ದಿನದ ಸುದ್ದಿ
ಕರ್ನಾಟಕದ ‘ಬೆಳ್ಳಿ’ ಮಿಂಚು ರಾಜೀವ್ ಗಾಂಧೀ ಆರೋಗ್ಯ ವಿವಿ..!
- ಡಾ.ಕೆ.ಸುಧಾಕರ್,ವೈದ್ಯಕೀಯ ಶಿಕ್ಷಣ ಸಚಿವರು,ಕರ್ನಾಟಕ ಸರ್ಕಾರ
ಕರ್ನಾಟಕದ ಹೆಮ್ಮೆಯ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಶಿಕ್ಷಣ ಕೇಂದ್ರ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಇಂದು 25 ವರ್ಷ ತುಂಬುತ್ತಿದೆ. ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರಕ್ಕೆ ಕೊರೊನಾ ಸವಾಲಾಗಿರುವ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಒಂದು ವಿಶಿಷ್ಟ ಸಂದರ್ಭ.
ಕಾರಣ ಕೊರೊನಾ ವಿರುದ್ಧ ಕರ್ನಾಟಕ ರಾಜ್ಯ ಸಮರ ಸಾರಿ ಯಶಸ್ಸಿನ ಫಲ ಕಾಣಲು ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ ಪ್ರಮುಖ ಪಾತ್ರವಹಿಸಿದೆ. ಇಡೀ ರಾಷ್ಟ್ರಮಟ್ಟದಲ್ಲಿ ರಾಜೀವ್‍ಗಾಂಧೀ ಆರೋಗ್ಯ ವಿವಿಯ ಕೊರೊನಾ ಸಾಂಕ್ರಾಮಿಕ ರೋಗದ ಚಿಕಿತ್ಸೆ ಮತ್ತು ನಿಯಂತ್ರಣದ ಕಾರ್ಯವಿಧಾನಗಳು ಮೆಚ್ಚುಗೆಗೆ ಪಾತ್ರವಾಗಿವೆ.
ಇಂತಹ ಸವಾಲಿನ ಸಂದರ್ಭದಲ್ಲಿ ಪ್ರತಿಷ್ಠಿತ ಆರೋಗ್ಯ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರಗಳಿಗೆ ಸಾಟಿಯಿಲ್ಲದಂತೆ ಕಾರ್ಯನಿರ್ವಹಿಸುತ್ತಿರುವ ನಮ್ಮ ರಾಜೀವ್ ಗಾಂಧೀ ಆರೋಗ್ಯ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವಕ್ಕೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರೇ ಸಾಕ್ಷಿಯಾಗುತ್ತಿರುವುದು ಅವಿಸ್ಮರಣೀಯವೇ ಸರಿ.
1994ರ ಜೂನ್-1 ರಂದು ಕರ್ನಾಟಕ ವಿಜ್ಞಾನ ಕಾಯ್ದೆ ಅಡಿಯಲ್ಲಿ ಸ್ಥಾಪನೆಗೊಂಡ ಈ ವಿಶ್ವವಿದ್ಯಾಲಯದ 25 ವಸಂತಗಳ ಹೆಜ್ಜೆ ಗುರುತು ಅದ್ವಿತೀಯ. ಅಂದು ಬೆಂಗಳೂರಿನಲ್ಲಿ ಆರಂಭಗೊಂಡ ಈ ವಿಶ್ವ ವಿದ್ಯಾಲಯ ಬೆಂಗಳೂರು ಹೊರವಲಯದ ಭೀಮನಕುಪ್ಪೆಯಲ್ಲಿ ಮತ್ತಷ್ಟು ವಿಸ್ತರಣೆಗೊಳ್ಳುತ್ತಿದೆ. 50 ಎಕರೆಗೂ ಮೀರಿದ ಭೂ ಪ್ರದೇಶದಲ್ಲಿ ವಿಶಾಲ ಕ್ಯಾಂಪಸ್ ನಿರ್ಮಾಣಕ್ಕೆ ಜೂನ್-1 ರಂದು ಹಸಿರು ನಿಶಾನೆ ನೀಡಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯಪಾಲ ವಜುಭಾಯಿವಾಲಾ ಅವರು, ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವರಾಗಿ ನನ್ನ ಅವಧಿಯಲ್ಲಿ ಬೆಳ್ಳಿ ಮಹೋತ್ಸವ ನಡೆಯುತ್ತಿರುವುದು ಮತ್ತು ಹೊಸ ಕ್ಯಾಂಪಸ್ ನಿರ್ಮಾಣಕ್ಕೆ ಚಾಲನೆ ಸಿಗುತ್ತಿರುವುದು ನನ್ನ ಭಾಗ್ಯವೇ ಸರಿ.
