ದಿನದ ಸುದ್ದಿ
ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿಯ ಮತ್ತೊರ್ವ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಕೂಡ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳ ಉಮೇದುವಾರಿಕೆ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದೆ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂನ್ 3ರಂದು ಕೊನೆಯ ದಿನವಾಗಿದೆ.
ಸುದ್ದಿದಿನ.ಕಾಂಗ್ರೆಸ್|ವಾಟ್ಸಾಪ್|9980346243