ದಿನದ ಸುದ್ದಿ
ದಾವಣಗೆರೆ ಮಳೆ ವಿವರ ಹೀಗಿದೆ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಆ.10 ರಂದು 4.8 ಮಿ.ಮೀ ಸರಾಸರಿ ಮಳೆಯಾಗಿದ್ದು ತಾಲ್ಲೂಕುವಾರು ಮಳೆ ವಿವರ ಈ ಕೆಳಕಂಡಂತೆ ಇದೆ.
ಮಳೆ ವಿವರ
- ಚನ್ನಗಿರಿ ತಾಲ್ಲೂಕಿನಲ್ಲಿ 2.0 ಮಿ.ಮೀ ವಾಸ್ತವ ಮಳೆಯಾಗಿದೆ.
- ದಾವಣಗೆರೆ ತಾಲ್ಲೂಕಿನಲ್ಲಿ 7.0 ಮಿ.ಮೀ ಮಳೆಯಾಗಿದೆ.
- ಹರಿಹರ ತಾಲ್ಲೂಕಿನಲ್ಲಿ 5.0 ಮಿ.ಮೀ ಮಳೆಯಾಗಿದೆ.
- ಹೊನ್ನಾಳಿ ತಾಲ್ಲೂಕಿನಲ್ಲಿ 5.0 ಮಿ.ಮೀ ಮಳೆಯಾಗಿದೆ.
- ಜಗಳೂರು ತಾಲ್ಲೂಕಿನಲ್ಲಿ 5.0 ಮಿ.ಮೀ ಮಳೆಯಾಗಿದೆ.
ಮಳೆ ಹಾನಿ
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 6 ಕಚ್ಚಾ ಮನೆಗಳು ಭಾಗಶಃ ಹಾನಿಯಾಗಿದ್ದು, ರೂ. 90 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 10 ಸಾವಿರ ಹಾಗೂ 1 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ರೂ. 10 ಸಾವಿರ ಒಟ್ಟು ರೂ. 20 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ. 20 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ. 1.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನಡೆಸ್ಕ್: 2024-25ನೇ ಸಾಲಿನ ರಾಜ್ಯ ಮುಂಗಡ ಪತ್ರ ಹಿನ್ನೆಲೆಯಲ್ಲಿ ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಸಭೆ ನಡೆಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಮುಂಗಡ ಪತ್ರ ಮಂಡನೆ ಹಿನ್ನೆಲೆಯಲ್ಲಿ ರೈತ ನಾಯಕರೊಂದಿಗೆ ಸಭೆ ನಡೆಸಿ, ಅವರ ಅಭಿಪ್ರಾಯ ಪಡೆಯಲಾಗಿದೆ. ಬಜೆಟ್ನಲ್ಲಿ ಸರ್ಕಾರದ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ರೈತರ ಹಿತ ಕಾಪಾಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಗೃಹಲಕ್ಷ್ಮಿ, ಪಡಿತರ ಸಹಾಯಧನದ ಬಾಕಿಯನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ. ಈ ಸಂಬಂಧ ಹೈಕೋರ್ಟ್ ನೀಡುವ ಆದೇಶವನ್ನು ಪಾಲಿಸಲಾಗುವುದು ಎಂದು ಪುನರುಚ್ಚರಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಮಾರ್ಚ್ 4 ರಿಂದ ಮೂರು ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಎಷ್ಟು ದಿನ ಅಧಿವೇಶನ ನಡೆಸಬೇಕು ಎನ್ನುವುದನ್ನು ಕಲಾಪ ಸಲಹಾ ಸಮಿತಿ ನಿರ್ಧಾರ ಮಾಡಲಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ

ಸುದ್ದಿದಿನ,ದಾವಣಗೆರೆ: ನಮಗೆ ಇಂದು ಭಕ್ತಿ ಮತ್ತು ಜ್ಞಾನ ಎರಡೂ ಮುಖ್ಯ. ಭಕ್ತಿ ಹೆಚ್ಚಿಸುವ ದೇವಾಲಯಗಳ ಜತೆಯಲ್ಲೇ ಜ್ಞಾನ ವಿಸ್ತರಿಸುವ ವಿದ್ಯಾಲಯಗಳೂ ಹೆಚ್ಚಬೇಕು ಎಂದು ಹೊಸದುರ್ಗ ಕನಕ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
ತಾಲೂಕಿನ ಹಳೆಕುಂದುವಾಡ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಆಂಜನೇಯ ಸ್ವಾಮಿ, ಶ್ರೀ ಬಸವೇಶ್ವರ ದೇವಸ್ಥಾನದ ಉದ್ಘಾಟನೆ, ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಂದಿನ ಮಕ್ಕಳನ್ನು ಐಎಎಎಸ್, ಕೆಎಎಸ್ನಂತಹ ಉನ್ನತ ಶಿಕ್ಷಣ ಹಾಗೂ ಸಂಸ್ಕಾರ ನೀಡಲು ಪಾಲಕರು ಮುಂದಾಗಬೇಕು. ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು. ದುಂದುವೆಚ್ಚ ಕಡಿಮೆ ಮಾಡಬೇಕು ಎಂದೂ ಸಲಹೆ ನೀಡಿದರು.
