ದಿನದ ಸುದ್ದಿ

ರಾಮ-ಲಕ್ಷ್ಮಣನ ವಿಗ್ರಹಕ್ಕೆ ಮೀಸೆ ಬೇಕು ;  ಹಿಂದುತ್ವ ಪ್ರತಿಪಾದಕ ಸಂಭಾಜಿ ಬಿಡೆ

Published

on

ಸುದ್ದಿದಿನ,ಪುಣೆ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡುವ ರಾಮ-ಲಕ್ಷ್ಮಣನ ವಿಗ್ರಹಕ್ಕೆ ಮೀಸೆ ಬೇಕು ಎಂದು ಹಿಂದುತ್ವ ಪ್ರತಿಪಾದಕ ಸಂಭಾಜಿ ಭಿಡೆ ಆಗ್ರಹಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬುಧವಾರ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಈ ಸಂಬಂಧ ಈಗಾಗಲೇ ಶ್ರೀರಾಮಂದಿರ ಟ್ರಸ್ಟ್ ನ ಗೋವಿಂದಗಿರಿ ಜೀ ಮಹಾರಾಜ್ ಜೊತೆ ಮಾತನಾಡಿ, ನೀವು ಸ್ಥಾಪಿಸುವ ರಾಮ ಹಾಗೂ ಲಕ್ಷ್ಣಣ ಪ್ರತಿಮೆಗಳಿಗೆ ಮೀಸೆ ಇರಬೇಕು. ಒಂದು ವೇಳೆ ನೀವು ರಾಮ-ಲಕ್ಷ್ಮಣ ವಿಗ್ರಹಗಳಿಗೆ ಮೀಸೆ ಇಟ್ಟಿಲ್ಲವೆಂದರೆ, ನನ್ನಂತಹ ಭಕ್ತರಿಗೆ ದೇವಾಲಯ ನಿರ್ಮಿಸಿದರೂ ಪ್ರಯೋಜನವಿಲ್ಲದಂತಾಗುತ್ತದೆ ಎಂದಿದ್ದಾರೆ.

ಶ್ರೀರಾಮಮಂದಿರಕ್ಕೆ ಭೂಮಿಪೂಜೆ ಮಾಡುವ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಆಗಸ್ಟ್ 5ರಂದು ನಡೆಯುವ ಕಾರ್ಯವನ್ನು ದಸರಾ, ದೀಪಾವಳಿ ಹಬ್ಬಗಳಂತೆ ಆಚರಿಸೋಣ ಎಂದು ಇದೇ ವೇಳೆ ಭಿಡೆ ಕರೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version