ದಿನದ ಸುದ್ದಿ

ಹೊಸವರ್ಷಕ್ಕೆ ರಾಘಣ್ಣನ ‘ರಾಜತಂತ್ರ’ ಬಿಡುಗಡೆ

Published

on

ಸುದ್ದಿದಿನ ಡೆಸ್ಕ್ : ವಿಶ್ವಂ ಡಿಜಿಟಲ್ ಮೀಡಿಯಾ ಪ್ರೈ ಲಿ ಲಾಂಛನದಲ್ಲಿ ಜೆ.ಎಂ.ಪ್ರಹ್ಲಾದ್, ವಿಜಯ್ ಭಾಸ್ಕರ್ ಹರಪನಹಳ್ಳಿ ಹಾಗೂ ಪಿ.ಆರ್.ಶ್ರೀಧರ್ ಅವರು ನಿರ್ಮಿಸಿರುವ, ರಾಜ್ಯ ಪ್ರಶಸ್ತಿ ವಿಜೇತ ನಟ ರಾಘವೇಂದ್ರ ರಾಜಕುಮಾರ್ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ರಾಜತಂತ್ರ ಚಿತ್ರ ಈ ವಾರ ಅಂದರೆ ಹೊಸವರ್ಷದ ಮೊದಲದಿನ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಜೆ.ಎಂ.ಪ್ರಹ್ಲಾದ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಾಹಿತ್ಯ ಬರೆದಿರುವ ಈ ಚಿತ್ರದ ನಿರ್ದೇಶಕರು ಪಿ.ವಿ.ಆರ್ ಸ್ವಾಮಿ ಗೂಗರದೊಡ್ಡಿ.
ಶ್ರೀಸುರೇಶ್ ಸಂಗೀತ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ನಾಗೇಶ್ ಸಂಕಲನ, ಚಂದನ್ ಕಲಾ ನಿರ್ದೇಶನ ಹಾಗೂ ವೈಲೆಂಟ್ ವೇಲು, ರಾಮ್ ದೇವ್, ಅಲ್ಟಿಮೆಟ್ ಶಿವು
ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ರಾಘವೇಂದ್ರ ರಾಜಕುಮಾರ್, ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಭವ್ಯ, ರಂಜನ್ ಹಾಸನ್, ಶಂಕರ್ ಅಶ್ವಥ್, ನೀನಾಸಂ ಅಶ್ವಥ್, ಮುನಿರಾಜು, ವಿಜಯಭಾಸ್ಕರ್, ಪ್ರತಾಪ್ ಸಿಂಹ ಅಗರ, ಶಿವಾನಂದ, ಪ್ರಕಾಶ್ ಕಾರಿಯಪ್ಪ, ವೆಂಕಟೇಶ್ ಪ್ರಸಾದ್, ಹೋಳಿ‌ ವೆಂಕಟೇಶ್, ಸ್ವಾತಿ ಅಂಬರೀಶ್, ವಲ್ಲಭ್, ಪ್ರವೀಣ್, ಉಮೇಶ್, ಕುಮಾರ್, ಕನ್ನಡ ಪ್ರೇಮ್, ಲಕ್ಷ್ಮಣ್, ಭೀಮ, ಆನಂದ್ ಪನ್ನೇದೊಡ್ಡಿ, ಹೇರಂಭ, ಸತೀಶ್ ಗೌಡ, ಮೀರಾ ಶ್ರೀ ಗೌಡ ಮುಂತಾದವರು ರಾಜತಂತ್ರ ದ ತಾರಾಬಳಗದಲ್ಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version