ದಿನದ ಸುದ್ದಿ
ಮಡಿಕೇರಿ ಭೂಕುಸಿತ | ಶನಿವಾರ ರವಿಕಿರಣ್ ಮೃತದೇಹ ಪತ್ತೆ

ಸುದ್ದಿದಿನ,ಮಡಿಕೇರಿ : ಮಡಿಕೇರಿ ತಾಲ್ಲೂಕು ಭಾಗಮಂಡಲದ ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಆಗಸ್ಟ್ 06 ರಂದು ಉಂಟಾದ ಭೂಕುಸಿತದಿಂದ 05 ಜನರು ಕಣ್ಮರೆಯಾಗಿದ್ದರು. ಈ ಸಂಬಂಧ ಜಿಲ್ಲಾ ಪ್ರಕೃತಿ ವಿಕೋಪ ತಂಡ, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಅರಣ್ಯ, ಅಗ್ನಿಶಾಮಕ ಮತ್ತು ಪೋಲೀಸ್ ಇಲಾಖಾ ತಂಡಗಳು ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದರು.
ಶನಿವಾರವೂ ಸಹ ಸಹ ಜಿಲ್ಲಾ ಪ್ರಕೃತಿ ವಿಕೋಪ ತಂಡ ಎನ್ಡಿಆರ್ಎಫ್,
ಎಸ್ಡಿಆರ್ಎಫ್,ಅರಣ್ಯ, ಅಗ್ನಿಶಾಮಕ ಮತ್ತು ಪೆÇಲೀಸ್ ಇಲಾಖಾ ತಂಡಗಳು ಕಾರ್ಯಾಚರಣೆ ನಡೆಸಿದ್ದು, ಕಾಣೆಯಾದವರ ಪೈಕಿ ರವಿಕಿರಣ್ ಎಂಬುವವರ ಮೃತ ದೇಹ ಪತ್ತೆಯಾಗಿದೆ. ಇದರೊಂದಿಗೆ ಕಾಣೆಯಾದ 05 ಜನರ ಪೈಕಿ 03 ಜನರ ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಇಬ್ಬರ ಹುಡುಕಾಟಕ್ಕೆ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನಸು ಮಾರಾಟ ಮಾಡಿ ಲಾಭ ಮಾಡಿಕೊಳ್ಳಲು ಡಿಜಿಟಲ್ ಮಾಧ್ಯಮ ಅತ್ಯುತ್ತಮ ವೇದಿಕೆ : ಈಗಲ್ಸ್ ಫೋರ್ಡ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಆರ್ಯನ್ ಕುಂದರ್

ಸುದ್ದಿದಿನ,ದಾವಣಗೆರೆ : ಇದು ಕನಸನ್ನು ಮಾರಾಟ ಮಾಡುವ ಕಾಲ. ನಿಮ್ಮ ಕನಸನ್ನು ಮಾರಾಟ ಮಾಡಿ ಲಾಭ ಮಾಡಿಕೊಳ್ಳಲು ಡಿಜಿಟಲ್ ಮಾಧ್ಯಮ ಅತ್ಯುತ್ತಮ ವೇದಿಕೆಯಾಗಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಮಾಧ್ಯಮಕ್ಷೇತ್ರದ ಲಾಭ ಪಡೆಯಲು ಮುಂದಾಗಬೇಕು ಎಂದು ಈಗಲ್ಸ್ ಫೋರ್ಡ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಆರ್ಯನ್ಕುಂದರ್ ಸಲಹೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ಡಿಜಿಟಲ್ ಮಾಧ್ಯಮ ವೇದಿಕೆ ಮತ್ತು ಮಾರುಕಟ್ಟೆ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತನ್ನಲ್ಲಿರುವಕಲ್ಪನೆ, ಆಲೋಚನೆ, ಕನಸುಗಳನ್ನು ಹಂಚಿಕೊಂಡು ತಂತ್ರಜ್ಞಾನದ ಕೌಶಲದ ಮೂಲಕ ಆರ್ಥಿಕವಾಗಿ ಭದ್ರನಾಗುತ್ತಿದ್ದಾನೆ. ಅದಕ್ಕೆ ಡಿಜಿಟಲ್ ವೇದಿಕೆ ಉತ್ತಮ ಬುನಾದಿಯಾಗಿದೆ ಎಂದರು.
