ದಿನದ ಸುದ್ದಿ

ವಿಡಿಯೋ | ಹರಪನಹಳ್ಳಿ ಮತ್ತು ದಾವಣಗೆರೆ ಜಿಲ್ಲೆಯಾದ್ಯಂದ ಧಾರಾಕಾರ ಮಳೆ : ಸಿಟಿ ಕೂಲ್ ಕೂಲ್

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆ ಸೇರಿದಂತೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯಲ್ಲಿ ಸೋಮವಾರ ಬೆಳ್ಳಗ್ಗೆ ಐದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿದಿದೆ.

ನ್ಯಾಮತಿ, ಮಲೆಬೆನ್ನೂರು, ಸಂತೆಬೆನ್ನೂರು, ಚನ್ನಗಿರಿ, ಮಾಯಕೊಂಡ, ದಾವಣಗೆರೆಯಲ್ಲಿ ಉತ್ತಮ ಮಳೆ ಸುರಿಯಿತು. ಗಾಳಿ ಬೀಸಿದ್ದರಿಂದ ಕೆಲ ಕಡೆ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇನ್ನು ಕೆಲ ಕಡೆ ಚರಂಡಿಗಳು ಬ್ಲಾಕ್ ಆಗಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿವೆ. ಬಿಡಾಡಿ ದನಗಳು ರಸ್ತೆ ಪಕ್ಕದಲ್ಲಿ ಆಶ್ರಯ ಪಡೆದಿದ್ದು,ಇನ್ನು ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಸಜ್ಜಾಗಿದ್ದಾರೆ.

ವಿಡಿಯೋ ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version