ದಿನದ ಸುದ್ದಿ
‘ಗ್ರಾಮ ಲೆಕ್ಕಿಗ’ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ರಾಯಚೂರು : ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿರುವ 51 ‘ಗ್ರಾಮ ಲೆಕ್ಕಿಗ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, 22-02-2019 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅಂಚೆ ಮೂಲಕ ಅಥವಾ ನೇರವಾಗಿ ಇಲಾಖೆಗೆ ಅರ್ಜಿಯನ್ನು ಸಲ್ಲಿಸುವ ಅವಕಾಶವಿರುವುದಿಲ್ಲ.
ಅರ್ಜಿಯ ಶುಲ್ಕ ವಿವರ
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST)ಹಾಗೂ ಪ್ರವರ್ಗ – 1, ಅಭ್ಯರ್ಥಿಗಳಿಗೆ 150 ರೂ. ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 300 ರೂಗಳನ್ನು ಅರ್ಜಿ ಶುಲ್ಕವಾಗಿ ನಿಗದಿ ಮಾಡಿದೆ.
ಶೈಕ್ಷಣಿಕ ಅರ್ಹತೆ
ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12 ನೇ ತರಗತಿಯಲ್ಲಿ ಪಾಸಾಗಿರಬೇಕು. ಈ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇನ್ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ.
ವಯೋಮಿತಿ
22-2-2019 ಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳ ವಯೋಮಿತಿಯನ್ನು ನಿಗದಿಮಾಡಲಾಗಿದೆ.
ವೇತನ ಶ್ರೇಣಿ
ತಿಂಗಳಿಗೆ 21400 ರಿಂದ 42000 ಸಾವಿರ ರೂಗಳು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401