ಮಾಧ್ಯಮಕ್ಷೇತ್ರ ಸಾಕಷ್ಟು ವಿಸ್ತಾರವಾಗಿದೆ. ಪ್ರಸ್ತುತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಪತ್ರಕರ್ತನಾಗಿದ್ದಾನೆ. ಹಾಗೆಯೇ ವ್ಯಾಪಾರಿಯೂ ಆಗಿದ್ದಾನೆ. ವೃತ್ತಿ ಕೌಶಲಗಳನ್ನು ರೂಢಿಸಿಕೊಂಡು ಡಿಜಿಟಲ್ ಹಾಗೂ ಸ್ಯಾಟ್ಲೈಟ್ ವೇದಿಕೆಗಳಲ್ಲಿರುವ ಅವಕಾಶ ಸದ್ಬಳಕೆ ಮಾಡಿಕೊಂಡರೆ ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.
ಬದಲಾಗುತ್ತಿರುವ ಮಾಧ್ಯಮಕ್ಷೇತ್ರದ ವ್ಯವಸ್ಥೆಗೆ ತಕ್ಕಂತೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ವೃತ್ತಿಪರತೆಯನ್ನು ರೂಢಿಸಿಕೊಳ್ಳಬೇಕು.ತಂತ್ರಜ್ಞಾನ, ಆವಿಷ್ಕಾರ, ಸಂಶೋಧನೆಗಳ ಜೊತೆಗೆ ತಮ್ಮಲ್ಲಿರುವ ಸಾಮಥ್ರ್ಯ ಹಾಗೂ ಕೌಶಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಬೌದ್ಧಿಕ ವಿಚಾರಗಳನ್ನು ವ್ಯಾಪಾರ ಮಾಡಿ ಆದಾಯ ಗಳಿಸುವ ಮಾರ್ಗಗಳನ್ನು ಕಂಡುಕೊಳ್ಳಬೇಕು.ಆ ನಿಟ್ಟಿನಲ್ಲಿ ಯೋಚನೆ ಮಾಡಿದಾಗ ಮಾತ್ರ ಆರ್ಥಿಕವಾಗಿ ಸಬಲತೆ ಪಡೆಯಲು ಸಾಧ್ಯ ಎಂದು ನುಡಿದರು.
ಇದನ್ನೂ | ದಾವಣಗೆರೆ | ವಯೋಶ್ರೇಷ್ಟ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಾಧ್ಯಮಕ್ಷೇತ್ರದಲ್ಲಿ ಹಿಂದೆ ಜನಪರ ಸೇವೆಗೆ ಮಾತ್ರ ಬೆಲೆ ಇತ್ತು. ಆದರೆ ಈಗಿನ ಬದಲಾದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಬದುಕನ್ನೂ ಕಟ್ಟಿಕೊಳ್ಳಬೇಕು.ಅದಕ್ಕಾಗಿ ಯಾವುದೇ ಒಂದು ಸಂಸ್ಥೆ ಮೇಲೆ ಅವಲಂಬಿತರಾಗದೆ ಲಭ್ಯವಿರುವ ಇನ್ನಿತರ ಅವಕಾಶಗಳತ್ತ ಗಮನ ಹರಿಸಬೇಕು. ಬಂಡವಾಳ ಹೂಡದೇ ಲಾಭ ಗಳಿಸುವ ಹಲವಾರು ಅವಕಾಶಗಳು ಡಿಜಿಟಲ್ ಮಾಧ್ಯಮಕ್ಷೇತ್ರದಲ್ಲಿ ತೆರೆದುಕೊಂಡಿದ್ದು, ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
‘ನಿಮ್ಮ ಸುತ್ತ ಮುತ್ತ ನಡೆಯುವ ಘಟನೆ, ವಿಶೇಷಗಳನ್ನೇ ಆಯ್ದುಕೊಂಡು, ಅದಕ್ಕೊಂದು ರೂಪಕೊಟ್ಟು, ಕ್ಯಾಮೆರಾದಲ್ಲಿ ಸೆರೆ ಹಿಡಿದು ತಂತ್ರಜ್ಞಾನದ ಮೂಲಕ ಮಾರುಕಟ್ಟೆಗೆ ಬಿಟ್ಟರೆ ಅದೇ ಉತ್ಪನ್ನವಾಗಿ ಮಾರಾಟವಾಗುತ್ತದೆ. ಇಲ್ಲಿ ನೋಡುಗರಿಂದಲೇ ವ್ಯಾಪಾರ ಕುದುರುತ್ತದೆ. ಅದಕ್ಕೆ ಮಾರಾಟದ ಕಲೆ ಅತ್ಯವಶ್ಯವಾಗಿದೆ ಎಂದು ಹೇಳಿದರು.
ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಡಾ.ಶಿವಕುಮಾರ ಕಣಸೋಗಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ತಂತ್ರಜ್ಞಾನದ ಆವಿಷ್ಕಾರಗಳು ಅವಕಾಶದ, ಆರ್ಥಿಕತೆಯ ಅವಕಾಶಗಳನ್ನು ಬಿಚ್ಚಿಟ್ಟುಕೊಂಡಿದೆ. ಯಾರು ಯಾವರೀತಿ, ಹೇಗೆ ಅದನ್ನು ಉಪಯೋಗಿಸಿಕೊಂಡು ಲಾಭ ಗಳಿಸುತ್ತಾರೆ ಎಂಬುದರ ಮೇಲೆ ಅವರ ಭವಿಷ್ಯ ನಿಂತಿದೆ. ಇದೊಂದು ಮಾಧ್ಯಮ ಬಜಾರ್ ಇಲ್ಲಿ ತಂತ್ರಜ್ಞಾನ, ಕೌಶಲ ಹಾಗೂ ಕನಸುಗಳಿಗೆ ಬೆಲೆ ಹೆಚ್ಚು ಎಂದು ಹೇಳಿದರು.
ಸಹಾಯಕ ಪ್ರಾಧ್ಯಾಪಕಿ ಡಾ.ಚಂದ್ರಲೇಖಾಜೆ.ಎಸ್, ಬೋಧಕ ಸಹಾಯಕರಾದ ಲಾವಣ್ಯ, ವೆಂಕಟೇಶ್, ಗಂಗಾಧರ್ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ವಯೋಶ್ರೇಷ್ಟ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರು 2021-22ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ ವಯೋಶ್ರೇಷ್ಠ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಸಂಬಂಧ ಈ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಹಿರಿಯ ನಾಗರಿಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಆಂಗ್ಲ ಭಾಷೆಯ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಗಳಲ್ಲಿ ಅರ್ಜಿಯನ್ನು ಮಾ.03 ರೊಳಗಾಗಿ ಕಚೇರಿಗೆ ಸಲ್ಲಿಸಬಹುದು.
ಇದನ್ನೂ ಓದಿ | ಪರವಾನಗಿ ಹೊಂದಿದ ಮಾರಾಟಗಾರರಿಂದ ಮಾತ್ರ ತಂಬಾಕು ಮಾರಾಟವಾಗಬೇಕು : ಎನ್ಎಲ್ಎಸ್ಐಯು ವರದಿ
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ http://socialjustice.nic.in ಪರಿಶೀಲಿಸಲು ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, 14ನೇ ಮುಖ್ಯರಸ್ತೆ, ಕುವೆಂಪು ನಗರ, ಶಂಕರ್ ಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ. ದೂ.ಸಂ: 08192-263939ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಜಿ.ಎಸ್ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರವಾನಗಿ ಹೊಂದಿದ ಮಾರಾಟಗಾರರಿಂದ ಮಾತ್ರ ತಂಬಾಕು ಮಾರಾಟವಾಗಬೇಕು : ಎನ್ಎಲ್ಎಸ್ಐಯು ವರದಿ

ಸುದ್ದಿದಿನ,ಬೆಂಗಳೂರು: ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಎಲ್ಲ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳು ಪರವಾನಗಿ ಹೊಂದಿರಬೇಕು. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಎಲ್ಲ ಆವರಣಗಳಲ್ಲಿ ಪರವಾನಗಿಯನ್ನು ಎದ್ದು ಕಾಣುವಂತೆ ಪ್ರದರ್ಶಿಸಬೇಕು ಹಾಗು ಪ್ರತಿ ವರ್ಷ ಪರವಾನಗಿಯನ್ನು ನವೀಕರಿಸಬೇಕು ಎಂದು ಇತ್ತೀಚೆಗೆ ಬಿಡುಗಡೆಗೊಂಡ ‘ಭಾರತದಲ್ಲಿ ತಂಬಾಕು ಮಾರಾಟಗಾರರ ಪರವಾನಗಿ ಜಾರಿ ಚೌಕಟ್ಟು’ (Framework for Implementation of Tobacco Vendor Licensing in India) ವರದಿ ಶಿಫಾರಸು ಮಾಡಿದೆ.
