ದಿನದ ಸುದ್ದಿ

ಮಂಗಳೂರಿನಲ್ಲಿ ಮಳೆ ಅಬ್ಬರ : ಎರಡು ರೈಲುಗಳ ಸಂಚಾರ ರದ್ದು

Published

on

ಸುದ್ದಿದಿನ,ಮಂಗಳೂರು: ಮಂಗಳೂರಿನಲ್ಲಿ ಇಂದು ಮಳೆ ಅಬ್ಬರ ಮುಂದುವರೆದಿದ್ದು, ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರ ಪರಿಣಾಮವಾಗಿ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದುಪಡಿಸಿದೆ.

ಮಂಗಳೂರು-ಸುಬ್ರಹ್ಮಣ್ಯ ಮಾರ್ಗವಾಗಿ ಇಂದು (ಗುರುವಾರ) ಹೋಗುವ ಎರಡು ವಿಶೇಷ ರೈಲುಗಳು ತನ್ನ ಸಂಚಾರ ಸ್ಥಗಿತಗೊಂಡಿದೆ. ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version