ದಿನದ ಸುದ್ದಿ
ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳ ತ್ವರಿತ ಜಾರಿ : ರೈಲ್ವೆ ಸಚಿವ ವಿ. ಸೋಮಣ್ಣ
ಸುದ್ದಿದಿನಡೆಸ್ಕ್:ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳ ಜಾರಿಯನ್ನು ತ್ವರಿತಗೊಳಿಸಲಾಗುವುದು ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಜನರಿಗೆ ಕೈಗೆಟಕುವಂತೆ ವಂದೇ ಭಾರತ್ ರೈಲುಗಳ ಟಿಕೆಟ್ ದರವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮುಂದಿನ 2 ವರ್ಷಗಳಲ್ಲಿ ರೈಲ್ವೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ವಿಭಿನ್ನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಜರುಗಲಿವೆ. ಜನಸಂದಣಿ ಇರುವ ಕಡೆಗಳಲ್ಲಿ ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲಲ್ಲಿ ರೈಲ್ವೆ ಅಂಡರ್‌ಪಾಸ್ ಮತ್ತು ರೈಲ್ವೆ ಓವರ್ ಬ್ರಿಡ್ಜ್ ನಿರ್ಮಾಣವನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಲಾಗುವುದು. 280 ಕೋಟಿ ರೂಪಾಯಿ ವೆಚ್ಚದಲ್ಲಿ 11 ರೈಲ್ವೆ ಅಂಡರ್‌ಪಾಸ್ ಹಾಗೂ 285 ಕೋಟಿ ರೂಪಾಯಿ ವೆಚ್ಚದಲ್ಲಿ 11 ರೈಲ್ವೆ ಓವರ್ ಬಿಡ್ಜ್ ನಿರ್ಮಾಣವನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಉಪನಗರ ರೈಲ್ವೆ ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರಲು ಅಗತ್ಯಕ್ರಮ ಕೈಗೊಳ್ಳಲಾಗುವುದು. ಹೆಜ್ಜಾಲ-ಚಾಮರಾಜನಗರ ನಡುವಿನ 142 ಕಿಲೋಮೀಟರ್ ಹಳಿ ನಿರ್ಮಾಣಕ್ಕೆ ಶೀಘ್ರ ಸರ್ವೇ ನಡೆಸಿ, ಡಿಪಿಆರ್ ಸಿದ್ಧಪಡಿಸಲಾಗುವುದು. ಈ ಮಾರ್ಗಕ್ಕಾಗಿ 627 ಎಕರೆಗಳ ಭೂಸ್ವಾಧೀನ ಅಗತ್ಯವಿದೆ. ಈ ಕುರಿತು ಮುಂದಿನ 20 ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಸೋಮಣ್ಣ ಮಾಹಿತಿ ನೀಡಿದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲ್ವೆ ಹಳಿ ನಿರ್ಮಾಣಕ್ಕಾಗಿ 339 ಕೋಟಿ ರೂಪಾಯಿ ಅಗತ್ಯವಿದ್ದು, 2026ರ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಬೆಂಗಳೂರು ಮಹಾನಗರದಲ್ಲಿ ವರ್ತುಲ ರೈಲ್ವೆ ಮಾರ್ಗಕ್ಕಾಗಿ ಈಗಾಗಲೇ ನೀಲನಕ್ಷೆ ರೂಪಿಸಲಾಗಿದೆ. 287 ಕಿಲೋಮೀಟರ್ ಉದ್ದದ ಈ ರೈಲ್ವೆ ಯೋಜನೆಯು ನಿಡುವಂದ-ವಡ್ಡರಹಳ್ಳಿ-ದೇವನಹಳ್ಳಿ-ಮಾಲೂರು-ಹೀಲಲಿಗೆ-ಹೆಜ್ಜಾಲ ಸೋಲೂರು-ನಿಡುವಂದ ನಿಲ್ದಾಣಗಳ ಮೂಲಕ ಬೆಂಗಳೂರು ನಗರದ ಪ್ರಮುಖ ರೈಲ್ವೆ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಗೆ 23 ಸಾವಿರ ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಡಿಪಿಆರ್ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