ಶ್ರೀಕೃಷ್ಣನು ಕನಕನಿಗೆ, ಶ್ರೀರಾಮನು ಶಬರಿಗೆ ಒಲಿದಿದ್ದು ಜಾತಿಯಿಂದಲ್ಲ; ಅವರಲ್ಲಿದ್ದ ಭಕ್ತಿಯಿಂದಾಗಿ. ಭಕ್ತಿ ಮತ್ತು ಭಕ್ತನಿಗೆ ಜಾತಿ ಇಲ್ಲ. ಎಲ್ಲ ಸ್ವಾಮೀಜಿಗಳನ್ನು, ವರ್ಗದವರನ್ನು ಒಗ್ಗೂಡಿಸಿದ ಕುಂದುವಾಡ, ಸಾಮರಸ್ಯದ ಗ್ರಾಮವಾಗಿದೆ. ಪ್ರತಿ ಗ್ರಾಮದಲ್ಲೂ ಇಂತಹ ವಾತಾವರಣ ಇರಬೇಕು ಎಂದು ಆಶಿಸಿದರು.
ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ ಆಂಜನೇಯನಿಗೆ ಸೀಮಿತ ಜಾತಿಯ ಭಕ್ತರಿಲ್ಲ. ಆತ ಜಾತ್ಯತೀತ ವ್ಯಕ್ತಿ. ಭಕ್ತಿಗೆ ಹೆಸರಾದ ಆಂಜನೇಯ ಹಾಗೂ ಸಮಾನತೆಗೆ ಹೆಸರಾದ ಬಸವೇಶ್ವರರ ದೇಗುಲ ಪ್ರತಿಷ್ಠಾಪನೆಯನ್ನು ಕುಂದುವಾಡ ಗ್ರಾಮಸ್ಥರು ಭಾವೈಕ್ಯ, ಸೌಹಾರ್ದ ಹಾಗೂ ಸಹಬಾಳ್ವೆಯಿಂದ ಮಾಡುತ್ತಿದ್ದಾರೆ. ಈ ಕುಂದುವಾಡ ಗ್ರಾಮ ಸೌಹಾರ್ದ ಗ್ರಾಮವಾಗಿ ಬದಲಾಗಲಿ ಎಂದು ಹೇಳಿದರು.
ಹದಡಿಯ ಚಂದ್ರಗಿರಿ ಮಠದ ಮುರಳೀಧರ ಸ್ವಾಮೀಜಿ ಮಾತನಾಡಿ ಎಲ್ಲವನ್ನು ಕೊಟ್ಟ ದೇವರನ್ನು ಮರೆಯುತ್ತಿದ್ದೇವೆ. ನಿಸರ್ಗವನ್ನು ಹಾಳು ಮಾಡುತ್ತ, ಮಾಲಿನ್ಯ ಹೆಚ್ಚಿಸುತ್ತಿದ್ದೇವೆ. ನಮ್ಮಲ್ಲಿ ಭಯ ಮೂಡಿಸಲು ಹಿರಿಯರು ಊರಿಗೊಂದು ದೇವಸ್ಥಾನ ನಿರ್ಮಿಸಿದ್ದಾರೆ. ಆದರೆ ನಮ್ಮೊಳಗಿರುವ ದೇವರನ್ನು ನಾವು ಕಾಣಬೇಕು. ಮದಗಳನ್ನು ಕೈಬಿಡಬೇಕು. ಧರ್ಮ ಕಾರ್ಯ, ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿ ಬಸವತತ್ವ ಎಲ್ಲರೂ ಕೂಡಿ ಬಾಳುವುದನ್ನು ಹೇಳಿದೆ. ಎಲ್ಲ ವರ್ಗಗಳಿಗೂ ಬಸವಣ್ಣನವರು ಸಾಮಾಜಿಕ ನ್ಯಾಯ ನೀಡಿದರು. ನಾವಿಂದು ಅವರ ದಾರಿಯಲ್ಲಿ ಸಾಗಬೇಕಿದೆ. ಬಸವಣ್ಣ ಕಂಡು ಕನಸು ಕುಂದುವಾಡ ಗ್ರಾಮದಲ್ಲಿ ಅನಾವರಣವಾಗಿದ್ದು, ಇಲ್ಲಿ ಸದಾ ಶಾಂತಿ ನೆಲೆಸಲಿ ಎಂದು ಆಶಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಗ್ರಾಮದವರು ತುಂಬಾ ಒಗ್ಗಟ್ಟಿನಿಂದ ದೇವಾಲಯ ನಿರ್ಮಾಣ ಮಾಡಿರೋದು ಮೆಚ್ಚುವಂತಾಗಿದೆ,
ತಡವಾಗಿಯಾದರೂ ಗ್ರಾಮದಲ್ಲಿ ದೇಗುಲಗಳು ಉತ್ತಮವಾಗಿ ನಿರ್ಮಿತವಾಗಿವೆ. ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಹೇಳಿದರು.