ತಂಬಾಕು ಉತ್ಪನ್ನಗಳ ಲಭ್ಯತೆಯನ್ನು ನಿಯಂತ್ರಿಸಿ, ವ್ಯಸನಕಾರಿ ತಂಬಾಕು ಉತ್ಪನ್ನಗಳಿಂದ ಉಂಟಾಗುವ ಆಜೀವ ಯಾತನೆಯಿಂದ ಭಾರತೀಯರನ್ನು ರಕ್ಷಿಸಲು ತಂಬಾಕು ಮಾರಾಟಗಾರರ ಪರವಾನಗಿ ನಿರ್ಣಾಯಕವಾಗಿದೆ. ವರದಿಯ ಪ್ರಕಾರ, ಸಿಗರೇಟ್, ಬೀಡಿ ಮತ್ತು ಜಗಿಯುವ ತಂಬಾಕು ಉತ್ಪನ್ನ ಮಾರಾಟಕ್ಕೆ ಮಾರಾಟಗಾರರ ಪರವಾನಗಿಯನ್ನು ಅನುಷ್ಠಾನಗೊಳಿಸಿದರೆ, ತಂಬಾಕು ನಿಯಂತ್ರಣ ಕಾನೂನು ಮತ್ತು ನೀತಿಗಳ ಪರಿಣಾಮಕಾರಿ ಜಾರಿಗೂ ಸಹಕಾರಿಯಾಗುತ್ತದೆ.
ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್ಎಲ್ಎಸ್ಐಯು) ದಿ ಚೇರ್ ಆನ್ ಕನ್ಸ್ಯುಮರ್ ಲಾ ಅಂಡ್ ಪ್ರಾಕ್ಟೀಸ್ ಬಿಡುಗಡೆ ಮಾಡಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಫೆಬ್ರವರಿ 25ಕ್ಕೆ ಸಲ್ಲಿಸಲಾಗಿರುವ ಈ ವರದಿ, ಭಾರತದಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸಲು ಮಾರಾಟಗಾರರ ಪರವಾನಗಿ ಪರಿಕಲ್ಪನೆಯನ್ನು ವಿಶ್ಲೇಷಿಸಿದೆ.
ಇದನ್ನೂ ಓದಿ | ದಾವಣಗೆರೆ ಜಿ.ಪಂ ಸಾಮಾನ್ಯ ಸಭೆ | ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವಂತೆ ಸದಸ್ಯರ ಒತ್ತಾಯ
ಅಲ್ಲದೆ, ಭಾರತದ ವಿವಿಧ ರಾಜ್ಯ ಮತ್ತು ನಗರಗಳು ಮಾರಾಟಗಾರರ ಪರವಾನಗಿ ಕುರಿತು ಅಳವಡಿಸಿಕೊಂಡಿರುವ ಪದ್ಧತಿ ಮತ್ತು ಪ್ರಕ್ರಿಯೆಯನ್ನು ಪರಿಶೀಲಿಸಿದೆ. ತಂಬಾಕು ಮಾರಾಟಗಾರರ ಪರವಾನಗಿಗಾಗಿ ಅಸ್ತಿತ್ವದಲ್ಲಿರುವ ಕಾನೂನುಗಳು, ಜಾಗತಿಕವಾಗಿ ಆಚರಣೆಯಲ್ಲಿರುವ ಅತ್ಯುತ್ತಮ ಅಭ್ಯಾಸಗಳು ಮತ್ತು ವಿಶ್ವ ಅರೋಗ್ಯ ಸಂಸ್ಥೆಯ ಫ್ರೇಮ್ ವರ್ಕ್ ಕನ್ವೆನ್ಷನ್ ಆನ್ ಟೊಬ್ಯಾಕೋ ಕಂಟ್ರೋಲ್ (WHO FCTC) ತಂಬಾಕು ನಿಯಂತ್ರಣದ ಕುರಿತಾದ ಜಾಗತಿಕ ಸಾರ್ವಜನಿಕ ಆರೋಗ್ಯ ಒಪ್ಪಂದದಡಿ ಸೂಚಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ವರದಿ ಮಾದರಿ ಚೌಕಟ್ಟನ್ನು ಪ್ರಸ್ತಾಪಿಸಿದೆ.