ಪ್ರತಿವರ್ಷ 65 ಸಾವಿರ ವಿದ್ಯಾರ್ಥಿಗಳನ್ನು ರಾಜೀವ್‍ಗಾಂಧೀ ವಿವಿ ದಾಖಲಿಸಿಕೊಳ್ಳುತ್ತಿದೆ.ವಿವಿಯ ಅಡಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳು ಸೇರಿದಂತೆ 2.50,000 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 52 ಮೆಡಿಕಲ್ ಕಾಲೇಜುಗಳಲ್ಲಿ 6200 ಪದವಿ, 43 ಕಾಲೇಜುಗಳ 2506 ಸ್ನಾತಕೋತ್ತರ ವಿದ್ಯಾರ್ಥಿಗಳು, ದಂತ ವೈದ್ಯಕೀಯದಲ್ಲಿ 2780ಪದವಿ, 913 ಪಿಜಿ, ಆಯುರ್ವೇದಲ್ಲಿ 4405 ಪದವಿ, 985 ಸ್ನಾತಕ್ಕೋತ್ತರ ವಿದ್ಯಾರ್ಥಿಗಳು, ಹೋಮಿಯೋಪತಿಯಲ್ಲಿ 850 ಪದವಿ, 121 ಸ್ನಾತಕೋತ್ತರ, ಯುನಾನಿಯಲ್ಲಿ 290ಪದವಿ, 54 ಸ್ನಾತಕೋತ್ತರ, ನ್ಯಾಚುರೋಪತಿ ಮತ್ತು ಯೋಗದಲ್ಲಿ 340 ಪದವಿ, 35 ಸ್ನಾತಕೋತ್ತರ, ನರ್ಸಿಂಗ್‍ನಲ್ಲಿ 19355 ಪದವಿ, 3983ಸ್ನಾತಕೋತ್ತರ, ಬಿಎಸ್ಸಿ ನರ್ಸಿಂಗ್‍ನಲ್ಲಿ 9040 ಪದವಿ ವಿದ್ಯಾರ್ಥಿಗಳು, ಫಿಜಿಯೋಥೆರಫಿಯಲ್ಲಿ 2150 ಪದವಿ, 468 ಸ್ನಾತಕೋತ್ತರ, ಪ್ಯಾರಾಮೆಡಿಕಲ್‍ನಲ್ಲಿ 2920 ಪದವಿ, 468 ಸ್ನಾತಕೋತ್ತರ, ಫಾರ್ಮಸಿಯಲ್ಲಿ 3930ಪದವಿ ಮತ್ತು 1724 ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.
ಉತಾಹ್ ವಿವಿಯೊಂದಿಗೆ ರಾಜೀವ್ ಗಾಂಧಿ ವಿವಿ ಆರಂಭಿಸಿದ ಜೀವರಕ್ಷ ಕಾರ್ಯಕ್ರಮವು ಜೀವ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸಲು ವಿದ್ಯಾರ್ಥಿಗಳಿಗೆ ಅನುಕೂಲಕರ ಕಾರ್ಯವಾಗಿದೆ. 2015ರಲ್ಲಿ ವಿವಿ ಆರಂಭಿಸಿದ ಸಂಶೋಧನೆ ವಿಭಾಗ ಇಂದು ವೈದ್ಯಕೀಯ ಸಂಶೋಧನಾ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದೆ. ಐಐಎಸ್‍ಸಿ, ಎನ್‍ಸಿಬಿಎಸ್, ಸಿಹೆಚ್‍ಜಿ ಮತ್ತು ಜೆಎನ್‍ಸಿಎಎಸ್ ಆರ್ ಜೊತೆ ಮಾಡಿಕೊಂಡ ಒಪ್ಪಂದಗಳಿಂದಾಗಿ ಸಂಶೋಧನೆಯಲ್ಲಿ ಮಹತ್ತರ ಸಾಧನೆಗೆ ಕಾರಣವಾಗಿದೆ.
