ದಿನದ ಸುದ್ದಿ

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಕೇಂದ್ರಿಯ ವಿದ್ಯಾಲಯ ಆಯ್ಕೆ

Published

on

ಸುದ್ದಿದಿನ,ರಾಯಚೂರು : ಇದೇ ಏಪ್ರೀಲ್ ತಿಂಗಳಲ್ಲಿ ಎಸ್ಸೆಸ್ಸೆಲಿ, ಪಿಯುಸಿ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಬಾರದು ಎನ್ನುವ ದೃಷ್ಟಿಯಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ ಹಮ್ಮಿಕೊಂಡಿದ್ದು, ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಾಗಿದೆಂದು ರಾಯಚೂರು ಸಹಾಯಕ ಆಯುಕ್ತರಾದ ರಜನಿಕಾಂತ ಅವರು ಹೇಳಿದರು.

ಅವರು ಮಾ.29ರ ಮಂಗಳವಾರ ದಂದು ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಏ.1ರ ಬೆಳಿಗ್ಗೆ 11ಗಂಟೆಗೆ 5ನೇ ಆವೃತಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಸುಮಾರು 15.7ಲಕ್ಷ ಭಾಗವಹಿಸುವವರು ಉತ್ಸಹದಿಂದ ನೋಂದಾಯಿಸಿಕೊಂಡಿದ್ದಾರೆ ಎಂದರು.

ಕರ್ನಾಟಕದಿಂದ 25ಶಾಲೆಗಳು ಆಯ್ಕೆಯಾಗಿದ್ದು, ಅದರಲ್ಲಿ ರಾಯಚೂರಿನ ಕೇಂದ್ರಿಯ ವಿದ್ಯಾಲಯ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳಿಗೆ ಮನೆಗಳಲ್ಲಿ ಕೇಳುವಂತ ಅವಕಾಶ ಇಲ್ಲದಿದ್ದರೆ ಕೇಂದ್ರಿಯ ವಿದ್ಯಾಲಯಕ್ಕೆ ಬಂದು ಪರೀಕ್ಷೆ ಪೇ ಚರ್ಚಾ ಕೂಟವನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.

ಪರೀಕ್ಷಾ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ ಎಂದರು.

ಕಾರ್ಯಕ್ರಮವು ಡಿಡಿ ನ್ಯಾಷನಲ್, ಡಿಡಿ ನ್ಯೂಸ್, ಡಿಡಿ ಇಂಡಿಯಾ, ರೇಡಿಯೋ, ಟಿ.ವಿ ಚಾನಲ್, ರಾಜ್ಯಸಭಾ ಟಿವಿ, ಸ್ವಯಂ ಪ್ರಭಾ, ಯೂಟ್ಯೂಬ್ ಚಾನಲ್‌ಗಳು ಸೇರಿದಂತೆ ಡಿಜಿಟಲ್ ಮಾಧ್ಯಮದಲ್ಲಿ ನೇರ ಪ್ರಸಾರವಾಗಲಿದ್ದು, ವಿದ್ಯಾರ್ಥಿಗಳು ತಪ್ಪದೆ ಚರ್ಚಾಕೂಟವನ್ನು ಆಲಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version