ನಿಯಂತ್ರಕ ವಿಧಾನವಾಗಿ ಪರಿಗಣಿಸುವುದಾದರೆ, ತಂಬಾಕು ಮಾರಾಟಗಾರರ ಪರವಾನಗಿ ರಾಜ್ಯ/ಪುರಸಭೆ ಮಟ್ಟದಲ್ಲಿ ಅತ್ಯಂತ ಪರಿಣಾಮಕಾರಿ ಅಸ್ತ್ರವಾಗಬಹುದು. ಚಿಲ್ಲರೆ ವ್ಯಾಪಾರದಲ್ಲಿ ತಂಬಾಕು ಉತ್ಪನ್ನಗಳ ಲಭ್ಯತೆ ಕುಗ್ಗಿಸುವ ಗುರಿ ಹೊಂದಿರುವ ವಿವಿಧ ನೀತಿಗಳನ್ನು ಕಾರ್ಯಗತಗೊಳಿಸಿ ಜಾರಿಗೊಳಿಸಲು ಮಾರಾಟಗಾರರ ಪರವಾನಗಿ ಮಾದರಿ ಚೌಕಟ್ಟನ್ನು ಬಳಸಬಹುದಾಗಿದ್ದು, ಇದು ಸ್ಥಳೀಯ ಸರ್ಕಾರಗಳಿಗೆ ಉತ್ತಮ ನಿಯಂತ್ರಕ ಸಾಧನದ ಅಡಿಗಲ್ಲಾಗಿದೆ.
ಭಾರತದಲ್ಲಿ ತಂಬಾಕು ನಿಯಂತ್ರಣವನ್ನು ಪ್ರಾಥಮಿಕವಾಗಿ ಕೋಟ್ಪಾ (COTPA) ನಿಯಂತ್ರಿಸುತ್ತಿದ್ದರೂ, ತಂಬಾಕು ಬಳಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಇತರ ಕಾನೂನುಗಳಿವೆ. ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿವಿಧ ಕಾನೂನುಗಳ ಪರಿಣಾಮಕಾರಿ ಮತ್ತು ಸಂಘಟಿತ ಜಾರಿಗೆ ರಾಜ್ಯ ಮತ್ತು ಪುರಸಭೆ ಸರ್ಕಾರಗಳಿಗೆ ತಂಬಾಕು ಮಾರಾಟಗಾರರ ಪರವಾನಗಿ ಒಂದು ವಿಶಿಷ್ಟ ಅವಕಾಶವನ್ನು ಒದಗಿಸುತ್ತದೆ.
“ತಂಬಾಕಿನ ಹಾನಿಕಾರಕ ಪರಿಣಾಮಗಳು ಜಗತಿನಾದ್ಯಂತ ಸಾಬೀತಾಗಿದ್ದು, ಅವುಗಳನ್ನು ಒಪ್ಪಿಕೊಳ್ಳಲಾಗಿದೆ. ಈ ವರದಿಯ ಮೂಲಕ, ಅಸ್ತಿತ್ವದಲ್ಲಿರುವ ಕಾನೂನು ಮತ್ತು ಜಾಗತಿಕ ಅತ್ಯುತ್ತಮ ಅಭ್ಯಾಸಗಳ ಆಧಾರದ ಮೇಲೆ ಪರವಾನಗಿ ಪಡೆದ ಮಾರಾಟಗಾರರ ಮೂಲಕ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮಾದರಿ ಕಾನೂನು ಚೌಕಟ್ಟನ್ನು ಎನ್ಎಲ್ಎಸ್ಐಯು ಶಿಫಾರಸು ಮಾಡಿದೆ.
ಈ ಮಾರಕ ಉತ್ಪನ್ನಗಳಿಂದ ಭಾರತೀಯರನ್ನು, ವಿಶೇಷವಾಗಿ ಮಕ್ಕಳು ಮತ್ತು ಯುವಕರನ್ನು ರಕ್ಷಿಸಲು ರಾಜ್ಯ ಮತ್ತು ಪುರಸಭ ಸರ್ಕಾರಗಳು ಈ ಶಿಫಾರಸುಗಳನ್ನು ಪರಿಗಣಿಸುತ್ತವೆ ಎಂದು ನಾವು ಆಶಿಸುತ್ತೇವೆ,” ಎಂದು ಪ್ರೊ. (ಡಾ.) ಅಶೋಕ್ ಆರ್. ಪಾಟೀಲ್, ಕಾನೂನು ಪ್ರಾಧ್ಯಾಪಕರು ಮತ್ತು ಚೇರ್ ಪ್ರೊಫೆಸರ್, ದಿ ಚೇರ್ ಆನ್ ಕನ್ಸ್ಯುಮರ್ ಲಾ ಅಂಡ್ ಪ್ರಾಕ್ಟೀಸ್, ಎನ್ಎಲ್ಎಸ್ಐಯು, ಬೆಂಗಳೂರು, ಅವರು ತಿಳಿಸಿದರು.
