ದಿನದ ಸುದ್ದಿ

ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋ ಮೀಟರ್ ತಲುಪುವ ಸಾಧ್ಯತೆ ಇದ್ದು, ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ.

ಕೊಡಗು ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version