ನ್ಯಾನೋ ಟೆಕ್ನಾಲಜಿ ಮತ್ತು ಮಾಲೇಕ್ಯೂಲರ್ ಬಯಾಲಜಿ ಕ್ಷೇತ್ರದಲ್ಲಿ ವಿವಿಯ ಸಂಶೋಧನಾ ವಿಭಾಗ ವಿನೂತನ ಹೆಜ್ಜೆಯನ್ನೇ ಇಟ್ಟಿದೆ. ವಿವಿಯ 3000ಕ್ಕೂ ಹೆಚ್ಚು ಬೋಧಕರಿಗೆ ಸಂಶೋಧನಾ ವಿಧಾನದ ತರಬೇತಿ ಶಿಬಿರಗಳನ್ನು ನಡೆಸಲಾಗಿದೆ. ಬಡವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನದ ಮೂಲಕ ವಿವಿ ಪ್ರೋತ್ಸಾಹಿಸುತ್ತಿದೆ.
ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ತಂತ್ರಜ್ಞಾನಗಳ ಬಗ್ಗೆ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ಅಧ್ಯಾಪಕರಿಗೆ ವಾರ್ಷಿಕ ತರಬೇತಿಗಳನ್ನು ನೀಡಲಾಗಿದೆ. ಇಂತಹ ಅನೇಕಲ ಸುಧಾನರಣೆಗಳಿಂದಾಗಿಯೇ ರಾಜೀವ್ ಗಾಂಧೀ ಆರೋಗ್ಯ ವಿವಿ ಸರಿ ಸುಮಾರು 143 ಸಂಶೋಧನೆ ಅನುದಾನಗಳಿಗೆ 5.99 ಕೋಟಿ ರೂಗಳನ್ನು ವೆಚ್ಚ ಮಾಡಿದೆ.
ಪಾರದರ್ಶಕ ಆನ್‍ಲೈನ್ ಪರೀಕ್ಷೆ
ರಾಜೀವ್ ಗಾಂಧೀ ವಿಶ್ವವಿದ್ಯಾಲಯವು ತನ್ನ ಪರೀಕ್ಷ ಉಪ ಕ್ರಮಗಳಿಂದಲೇ ಇಡೀ ದೇಶಕ್ಕೆ ಮಾದರಿ ಎನ್ನಿಸಿದೆ. ಆನ್‍ಲೈನ್ ಪ್ರಶ್ನೆ ಪತ್ರಿಕೆ ನೀಡುವ ಮೂಲಕ ಪರೀಕ್ಷೆ ನಡೆಸಿ ಅಕ್ರಮಗಳಿಗೆ ಕಡಿವಾಣ ಹಾಕಿದೆ. ಪರೀಕ್ಷೆ ಆರಂಭವಾಗುವ 30 ನಿಮಿಷಗಳ ಮುನ್ನ ಆನ್‍ಲೈನ್ ಮೂಲಕ ನಿರ್ಧಿಷ್ಟ ಪಾಸ್‍ವರ್ಡ್ ಮೂಲಕ ಓಪನ್ ಆಗುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗೆ ಕಳುಹಿಸಲಾಗುತ್ತದೆ. ಆನ್‍ಲೈನ್ ಪ್ರಶ್ನೆ ಪತ್ರಿಕೆಯನ್ನು ಪರಿಚಯಿಸಿದ ಮೊದಲ ಆರೋಗ್ಯ ವಿವಿ ಎನ್ನಿಸಿಕೊಂಡಿದೆ ರಾಜೀವ್ ಗಾಂಧೀ ಆರೋಗ್ಯ ವಿವಿ.