ಎನ್ಎಲ್ಎಸ್ಐಯು ವರದಿಯ ತಂಬಾಕು ಮಾರಾಟಗಾರರ ಪರವಾನಗಿಯ ಮಾದರಿ ಕಾನೂನು ಚೌಕಟ್ಟಿನ ಪ್ರಕಾರ: ಎಲ್ಲ ತಂಬಾಕು ಮಾರಾಟಗಾರರು, ಚಿಲ್ಲರೆ ಅಥವಾ ಸಗಟು ವ್ಯಾಪಾರಿಗಳು, 12 ತಿಂಗಳ ಅವಧಿಯ ಮಾನ್ಯತೆಯುಳ್ಳ ಪರವಾನಗಿ ಹೊಂದಿರಬೇಕು, ಅದು ವರ್ಗಾಯಿಸಲಾಗದ ಪರವಾನಗಿಯಾಗಿರಬೇಕು ಮತ್ತು ಅದನ್ನು ಪ್ರತಿವರ್ಷ ನವೀಕರಿಸಬೇಕು; ಪರವಾನಗಿ ಪಡೆಯಲು ಉದ್ದೇಶಿಸುವ ಎಲ್ಲ ಅರ್ಜಿದಾರರು ತಂಬಾಕು ನಿಯಂತ್ರಣ ಕಾನೂನುಗಳನ್ನು ಅನುಸರಿಸಬೇಕು; ತಂಬಾಕು ಉತ್ಪನ್ನಗಳನ್ನು ಮಾತ್ರ ಮಾರುವ ಮಾಡುವ ಮಾರಾಟಗಾರರಿಗೆ ಪರವಾನಗಿ ನೀಡಬೇಕು ಮತ್ತು ತಂಬಾಕಿನೊಂದಿಗೆ ಚಾಕೊಲೇಟ್, ಮಿಠಾಯಿ, ಬಿಸ್ಕತ್ತು, ಚಿಪ್ಸ್ ಮುಂತಾದ ತಂಬಾಕೇತರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಬೇಕು; ತಂಬಾಕು ಉತ್ಪನ್ನಗಳ ಮಾರಾಟದ ಆವರಣದಲ್ಲಿ ತಂಬಾಕು ಪರವಾನಗಿ ಎದ್ದು ಕಾಣುವಂತೆ ಪ್ರದರ್ಶಿಸಬೇಕು; ನಿಬಂಧನೆಗಳು ಮತ್ತು ಷರತ್ತುಗಳ ಉಲ್ಲಂಘನೆಗೆ ಹಂತ ಹಂತವಾಗಿ ದಂಡ ವಿಧಿಸುವುದು, ಪರವಾನಗಿ ಅಮಾನತುಗೊಳಿಸುವುದು ಮತ್ತು ಅಂತಿಮವಾಗಿ ಪರವಾನಗಿ ರದ್ದುಗೊಳಿಸುವ ಮೂಲಕ ಕ್ರಮಕೈಗೊಳ್ಳಬೇಕು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಭಾಗವಾದ ರಾಜ್ಯ ತಂಬಾಕು ನಿಯಂತ್ರಣ ಕೋಶದ (ಎಸ್ಟಿಸಿಸಿ) ಉಪನಿರ್ದೇಶಕರಾದ ಡಾ. ಸೆಲ್ವರಾಜನ್, “ವರದಿಯಲ್ಲಿ ಮುಖ್ಯವಾಗಿ ಉಲ್ಲೇಖಿಸಿರುವಂತೆ, ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳು ಸುಲಭವಾಗಿ ಸಿಗುವುದನ್ನು ತಡೆಯಲು ಮತ್ತು ಮಾರಾಟವನ್ನು ನಿಯಂತ್ರಿಸಲು, ಮಾರಾಟಗಾರರ ಪರವಾನಗಿ ಅತ್ಯಗತ್ಯವಾಗಿದೆ. ಸಾರ್ವಜನಿಕರಿಂದಲೂ ಇದಕ್ಕೆ ವ್ಯಾಪಕ ಬೆಂಬಲವಿದ್ದು, ನೂರಾರು ಮಕ್ಕಳು, ಪೋಷಕರು ಮತ್ತು ಶಿಕ್ಷಕರು ಬೆಂಬಲ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಪತ್ರಗಳನ್ನು ಬರೆದಿದ್ದಾರೆ” ಎಂದರು.