ದಾವಣಗೆರೆ- ಹಳೇ ಕುಂದುವಾಡ ಮುಖ್ಯ ರಸ್ತೆಗೆ ಹೊಂದಿಕೊಂಡ ರಸ್ತೆ ವ್ಯಾಜ್ಯ ನ್ಯಾಯಾಲಯದಲ್ಲಿದ್ದು ಇದನ್ನು ತೆರವುಗೊಳಿಸಿದಲ್ಲಿ ಗ್ರಾಮಸ್ಥರು ಬಯಸಿದಂತೆ 80 ಅಡಿ ರಸ್ತೆ ನಿರ್ಮಾಣ ಮಾಡಲು ಬದ್ಧನಿದ್ದೇನೆ. ಈ ಸಂಬಂಧ ದೂಡಾ ಅಧಿಕಾರಿಗಳು, ಜಮೀನಿನ ಮಾಲೀಕರು, ಗುತ್ತಿಗೆದಾರರನ್ನು ಸೇರಿಸಿ ಸಭೆ ನಡೆಸೋಣ ಎಂದರು.
ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಈ ಭಾಗದಲ್ಲಿ ದೇಗುಲಗಳ ಸಂಖ್ಯೆ ಹೆಚ್ಚಿದೆ. ಹಿಂದುಳಿದ ವರ್ಗದ ಮಕ್ಕಳು ವಿದ್ಯಾವಂತರಾದರೆ ಇಂತಹ ಹತ್ತು ದೇವಸ್ಥಾನ ಕಟ್ಟುತ್ತಾರೆ, ಹೀಗಾಗಿ ಶಾಲೆಗಳ ನಿರ್ಮಾಣಕ್ಕೂ ಮಹತ್ವ ನೀಡಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಮೈಲಾರ ಕ್ಷೇತ್ರದ ಕಾರ್ಣಿಕ ನುಡಿಯುವ ರಾಮಪ್ಪಜ್ಜ, ಹಳೆಕುಂದುವಾಡದ ಸ್ವಾಮಿಜಿ ರಾಜಣ್ಣ, ಮುಖಂಡರಾದ ಬಿ.ಜಿ. ಅಜಯಕುಮಾರ್, ಲೋಕಿಕೆರೆ ನಾಗರಾಜ್, ಶ್ರೀನಿವಾಸ ದಾಸಕರಿಯಪ್ಪ, ಎಚ್. ವೆಂಕಟೇಶ್, ಜೆ.ಎನ್. ಶ್ರೀನಿವಾಸ್. ಶ್ವೇತಾ ಶ್ರೀನಿವಾಸ್, ಮುದೇಗೌಡ್ರ ಗಿರೀಶ್, ತಹಸೀಲ್ದಾರ್ ಬಿ.ಎನ್.ಅಶ್ವಥ್, ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮದ ಮುಖಂಡರು, ಯುವಕರು, ಗ್ರಾಮಸ್ಥರು ಸೇರಿದಂತೆ ಇತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ5 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ4 days ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ2 days ago
ಕವಿತೆ | ನಾನೊಲಿದೆನಯ್ಯಾ
-
ದಿನದ ಸುದ್ದಿ3 days ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ
-
ದಿನದ ಸುದ್ದಿ21 hours ago
ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ
-
ದಿನದ ಸುದ್ದಿ21 hours ago
ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ
-
ದಿನದ ಸುದ್ದಿ19 hours ago
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