ರಾಜಕೀಯ
ರಾಜ್ಯಸಭಾ ಚುನಾವಣೆ; ಎಲ್ಲಾ ಆರು ಅಭ್ಯರ್ಥಿಗಳ ನಾಮಪತ್ರ ಕ್ರಮ ಬದ್ಧ : ಚುನಾವಣಾಧಿಕಾರಿ
ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗಾಗಿ ಒಟ್ಟು 6 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ಬಿಜೆಪಿಯಿಂದ ಹಾಲಿ ಸಚಿವೆ ನಿರ್ಮಲಾ ಸೀತಾರಾಮನ್, ಚಿತ್ರನಟ ಜಗ್ಗೇಶ್, ಲೆಹರ್‌ಸಿಂಗ್ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಕುಪೇಂದ್ರ ರೆಡ್ಡಿ ಉಮೇದುವಾರಿಕೆ ಸಲ್ಲಿಸಿದ್ದರು.
ಕಾಂಗ್ರೆಸ್ ಸೋಮವಾರದಂದು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಉಮೇದುವಾರಿಕೆ ಹಿಂಪಡೆಯಲು ಜೂನ್ 3 ಕೊನೆಯ ದಿನಾಂಕವಾಗಿದೆ.
ಜೂನ್ 10ರಂದು ಬೆಳಗ್ಗೆ 9 ರಿಂದ 4ಗಂಟೆವರೆಗೆ ಮತದಾನ ನಡೆಯಲಿದ್ದು, 5 ಗಂಟೆ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯ ವಿಧಾನಸಭೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದಿಂದ 130ಕಾಂಗ್ರೆಸ್ 69, ಜೆಡಿಎಸ್ 32, ಮೂವರು ಪಕ್ಷೇತರರು ಹಾಗೂ ಸಭಾಧ್ಯಕ್ಷರು ಒಂದು ಮತದಾನದ ಅರ್ಹತೆ ಹೊಂದಿರುವ ಸದಸ್ಯರಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243