ದಿನದ ಸುದ್ದಿ
ಮುಂದಿನ 24 ಗಂಟೆಗಳಲ್ಲಿ ರಾಜ್ಯದ್ಯಂತ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಸುದ್ದಿದಿನ ಡೆಸ್ಕ್ : ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 28 ಸೆಂಟಿ ಮೀಟರ್ ಗರಿಷ್ಟ ಪ್ರಮಾಣದಲ್ಲಿ ಮಳೆಯಾಗಿದ್ದು, ಕೊಡಗು ಜಿಲ್ಲೆ ಭಾಗಮಂಡಲ 24 , ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 23 ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಹಾಗೂ ಉಡುಪಿಯಲ್ಲಿ ತಲಾ 22ಸೆಂಟಿ ಮೀಟರ್ ಗರಿಷ್ಟ ಮಳೆಯಾಗಿದೆ.
ಬೆಳ್ತಂಗಡಿ, ಕೊಟ್ಟಿಗೆಹಾರ 17 ಸೆಂಟಿ ಮೀಟರ್ ಮಳೆಯಾಗಿದ್ದು, ಸುಬ್ರಹ್ಮಣ್ಯ ಗೇರ್ರುಸೊಮ್ಮ 16, ಕೋಟ, ಉಪ್ಪಿನಂಗಡಿ, ಮಾಣಿ 15, ಪುತ್ತುರು, ಲಿಂಗನಮಕ್ಕಿ 15, ಸುಳ್ಯ, ಸಿದ್ದಾಪುರ, ನಾಪೋಕ್ಲು 13, ಕುಮಟಾ, ಜಯಪುರ, ಕಳಸ 12 ಸೆಂಟಿಮೀಟರ್ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ್ಯಂತ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಒಂದೆರಡು ಬಾರಿ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಟ ಉಷ್ಣಾಂಶ 28 ಮತ್ತು ಕನಿಷ್ಟ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243