ದಿನದ ಸುದ್ದಿ
ಮಳೆ ವಿವರ
ಸುದ್ದಿದಿನ ಡೆಸ್ಕ್ : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆ, ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಭಾಗಮಂಡಲದಲ್ಲಿ ಅತಿ ಹೆಚ್ಚು 8 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹಿರೆ ಕೆರೂರಿನಲ್ಲಿ 6, ತುರುವೆಕೆರೆ, ಮಾಗಡಿ, ಹೆಸರುಘಟ್ಟದಲ್ಲಿ ತಲಾ 5, ಬೆಂಗಳೂರು ನಗರ, ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತಲಾ 4 ಸೆಂಟಿ ಮೀಟರ್ ಮಳೆಯಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗುಡಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ 33, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಂಭವವಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243