ದಿನದ ಸುದ್ದಿ
ಧಾರಾಕಾರ ಮಳೆ ; ಜಲಾವೃತ
ಸುದ್ದಿದಿನ ಡೆಸ್ಕ್ : ತೆಲಂಗಾಣದ ಹಲವು ಭಾಗದಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸುಮಾರು ಮೂರು ಗಂಟೆಗಳ ಕಾಲ ಹಲವು ಭಾಗಗಳಲ್ಲಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ , ಇಂದು ಆರೆಂಜ್ ಆಲರ್ಟ್ ಘೋಷಿಸಿದ್ದು, ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243