ದಿನದ ಸುದ್ದಿ
ಭಾರತದ ರಾಜಕಾರಣದಲ್ಲಿ ಯುವಕರ ಪಾತ್ರ ಮೇರು ಶಿಖರ..!
- ಶೈಲಜಾ ಸಿ, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ
ಇತ್ತೀಚಿನ ದಿನಗಳಲ್ಲಿ ರಾಜಕೀಯ ಅಂದಾಕ್ಷಣ ನಮ್ಮ ಮನದಲ್ಲಿ ಒಂದು ಸಂಚಲನ ಮೂಡುವುದು. ಅಟ್ ದಿ ಸೆಮ್ ಟೈಮ್ ಗೊಂದಲವು ಮೂಡುವುದು. ಅದೇನಂದರೇ, ಯುವಕರು ರಾಜಕೀಯ ಪ್ರವೇಶ ಮಾಡಬೇಕೋ.. ಬೇಡವೋ.. ಅನ್ನುವ ಆಯ್ಕೆ ನಮ್ಮ ಮುಂದೆ ಹಾದು ಹೋಗುವುದು ಖಂಡಿತ. ಕಾರಣ ಭಾರತದ ರಾಜಕಾರಣವನ್ನ ಜಡ್ಜ್ ಮಾಡವುದು ತುಂಬಾ ಕಠಿಣವಾಗುತ್ತದೆ. ಜಗತ್ತಿನ ಹಲವು ದೇಶಗಳ ರಾಜಕಾರಣ ಒಂದೆಡೆಯಿಂದ ಆದರೆ, ಭಾರತದ ರಾಜಕಾರಣವೇ ಬೇರೆಯಾಗಿದೆ.
ಯಾಕೆಂದರೆ ನಾವು ಇಲ್ಲಿನ ರಾಜಕಾರಣಿಗಳಲ್ಲಿ ದಕ್ಷತೆಯಿಂದ ಜನ ಸಮೂಹಗಳಿಗೆ ಏನಾದರು ಮಾಡಲು ತುಡಿತ ಹೊಂದಿರುವವರು ಇದ್ದಾರೆ. ಅದೇ ರೀತಿಯಲ್ಲಿ ಭ್ರಷ್ಟರು ಇದ್ದಾರೆ. ಅಷ್ಟೇ ಅಲ್ಲದೆ ಇತ್ತೀಚಿನ ದಿನಗಳಲ್ಲಿ ಪುಂಡರು ಕೂಡ ರಾಜಕೀಯಕ್ಕೆ ಲಗ್ಗೆ ಇಟ್ಟಿರುವುದು ನಮ್ಮ ಕಣ್ಣ ಮುಂದಿದೆ. ಈ ಕೆಲವೇ ಕೆಲವು ಕಾರಣಗಳಿಂದ ನಮ್ಮ ಯುವಕರು ಆದಂತ ಯುವಕ-ಯುವತಿಯರು ಈ ಕ್ಷೇತ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ.
ಆದರೆ, ನಮ್ಮ ಯುವಕರು ರಾಜಕೀಯ ಪ್ರವೇಶ ಮಾಡಬೇಕು ಎಂಬುದು ನನ್ನ ಬಯಕೆ. ಯಾಕೆಂದರೆ ಭಾರತ (ರಾಷ್ಟ್ರದಂತಹ) ನಿರ್ಮಾಣದಲ್ಲಿ ರಾಜಕೀಯ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ನಗರದಲ್ಲಿ ಒಂದು ಸಣ್ಣ ಗ್ರಂಥಾಲಯದಿಂದ ದೊಡ್ಡ ದೊಡ್ಡ ಕಾಮಗಾರಿಗಳಿಗೆ ಅಲ್ಲಿನ ಸ್ಥಳೀಯ ನಾಯಕರ ಪ್ರಭಾವ ಮತ್ತು ಸತತ ಪ್ರಯತ್ನ ಬಹಳ ಅತ್ಯವಶ್ಯಕವಾಗಲಿದೆ. ಆದ್ದರಿಂದ ನಮ್ಮ ಯುವಕರು ಈ ಮೂಲಕ ಭಾರತದ ಏಳಿಗೆಗೆ ಪಾತ್ರರಾಗಬೇಕು. ನಾವು ರಾಜಕೀಯ ಪ್ರವೇಶ ಮಾಡದಿದ್ದರೆ ನಮಗೆ ನಷ್ಟ ಹೊರತು ಬೇರೆ ಯಾರಿಗೂ ಅಲ್ಲ. ಜ್ಞಾನ ಜಗತ್ತನ್ನು ಆಳುತ್ತದೆ ಎಂಬುದು ನೂರಕ್ಕೆ ನೂರು ಸತ್ಯ.
ಆದರೆ ನಮ್ಮ ಭಾರತವನ್ನು ರಾಜಕೀಯ ಆಳುತ್ತದೆ ಎನ್ನುತ್ತೇನೆ. ಕಾರಣ ನೀವು ಎಂಜಿನಿಯರ್ ಆದರೆ, ಹೆಚ್ಚೆಂದರೆ ನಿಮ್ಮನ್ನ ಪ್ರಧಾನ ಮಂತ್ರಿಯ ಟ್ವಿಟರ್ ಆ್ಯಂಡಲ್ ಮಾಡಲು ನೇಮಿಸಿ ಕೊಳ್ಳುತ್ತಾರೆ , ನೀವು ಐಎಎಸ್, ಐಪಿಎಸ್ ಮುಂತಾದ ಪರೀಕ್ಷೆಯಲ್ಲಿ ಅರ್ಹತೆಯನ್ನು ದಟ್ಟಿದರೆ ಇಂಥವರನ್ನು ಹೆಚ್ಚೆಂದರೆ ಮಂತ್ರಿಗಳ ಪಿಎಸ್ ಕೆಲಸಕ್ಕೆ ನೇಮಕ ಮಾಡಿಕೊಳ್ಳುತ್ತಾರೆ. ನೀವು ದೊಡ್ಡ ಉದ್ಯಮಿ ಆದರೆ, ರಾಜಕಾರಣಿಗಳು ನಿಮ್ಮ ಹೆಗಲ ಮೇಲೆ ಕೈ ಹಾಕಿ ಫೋಟೋಗಳಲ್ಲಿ ನೀಡಬಹುದು.
ಭಾರತ ಭಾಗ್ಯವಿಧಾತ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರು ಇಡೀ ಜಗತ್ತಿನಲ್ಲೇ ಅತಿ ಉಪಯುಕ್ತವಾದ ಜನ ಸಮೂಹಗಳಿಗೆ ಅತ್ಯಂತ ಪ್ರರೇಣೆಯಿಂದ ಇಂದಿಗೂ ಕೂಡ ನಾವೆಲ್ಲರೂ ಸಂವಿಧಾನದಿಂದ ಭಾರತದ ಪ್ರಜೆಗಳಿಗೆ ಎಲ್ಲ ರಂಗಗಳಲ್ಲಿ ಮುನ್ನೆಲ್ಲೆ ಬರಲು ಸಹಾಯಕವಾಗಿದೆ.
ಅದೇ ರೀತಿಯ ಹಣವಂತರು, ಸ್ಥಿತಿವಂತರು ಅಲ್ಲದ ಸಾಮಾನ್ಯ ವ್ಯಕ್ತಿಯು ಕೂಡ ನಮ್ಮ ದೇಶದಲ್ಲಿ ಅತ್ಯುನ್ನತ ಸ್ಥಾನಕ್ಕೆ ಏರುವ ಅವಕಾಶ ನೀಡಿದೆ. ಇದಕ್ಕೆ ಮುಖ್ಯ ಕಾರಣವೇ ಯುವ ಶಕ್ತಿಯಾಗಿದೆ.
ಇಂದಿನ ಯುವ ಪೀಳಿಗೆಯು ಪ್ರಸ್ತುತ ರಾಜಕಾರಣದಲ್ಲಿ ಪಾಲ್ಗೊಂಡು ನಮ್ಮ ಪೂರ್ವಜರಾದ ಬಾಬಾಸಾಹೇವ್ ಡಾ. ಬಿ.ಆರ್. ಅಂಬೇಡ್ಕರ್ ರವರು, ದಾದಾಸಾಹೇಬ್ ಕಾನ್ಷೀರಾಮ್, ಬುದ್ಧ, ಬಸವಣ್ಣ, ಜ್ಯೋತಿ ಭಾ ಫುಲೆ, ಸಾವಿತ್ರಿ ಭಾ ಫುಲೆ, ನಾರಾಯಣ್ ಗುರು, ಎಂ.ಕೆ. ಗಾಂಧಿ ಹಾಗೆಯೇ ಇನ್ನು ಹಲವಾರು ಮುಂತಾದ ಮಹಾನ್ ಸಾಧಕರಿಂದ ನಮ್ಮ ಕನಸಿನ ಭಾರತ ನಿರ್ಮಾಣ ಮಾಡುವಲ್ಲಿ ಯಶಸ್ವಿ ಸಾಧಿಸಬೇಕು. ಎಂಬುದು ಪ್ರತಿಯೊಬ್ಬರ ಮಹಾನ್ ಹಂಬಲವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.