ಮೈಸೂರಿನ ತಂಬಾಕು ವಿರೋಧಿ ವೇದಿಕೆಯ ಸಂಚಾಲಕರಾದ ಶ್ರೀ ವಸಂತ್ಕುಮಾರ್ ಮೈಸೂರಮಠ್, “ಜೀವನವಿಡಿ ದುಃಖ ಮತ್ತು ಸಂಕಟದಿಂದ ಯುವಕರು/ಮಕ್ಕಳನ್ನು ರಕ್ಷಿಸಲು ತಂಬಾಕು ಉತ್ಪನ್ನಗಳು ಅವರಿಗೆ ಸಿಗದಂತೆ ಮಾಡುವುದು ಅನಿವಾರ್ಯವಾಗಿದೆ. ವಿಶೇಷವಾಗಿ, ಈ ಸವಾಲಿನ ಸಂದರ್ಭದಲ್ಲಿ, ಭಾರತದಲ್ಲಿ ತಂಬಾಕು ಎಂಬ ಪೀಡೆಯನ್ನು ತಡೆಯಲು ಈ ವ್ಯಸನಕಾರಿ ಉತ್ಪನ್ನಗಳ ಮಾರಾಟ, ಪ್ರಚಾರ ಮತ್ತು ಬಳಕೆಯನ್ನು ನಿಯಂತ್ರಿಸುವುದು ಅತ್ಯಂತ ನಿರ್ಣಾಯಕವಾಗಿದೆ.
ಅಧಿಕೃತವಾಗಿ ಪರವಾನಗಿ ಪಡೆದ ಅಂಗಡಿಗಳು/ಮಾರಾಟಗಾರರ ಮೂಲಕ ತಂಬಾಕು ಉತ್ಪನ್ನಗಳ ಮಾರಾಟದಿಂದ ಜನರ ಆರೋಗ್ಯ ಹದಗೆಡುವುದನ್ನುತಪ್ಪಿಸಿದಂತಾಗುತ್ತದೆ ಮತ್ತುಸರ್ಕಾರದ ಮೂಲ ಕರ್ತವ್ಯವಾದ ಸಾರ್ವಜನಿಕ ಆರೋಗ್ಯ ಸುಧಾರಣೆ, ಸ್ವಾಸ್ಥ್ಯ ಹಾಗು ಯೋಗಕ್ಷೇಮ ರಕ್ಷಣೆಯನ್ನೂ ಮಾಡಿದಂತಾಗುತ್ತದೆ,” ಎಂದು ಅಭಿಪ್ರಾಯಪಟ್ಟರು.
2017ರ ಸೆಪ್ಟೆಂಬರ್ನಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಕ್ಕಳು ತಂಬಾಕು ಉತ್ಪನ್ನಗಳಿಗೆ ಒಡ್ಡಿಕೊಳ್ಳುವುದರಿಂದ ರಕ್ಷಿಸುವಂತೆ ಪುರಸಭೆ/ಸ್ಥಳೀಯ ಪ್ರಾಧಿಕಾರಗಳಿಗೆ ಸೂಚಿಸಿತ್ತು. ಇದಕ್ಕಾಗಿ ವ್ಯವಸ್ಥೆಯೊಂದನ್ನು ಅಭಿವೃದ್ಧಿಪಡಿಸಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಚಿಲ್ಲರೆ ಅಂಗಡಿಗಳಿಗೆ ಅನುಮತಿ ನೀಡುವುದರೊಂದಿಗೆ ಅಲ್ಲಿ ಮಿಠಾಯಿ, ಚಿಪ್ಸ್, ಬಿಸ್ಕತ್ತು, ತಂಪು ಪಾನೀಯ, ಇತ್ಯಾದಿ ತಂಬಾಕೇತರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಖಚಿತಪಡಿಸಿಕೊಳ್ಳಲು ಸೂಚಿಸಿತ್ತು.
