ದಿನದ ಸುದ್ದಿ
ಕೊಡಗಿನಲ್ಲಿ ಮಳೆ ಆರ್ಭಟ : KRS ಗೆ ಫುಲ್ ನೀರು !
ಸುದ್ದಿದಿನ ಡೆಸ್ಕ್: ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್. ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ.
ಇದರಿಂದ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಹೀಗಾಗಿ ನದಿಯಂಚಿನ ಪ್ರದೇಶಗಳ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಬಸವರಾಜೇಗೌಡ ಪ್ರಕಟಣೆಯಲ್ಲಿ ಕೇರಿದ್ದಾರೆ.
ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಾರಿ ಮಳೆಯಿಂದ ತುಂಗಭದ್ರಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ.