ದಿನದ ಸುದ್ದಿ

ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಜುಲೈ 19 ರಂದು 17.2 ಮಿ.ಮೀ. ಸರಾಸರಿ ಮಳೆಯಾಗಿದ್ದು, ಅಧಿಕ ಮಳೆಯಿಂದಾಗಿ ಒಟ್ಟಾರೆ ರೂ.12.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕಿನಲ್ಲಿ 4.8 ಮಿ.ಮೀ ವಾಡಿಕೆಗೆ 18.9 ಮಿ.ಮೀ ವಾಸ್ತವ, ದಾವಣಗೆರೆ ತಾಲ್ಲೂಕಿನಲ್ಲಿ 3.3 ಮೀ.ಮಿ ವಾಡಿಕೆಗೆ 18.6 ಮೀ.ಮಿ ವಾಸ್ತವ, ಹರಿಹರ ತಾಲ್ಲೂಕಿನಲ್ಲಿ 1.9 ಮಿ.ಮೀ. ವಾಡಿಕೆಗೆ 20.6 ಮೀ.ಮಿ ವಾಸ್ತವ, ಹೊನ್ನಾಳಿ ತಾಲ್ಲೂಕಿನಲ್ಲಿ 6.2 ಮಿ.ಮೀ ವಾಡಿಕೆಗೆ 23.3 ವಾಸ್ತವ, ಜಗಳೂರು ತಾಲ್ಲೂಕಿನಲ್ಲಿ 2.1 ಮೀ.ಮಿ ವಾಡಿಕೆ, 5.6 ಮೀ.ಮಿ ವಾಸ್ತವ, ನ್ಯಾಮತಿ ತಾಲ್ಲೂಕಿನಲ್ಲಿ 7.2ಮೀ.ಮಿ ವಾಡಿಕೆ, 26.2 ಮೀ.ಮಿ ವಾಸ್ತವ ಸರಾಸರಿ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 3 ಕಚ್ಚಾ ಮನೆಗಳು ಭಾಗಶ: ಹಾನಿಯಾಗಿದ್ದು ರೂ. 90 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಪೂರ್ಣ ಹಾನಿಯಾಗಿದ್ದು ರೂ.4. ಲಕ್ಷ, 2 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.60 ಸಾವಿರ, 1 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ.5 ಸಾವಿರ ಒಟ್ಟು ರೂ. 5.25 ಲಕ್ಷಅಂದಾಜು ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ. 75 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಪೂರ್ಣ ಹಾನಿಯಾಗಿದ್ದು, ರೂ. 1.60 ಲಕ್ಷ, 9 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.3.80 ಲಕ್ಷ, ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version