ದಿನದ ಸುದ್ದಿ
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರ ಸಂಖ್ಯೆ ಹೆಚ್ಚಾಗಿದೆ, ಜನತೆ ಭಯ ಪಡಬೇಕಿಲ್ಲ : ಸಚಿವ ಡಾ.ಸುಧಾಕರ್
ಸುದ್ದಿದಿನ,ರಾಯಚೂರು: ರಾಜ್ಯದಲ್ಲಿ ಒಟ್ಟಾರೆ 6.516 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಅವರಲ್ಲಿ3.440 ರೋಗಿಗಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಕರ್ನಾಟಕದಲ್ಲಿ ನೋವೆಲ್ ಕೊರೋನಾ ಸೋಂಕಿನ ಚೇತರಿಕೆ ಪ್ರಮಾಣ ಶೇ 52.8 ರಷ್ಟು ಹೆಚ್ಚಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದರು.
ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಇದುವರೆಗೂ ಕೋವಿಡ್-19 ನಿಂದಾಗಿ 79 ಸಾವುಗಳು ಸಂಭವಿಸಿವೆ. ಮರಣ ಪ್ರಮಾಣ ಶೇಕಡವಾರು1.2 ರಷ್ಟು ದಾಖಲಾದರೆ, ರಾಷ್ಟçಮಟ್ಟದಲ್ಲಿ ಅವುಗಳ ಪ್ರಮಾಣ ಶೇ.2.8 ರಷ್ಟಿದೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಗುಣಮುಖರಾದ ಪ್ರಮಾಣ ಶೇ. 52.8 ವಾದರೆ, ರಾಷ್ಟ್ರಮಟ್ಟದಲ್ಲಿ49.8 ರಷ್ಟು ದಾಖಲಾಗಿದೆ.
ಈ ಮೂಲಕ ಕೋವಿಡ್-19 ಸೋಂಕಿನ ವಿರುದ್ಧ ರಾಜ್ಯ ಸರ್ಕಾರ ಉತ್ತಮ ಕ್ರಮಗಳನ್ನು ಕೈಗೊಂಡಿದೆ, ರಾಜ್ಯದಲ್ಲಿ ಸಕ್ರೀಯವಿರುವ2.995 ಪ್ರಕರಣಗಳ ಪೈಕಿ 2.531 ರೋಗಿಗಳಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ, ಆದಕಾರಣ ಸಾರ್ವಜನಿಕರು ಕೋವಿಡ್-19 ಗೆ ಭಯಪಡುವ ಅಗತ್ಯವಿಲ್ಲ, ಸ್ವಾಭಾವಿಕವಾಗಿ ಬರುವ ಕೆಮ್ಮು, ನೆಗಡಿ, ಜ್ವರಕ್ಕೆ ವೈದ್ಯರ ಬಳಿಗೆ ತೆರಳಲು ಹೆದರುವ ಸ್ಥಿತಿ ಕೊರೋನಾದಿಂದ ನಿರ್ಮಾಣವಾಗಿದೆ.
ಇದು ಹೋಗಬೇಕು. ಕೊರೋನಾ ಶೀಘ್ರವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಸಾರ್ಸ್, ಎಬೊಲಾ, ನಿಫಾದಂತೆ ಪ್ರಾಣ ಹರಣ ಮಾಡುವ ಭಯಾನಕ ರೋಗವಲ್ಲ ಎಂದವರು ಹೇಳಿದರು.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತಹ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೆ ಕೊರೋನಾವನ್ನು ಶೇ.50 ರಷ್ಟು ನಿಯಂತ್ರಿಸಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ನಮ್ಮಲ್ಲಿ ಮಾಡಿಕೊಳ್ಳುವ ಸಣ್ಣ ಬದಲಾವಣೆಗಳಿಂದ ದೊಡ್ಡ ಹಾಗೂ ಪರಿಣಾಮಕಾರಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಶುಚಿತ್ವ ಪಾಲನೆ ನಮ್ಮ ಜೀವನದ ಭಾಗವಾಗಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ11 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ11 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