ಉತ್ತರ ಪತ್ರಿಕೆಗಳನ್ನು ಡಿಜಿಟಲ್ ವ್ಯವಸ್ಥೆ ಮೂಲಕ ಮೌಲ್ಯಮಾಪನ ಮಾಡಲಾಗುತ್ತಿದೆ. ಇದು ಮೌಲ್ಯಮಾಪನ ಪ್ರಕ್ರಿಯೆಯ ಅವಧಿಯನ್ನು ಕಡಿಮೆ ಮಾಡಿದೆ. ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಶೋಧನಾ ಪ್ರಬಂಧಗಳನ್ನು ಆನ್‍ಲೈನ್ ಮೂಲಕ ಮೌಲ್ಯಮಾಪನ ಮಾಡುವ ಪದ್ಧತಿ, ದಾಖಲೆಗಳ ಪರಿಶೀಲನೆ ಮತ್ತು ನೀಡುವ ವಿಧಾನ ಡಿಜಿಟಲೀಕರಣ ಪರೀಕ್ಷೆಗಳನ್ನು ವೆಬ್‍ಸ್ಟ್ರೀಮಿಂಗ್ ಮಾಡುವುದು, ಪಾರದರ್ಶಕತೆಗಾಗಿ ಮಾಹಿತಿ ತಂತ್ರಜ್ಞಾನ ಬಳಸಿ ಡಿಜಿಟಲ್ ವ್ಯವಸ್ಥೆಗೆ ತಂದಿರುವುದು ಮತ್ತೊಂದು ಸುಧಾರಣೆ. ಹೀಗೆ ಹಲವು ಶೈಕ್ಷಣೀಕ ಸುಧಾರಣೆಗಳ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿರುವ ರಾಜೀವ್ ಗಾಂಧೀ ಆರೋಗ್ಯ ವಿವಿಯು ಇದೀಗ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಪರಿಣಾಮಕಾರಿಯಾದ ಪಾತ್ರವನ್ನು ವಹಿಸುತ್
ದೇಶಕ್ಕೆ ದೇಶವೇ ಕೊರೊನಾ ಆತಂಕಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕರ್ನಾಟಕದ ಪಾಲಿಗೆ ಭರವಸೆ ಮೂಡಿಸಿದ್ದು ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ. ಕೊರೊನಾ ಚಿಕಿತ್ಸೆಗಾಗಿ ಮೊದಲು ವಿಭಾಗ ಆರಂಭಗೊಂಡಿದ್ದೇ ರಾಜೀವ್‍ಗಾಂಧೀ ವಿವಿಯಲ್ಲಿ. ದಾಖಲಾದ ಸೋಂಕಿತರನ್ನು ಬಹುಬೇಗ ಗುಣಮುಖರನ್ನಾಗಿಸುವಲ್ಲಿ ದೇಶದ ಇತರೆ ಆಸ್ಪತ್ರೆಗಳಿಗೆ ವೈದ್ಯಕೀಯ ಸಂಸ್ಥೆಗಳಿಗೆ ಹೋಲಿಸಿದರೆ ರಾಜೀವ್ ಗಾಂಧೀ ವಿವಿಯ ಸಾಧನೆ ಮೆಚ್ಚುವಂತಹದ್ದು.
ಇದಿಷ್ಟೇ ಅಲ್ಲದೇ ಕೊರೊನಾ ನಿಯಂತ್ರಣದಲ್ಲಿ ಭಾಗಿಯಾದ 60,607 ವೈದ್ಯರು, 40,478 ನರ್ಸ್‍ಗಳು, 38,149 ಅನುದಾನಿತ ಆರೋಗ್ಯ ತಜ್ಞರು, 31,127 ಎನ್‍ಎಸ್‍ಎಸ್, ಪೊಲೀಸ್ ಮತ್ತು ಇತರೆ ಸಿಬ್ಬಂದಿಗೆ ಮೇ 30ರ ವರೆಗೆ ರಾಜೀವ್ ಗಾಂಧೀ ವಿವಿಯ ಮೂಲಕ ತರಬೇತಿ ನೀಡಲಾಗಿದೆ. ಒಟ್ಟಾರೆ 1,73,361 ಮಂದಿಗೆ ಕೊರೊನಾ ಚಿಕಿತ್ಸೆ ನಿಯಂತ್ರಣ ಸೋಂಕು ತಡೆ, ಸೋಂಕಿನಿಂದ ಪಾರಾಗುವುದು ಹೀಗೆ ನಾನಾ ರೀತಿಯ ತರಬೇತಿಗಳನ್ನ ವಿಶ್ವವಿದ್ಯಾನಿಲಯದ ತಜ್ಞರು ನೀಡಿದ್ದಾರೆ.
ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನನಗಳ ವಿಶ್ವವಿದ್ಯಾಲಯವು ನೀಡಿರುವ ಕೊಡುಗೆ ಅಪಾರ. ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಸಚ್ಚಿದಾನಂದ ಅವರ ನೇತೃತ್ವದಲ್ಲಿ ಇಡೀ ವಿವಿಯ ಬೋಧಕ ಮತ್ತು ಬೋಧಕೇತರ ಸಮುದಾಯ ವಿವಿಯನ್ನು ಉತ್ತುಂಗಕ್ಕೆ ತರುವಲ್ಲಿ ಅವಿರತ ಪ್ರಯತ್ನ ಮಾಡುತ್ತಿದೆ.
ಡಾ.ಎಸ್.ಕಾಂತ ಅವರ ಮುಂದಾಳತ್ವದಲ್ಲಿ 1994ರಲ್ಲಿ ಆರಂಭಗೊಂಡ ಈ ವಿವಿಯ ಅಡಿಯಲ್ಲಿ ಈಗ 700ಕ್ಕು ಹೆಚ್ಚು ವೈದ್ಯಕಯ ಶಿಕ್ಷಣ ಸಂಸ್ಥೆಗಳಿವೆ. 2018ರಲ್ಲಿ ಡೆಂಘಿ ರೋಗದ ನಿಯಂತ್ರಣಕ್ಕೆ ವಿವಿ ವತಿಯಿಂದ ಸಂಶೋಧನೆಯನ್ನು ನಡೆಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ವಿವಿಯು ಪ್ರಮುಖ ಪಾತ್ರ ವಹಿಸಿತ್ತು. ದೇಶದಲ್ಲೇ ಮೊದಲ ಡೇಂಘಿ ಕ್ಲೀನಿಕಲ್ ಸ್ಯಾಂಪಲ್ ಬ್ಯಾಂಕ್ ಸ್ಥಾಪಿಸಿದ ಕೀರ್ತಿ ರಾಜೀವ್ ಗಾಂಧೀ ವಿವಿಗೆ ಸಲ್ಲುತ್ತದೆ.
ಒಟ್ಟಾರೆ 217 ಕ್ಲೀನಿಕಲ್ ಟೀಚಿಂಗ್ ಸಾಮಥ್ರ್ಯ ಹೊಂದಿರುವ ವಿಶ್ವವಿದ್ಯಾನಿಲಯ ಸಾಕಷ್ಟು ಗುರಿ ಹೊಂದಿದೆ. ಭೀಮನಕುಪ್ಪೆಯಲ್ಲಿ ಸಂಶೋಧನಾ ವಿಭಾಗ ತೆರೆಯುವುದು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಬಳಗ ಹೆಚ್ಚು ವಿಜ್ಞಾನ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಉತ್ತೇಜಿಸುವುದು ಮತ್ತು ಸಂಶೋಧನೆ ನಡೆಸುವ ಪ್ರಕ್ರಿಯೆಗೆ ಪ್ರೋತ್ಸಾಹ ನೀಡುವ ಗುರಿಯನ್ನು ಹಾಕಿಕೊಂಡಿದೆ. ಈ ಬೆಳ್ಳಿ ಸಂಭ್ರಮದ ಸಂದರ್ಭದಲ್ಲಿ ರಾಜೀವ್ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಜಗತ್ತಿನ ಭೂಪಟದಲ್ಲಿ ಮಹತ್ತರ ಸ್ಥಾನಕ್ಕೆ ಕೊಂಡೊಯ್ಯುವ ಕಾರ್ಯದಲ್ಲಿ ನನ್ನದೂ ಕೂಡಾ ಚಿಕ್ಕ ಪಾತ್ರವಿದೆ ಎಂದು ಹೇಳಿಕೊಳ್ಳಲು ಹೆಮ್ಮೆ ಎನ್ನಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



