ರಾಜಕೀಯ
ಮಂಗಳೂರಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಸುದ್ದಿದಿನ ಡೆಸ್ಕ್: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂಬ ಪಣತೊಟ್ಟಿರುವ ಕಾಂಗ್ರೆಸ್ ಪಕ್ಷ ರಾಜ್ಯದ ರಾಜಧಾನಿ ಹೊರತುಪಡಿಸಿ ಮೊದಲ ಬಾರಿಗೆ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಹುಲ್ ಗಾಂಧಿ, ನಾಲ್ಕು ತಿಂಗಳು ಸಮಯ ಕಾಲಾವಕಾಶ ತೆಗೆದುಕೊಂಡು ಎಲ್ಲಾ ವರ್ಗಗಳ ಆಶೋತ್ತರಗಳಿಗೆ ಸ್ಪಂದಿಸುವಂಥ ಕಾಂಗ್ರೆಸ್ ಪ್ರಣಾಳಿಕೆ ತಯಾರಿಸಿದೆ ಎಂದು ಹೇಳಿದರು.
Read also: ದಲಿತರ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಒಂದೇ: ಮಾಯಾವತಿ ಕಿಡಿ
ಪ್ರಣಾಳಿಕೆಗೆ ‘ಕರ್ನಾಟಕ ಹೆಮ್ಮೆ, ಕಾಂಗ್ರೆಸ್ ಮತ್ತೊಮ್ಮೆ’ ಎಂಬ ಹೆಸರಿಡಲಾಗಿದ್ದು, ಈ ರಾಷ್ಟ್ರದ ಅಭಿವೃದ್ಧಿಗೆ ಭಾಷ್ಯ ಬರೆಯುವಂತಹ ಅಂಶಗಳು ಈ ಪ್ರಣಾಳಿಕೆಯಲ್ಲಿವೆ. ಎಲ್ಲಾ ವರ್ಗಗಳಿಗೂ ಗಮನ ಹರಿಸಲಾಗಿದೆ. ತಳಮಟ್ಟಗಳ ಅವಶ್ಯಕತೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿರುವ ಪಕ್ಷದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಸ್ಥಳಿಯ ಮುಖಂಡ ಜನಾರ್ದನ ಪೂಜಾರಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ, ಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಅನೇಕ ಮುಖಂಡರು ಪ್ರಣಾಳಿಕೆಯನ್ನು ಜನರ ಮುಂದೆ ತೆರೆದಿಟ್ಟರು.