Connect with us

ದಿನದ ಸುದ್ದಿ

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಕೇಂದ್ರಿಯ ವಿದ್ಯಾಲಯ ಆಯ್ಕೆ

Published

on

ಸುದ್ದಿದಿನ,ರಾಯಚೂರು : ಇದೇ ಏಪ್ರೀಲ್ ತಿಂಗಳಲ್ಲಿ ಎಸ್ಸೆಸ್ಸೆಲಿ, ಪಿಯುಸಿ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಬಾರದು ಎನ್ನುವ ದೃಷ್ಟಿಯಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ ಹಮ್ಮಿಕೊಂಡಿದ್ದು, ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಾಗಿದೆಂದು ರಾಯಚೂರು ಸಹಾಯಕ ಆಯುಕ್ತರಾದ ರಜನಿಕಾಂತ ಅವರು ಹೇಳಿದರು.

ಅವರು ಮಾ.29ರ ಮಂಗಳವಾರ ದಂದು ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಏ.1ರ ಬೆಳಿಗ್ಗೆ 11ಗಂಟೆಗೆ 5ನೇ ಆವೃತಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಸುಮಾರು 15.7ಲಕ್ಷ ಭಾಗವಹಿಸುವವರು ಉತ್ಸಹದಿಂದ ನೋಂದಾಯಿಸಿಕೊಂಡಿದ್ದಾರೆ ಎಂದರು.

ಕರ್ನಾಟಕದಿಂದ 25ಶಾಲೆಗಳು ಆಯ್ಕೆಯಾಗಿದ್ದು, ಅದರಲ್ಲಿ ರಾಯಚೂರಿನ ಕೇಂದ್ರಿಯ ವಿದ್ಯಾಲಯ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳಿಗೆ ಮನೆಗಳಲ್ಲಿ ಕೇಳುವಂತ ಅವಕಾಶ ಇಲ್ಲದಿದ್ದರೆ ಕೇಂದ್ರಿಯ ವಿದ್ಯಾಲಯಕ್ಕೆ ಬಂದು ಪರೀಕ್ಷೆ ಪೇ ಚರ್ಚಾ ಕೂಟವನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.

ಪರೀಕ್ಷಾ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ ಎಂದರು.

ಕಾರ್ಯಕ್ರಮವು ಡಿಡಿ ನ್ಯಾಷನಲ್, ಡಿಡಿ ನ್ಯೂಸ್, ಡಿಡಿ ಇಂಡಿಯಾ, ರೇಡಿಯೋ, ಟಿ.ವಿ ಚಾನಲ್, ರಾಜ್ಯಸಭಾ ಟಿವಿ, ಸ್ವಯಂ ಪ್ರಭಾ, ಯೂಟ್ಯೂಬ್ ಚಾನಲ್‌ಗಳು ಸೇರಿದಂತೆ ಡಿಜಿಟಲ್ ಮಾಧ್ಯಮದಲ್ಲಿ ನೇರ ಪ್ರಸಾರವಾಗಲಿದ್ದು, ವಿದ್ಯಾರ್ಥಿಗಳು ತಪ್ಪದೆ ಚರ್ಚಾಕೂಟವನ್ನು ಆಲಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕವಿತೆ | ಒಂದು ಕಪ್ ಕಾಫಿ

Published

on

  • ಲಕ್ಕೂರು ಆನಂದ್

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ

Published

on

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆಯನ್ನು ಬೆಂಗಳೂರಿನ ಜೆಪಿ ಭವನದಲ್ಲಿಂದು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಮತ್ತು ಬಿಜೆಪಿ ಮುಖಂಡ ಆರ್. ಅಶೋಕ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಸಿ.ಪಿ.ಯೋಗೇಶ್ವರ್ ಮಾತನಾಡಿದರು.

ಇನ್ನೊಂದೆಡೆ, ಚಿತ್ರದುರ್ಗದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ವಿಧಾನಪರಿಷತ್ ಸದಸ್ಯ ಪುಟಣ್ಣಯ್ಯ ಮತಯಾಚಿಸಿದರು. ಇದೇ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಪಿಂಚಣಿ ವ್ಯವಸ್ಥೆ ಬದಲಾವಣೆಗೆ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending