ಕ್ರೀಡೆ

ರಾಜಸ್ಥಾನ ರಾಯಲ್ಸ್ ಕ್ಯಾಪ್ಟನ್ ಸಂಜು ಸ್ಯಾಮ್ಸನ್‍ಗೆ 24 ಲಕ್ಷ ದಂಡ

Published

on

ಸುದ್ದಿದಿನ,ದುಬೈ: ಐಪಿಎಲ್ ನ ರಾಜಸ್ಥಾನ ರಾಯಲ್ಸ್ ತಂಡದ ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಅವರಿಗೆ 24 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ.

ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್ ಮೇಲೆ ದಂಡವನ್ನು ಹೇರಲಾಗಿದೆ. 2ನೇ ಬಾರಿ ರಾಜಸ್ಥಾನ ತಂಡ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 24 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ.

ಸಂಜು ಸ್ಯಾಮ್ಸನ್ ಅಲ್ಲದೇ ಆಡಿದ 11 ಮಂದಿ ಆಟಗಾರರಿಗೂ ದಂಡ ವಿಧಿಸಲಾಗಿದೆ. ಪ್ರತಿಯೊಬ್ಬರಿಗೂ 6 ಲಕ್ಷ ಅಥವಾ ಪಂದ್ಯದ ವೈಯಕ್ತಿಕ ಶುಲ್ಕದ ಶೇ.25 ರಷ್ಟನ್ನು ದಂಡವಾಗಿ ಪಾವತಿಸಬೇಕು ಎಂದು ಐಪಿಎಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version