ,ದಾವಣಗೆರೆ:ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು...

ದಿನದ ಸುದ್ದಿ1 day ago

ಬಾಪೂಜಿ ಪ್ರಬಂಧ ಸ್ಪರ್ಧೆ ; ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ

ಸುದ್ದಿದಿನ,ತುಮಕೂರು: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ...

ದಿನದ ಸುದ್ದಿ2 days ago

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ

ಸುದ್ದಿದಿನ,ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ...

ದಿನದ ಸುದ್ದಿ2 days ago

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ. ಈ ಸಂದರ್ಭದಲ್ಲಿ ರಾಷ್ಟ್ರ ಅವರಿಗೆ ಗೌರವ ಸಲ್ಲಿಸುತ್ತಿದೆ. ದೇಶಾದ್ಯಂತ ಮತ್ತು ವಿದೇಶದಲ್ಲಿರುವ ಭಾರತೀಯ ಮಿಷನ್‌ಗಳಿಂದ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ....

ದಿನದ ಸುದ್ದಿ2 days ago

KEA | ನಾಳೆ ಪಿಎಸ್‍ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 3 ರಂದು ಪಿಎಸ್‍ಐ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯಲ್ಲಿ ಕಟ್ಟೆಚ್ಚರವಹಿಸಿ ಯಾವುದೇ...

ದಿನದ ಸುದ್ದಿ3 days ago

ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್

ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ...

ದಿನದ ಸುದ್ದಿ3 days ago

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ; ಅ. 5 ರಂದು ಪೂರ್ವಭಾವಿ ಸಭೆ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ಗುರುವಾರ ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ಸಿದ್ದತೆಗಾಗಿ ಅಕ್ಟೋಬರ್ 5 ರ ಬೆಳಿಗ್ಗೆ 11...

ದಿನದ ಸುದ್ದಿ3 days ago

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಇಲಾಖೆಯ...

ದಿನದ ಸುದ್ದಿ3 days ago

ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ

ಸುದ್ದಿದಿನ,ಮಂಡ್ಯ:ಜಿಲ್ಲೆಯ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಶ್ರೀ.ದಾಸಯ್ಯ ಜಿ ಟಿ ಮತ್ತು ಶ್ರೀಮತಿ ನಿಂಗಮ್ಮ ಇವರ ಪುತ್ರರಾದ ದಿವಾಕರ.ಡಿ ಅವರು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಮಂಡಿಸಿದ್ದ...

ದಿನದ ಸುದ್ದಿ3 days ago

ಚಿನ್ನದ ಬೆಲೆ ಇಳಿಕೆ

ಸುದ್ದಿದಿನಡೆಸ್ಕ್:ಚಿನ್ನದ ಬೆಲೆ ಇಂದು ಮಂಗಳವಾರವೂ ಇಳಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 10 ಪೈಸೆಯಷ್ಟು ಏರಿಕೆ ಆಗಿದೆ. ಬೆಂಗಳೂರಿನಲ್ಲಿ 88...

Trending