ಇದರನ್ವಯ, ಅಯೋಧ್ಯೆ, ಲಕ್ನೋ, ಜೈಪುರ, ರಾಂಚಿ, ಪಾಟ್ನಾ, ಹೌರಾ, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಗತ್ಯ ಆದೇಶ ಹೊರಡಿಸಿ ನಶ್ಯ, ಸಿಗಾರ್, ಸಿಗರೇಟ್ ಮತ್ತು ಬೀಡಿ ಸೇರಿದಂತೆ ಎಲ್ಲ ರೀತಿಯ ತಂಬಾಕಿನ ಸಂಗ್ರಹ, ಪ್ಯಾಕಿಂಗ್, ಶುದ್ಧೀಕರಣ ಸೇರಿದಂತೆ ತಂಬಾಕಿನ ಉತ್ಪಾದನೆಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ಪರವಾನಗಿ ಕಡ್ಡಾಯಗೊಳಿಸಿವೆ.
ತಂಬಾಕು ಬಳಕೆದಾರರ ಪಟ್ಟಿಯಲ್ಲಿ ಜಾಗತಿಕವಾಗಿ ಭಾರತ ಎರಡನೇ ಸ್ಥಾನದಲ್ಲಿದೆ (268 ಮಿಲಿಯನ್ ಅಥವಾ ದೇಶದ ಶೇಕಡಾ 28.6 % ವಯಸ್ಕರು). ಇದರಲ್ಲಿ ಪ್ರತಿವರ್ಷ 12 ಲಕ್ಷ ಮಂದಿ ತಂಬಾಕು ಸಂಬಂಧಿತ ಖಾಯಿಲೆಗಳಿಂದ ಮೃತಪಡುತಿದ್ದಾರೆ. ಧೂಮಪಾನದಿಂದಾಗಿ 10 ಲಕ್ಷ ಜನ ಮರಣ ಹೊಂದುತ್ತಿದ್ದರೆ, ಎರಡು ಲಕ್ಷಕ್ಕೂ ಹೆಚ್ಚು ಮಂದಿ ಧೂಮಪಾನಕ್ಕೆ ಒಡ್ಡಿಕೊಂಡು (ಸೆಕೆಂಡ್ ಹ್ಯಾಂಡ್ ಸ್ಮೋಕಿಂಗ್) ಸಾವನ್ನಪ್ಪುತ್ತಿದ್ದಾರೆ.
ಅಲ್ಲದೆ, 35,000ಕ್ಕೂ ಹೆಚ್ಚು ಜನ ಹೊಗೆರಹಿತ ತಂಬಾಕು ಬಳಕೆಯಿಂದ ಅಸುನೀಗುತ್ತಿದ್ದಾರೆ. ತಂಬಾಕು ಬಳಕೆ ಭಾರತದಲ್ಲಿನ ಶೇಕಡಾ 27 % ಎಲ್ಲ ವಿಧದ ಕ್ಯಾನ್ಸರ್ ಗಳಿಗೆ ಕಾರಣ. ತಂಬಾಕು ಸಂಬಂದಿತ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಪ್ರತಿವರ್ಷ 1,82,000 ಕೋಟಿ ರೂಪಾಯಿಗಳು ವ್ಯಯವಾಗುತ್ತಿದ್ದು, ಇದು ಭಾರತದ ಜಿಡಿಪಿಯ ಶೇಕಡಾ 1.8% ರಷ್ಟಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days ago
‘ಪ್ರೀತಿಯಲ್ಲಿ ಗೆದ್ದವ ಚುನಾವಣೆಯಲ್ಲಿ ಗೆದ್ದು ಗದ್ದುಗೆಯೇರಿದ’..!
-
ಭಾವ ಭೈರಾಗಿ6 days ago
ಕರುಣಾಳು ಅವನು, ಅವನು ನನ್ನವನು..!
-
ದಿನದ ಸುದ್ದಿ6 days ago
ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!
-
ಲೈಫ್ ಸ್ಟೈಲ್6 days ago
ಮೂತ್ರದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿಡುತ್ತೆ ಈ ಸೀಮೆ ಬದನೆಕಾಯಿ..!
-
ದಿನದ ಸುದ್ದಿ6 days ago
ಬಡವರನ್ನು ಸಬಲೀಕರಣಗೊಳಿಸಲು ಉಚಿತ ಅನಿಲ ಸಂಪರ್ಕ ನೀಡಿದ್ದೇವೆ : ಪ್ರಧಾನಿ ಮೋದಿ
-
ಕ್ರೀಡೆ6 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್6 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ಭಾವ ಭೈರಾಗಿ6 days ago
ಕವಿತೆ | ಅವಳು