ದಿನದ ಸುದ್ದಿ
ಅಕಾಲ ಮಳೆ | ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ; ಸಾವಿನ ಸಂಖ್ಯೆಯಲ್ಲಿ ಏರಿಕೆ
ಸುದ್ದಿದಿನ ಡೆಸ್ಕ್ : ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಕಳೆದ 10 ದಿನಗಳಲ್ಲಿ 112ಮಂದಿಗೆ ಈ ಜ್ವರ ದೃಢಪಟ್ಟಿದ್ದು, ಡೆಂಗಿ ಪೀಡಿತರ ಒಟ್ಟು ಸಂಖ್ಯೆ 1 ಸಾವಿರದ418 ಕ್ಕೆ ಏರಿಕೆಯಾಗಿದೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. 28ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 12 ಸಾವಿರದ 627ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದ್ದು, 302 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243